ವಕೀಲರಿಗೆ ಜೀವವಿಮೆ, ಆರೋಗ್ಯವಿಮೆ ಸೌಲಭ್ಯ ಯೋಜನೆ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿರುವಂತೆಯೇ ರಾಜ್ಯದಲ್ಲಿಯೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಜೀವ ಲೆಕ್ಕಿಸದೆ ಕೆಲಸ ಮಾಡುತ್ತಿರುವ ವಕೀಲರಿಗೆ ವಿಮೆ ಸೌಲಭ್ಯ ಕಲ್ಪಿಸಲು ಕೇಂದ್ರ … Continued

ಬಿಬಿಸಿ ರೇಡಿಯೋ ಕಾರ್ಯಕ್ರಮದಲ್ಲಿ ಮೋದಿ ತಾಯಿಗೆ ಅವಹೇಳನ: ಟ್ವಿಟ್ಟರ್‌ನಲ್ಲಿ #BoycottBBC ಆರಂಭ

ಬಿಬಿಸಿ ಏಷ್ಯನ್ ನೆಟ್‌ವರ್ಕ್‌ನ ‘ಬಿಗ್ ಡಿಬೇಟ್’ ರೇಡಿಯೊ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ, ಕರೆ ಮಾಡಿದವರಲ್ಲಿ ಒಬ್ಬರು ಪ್ರಧಾನಿ ನರೇಂದ್ರ ಮೋದಿಯವರ ತಾಯಿಯ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಾರೆ. ಅದರ ಆಡಿಯೋ ಕ್ಲಿಪ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ಅನುಸರಿಸಿ ಬಿಜೆಪಿ ನಾಯಕರು ಹಾಗೂ ಅನೇಕರು ಟ್ವಟ್ವರ್‌ನಲ್ಲಿ ತಮ್ಮ ಅಸಮಾಧಾನವನ್ನು ದಾಖಲಿಸಿದ್ದಾರೆ. ‘ಬಿಗ್ ಡಿಬೇಟ್’ … Continued

ಕೊವಿಡ್‌ ಡೋಸ್‌ ಪಡೆಯಲು ಸಮಯ ಮಿತಿ ತೆಗೆದ ಕೇಂದ್ರ

ನವದೆಹಲಿ: ಕೋವಿಡ್-19 ಲಸಿಕೆ ಪಡೆಯಲು ಈವರೆಗೆ ಇದ್ದ ಸಮಯ ಮಿತಿಯನ್ನು ಕೇಂದ್ರ ಸರ್ಕಾರ ತೆಗೆದುಹಾಕಿದ್ದು, ಜನರಿಗೆ ಅನುಕೂಲವಾಗಲು ದಿನದ ಯಾವ ಸಮಯದಲ್ಲಾದರೂ ಲಿಸಿಕೆ ಪಡೆಯಬಹುದು ಎಂದು ಹೇಳಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್, ಸಾರ್ವಜನಿಕರು ಇನ್ನು ಮುಂದೆ ತಮಗೆ ಅನುಕೂಲವಾಗುವ ಸಮಯದಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು. ಪ್ರಧಾನಿ ಮೋದಿಯವರು … Continued

ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ ಕಶ್ಯಪ ಮನೆ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪದ ಅಡಿ ಐಟಿ ಅಧಿಕಾರಿಗಳು ಬುಧವಾರ ಬಾಲಿವುಡ್​ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್​ ಕಶ್ಯಪ್​​, ವಿಕ್ರಮಾದಿತ್ಯ ಮೋಟ್ವಾನೆ, ವಿಕಾಸ್​ ಬಹ್ಲ್​ ಹಾಗೂ ಮಧು ಮಾಂಟೇನಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ . ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಮುಂಬೈ ಹಾಗೂ ಪುಣೆಯ ೩೦ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಸಿನಿಮಾ … Continued

ಕಾಂಗ್ರೆಸ್‌ನ ಜನಧ್ವನಿ ಯಾತ್ರೆ ಆರಂಭ, ೧೦೦ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪೂರ್ವಭಾವಿಯಾಗಿ ಬುಧವಾರದಿಂದ ಜನಧ್ವನಿ ಯಾತ್ರೆಗೆ ಚಾಲನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ದೇವನಹಳ್ಳಿಯಲ್ಲಿ ಜನಧ್ವನಿ ಯಾತ್ರೆ ಆರಂಭಗೊಂಡಿದ್ದು, ಬೆಳಿಗ್ಗೆ ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ … Continued

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ: ದೂರು ನೀಡಿದ ದಿನೇಶ್‌ ಕಲ್ಹಳ್ಳಿಗೆ ಇಂದು ನೋಟಿಸ್‌?

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಬಯಲು ಮಾಡಿದ, ದೂರುದಾರ ದಿನೇಶ್‌ ಕಲ್ಲಹಳ್ಳಿಗೆ ಬುಧವಾರ ಸಂಜೆಯೊಳಗೆ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದಾರೆ. ಸಂತ್ರಸ್ತೆ ಬಗ್ಗೆ ದೂರುದಾರ ದಿನೇಶ್‌ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದು, ಸಿಡಿ, ಸಂತ್ರಸ್ತೆ ಬಗ್ಗೆ ಮತ್ತಷ್ಟು ಮಾಹಿತಿ ನೀಡುವ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ … Continued

ಜಿಲಾಡಳಿತದಿಂದ ಗ್ರಾಮ ವಾಸ್ತವ್ಯ: ಹಲವಾರು ನಿರೀಕ್ಷೆ, ಪಾರದರ್ಶಕ ಆಡಳಿತಕ್ಕೆ ಮುನ್ನುಡಿ

  ಬಿ.ಎಸ್. ಮಾಳವಾಡ, ನಿವೃತ್ತ ಗ್ರಂಥಪಾಲಕರು ಕರ್ನಾಟಕ ಸರ್ಕಾರವು ತನ್ನ ಯೋಜನೆಗಳನ್ನು ಅರ್ಹರು ಮತ್ತು ನೈಜ ಫಲಾನುಭವಿಗಳ ಮನೆ ಬಾಗಲಿಗೆ ತಲುಪಿಸಿ ಅವರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ನಿಟ್ಟಿನಲ್ಲಿ, ಕಳೆದ ಫೆಬ್ರುವರಿ ೨೦ರಂದು ಜಿಲ್ಲಾದಿಕಾರಿಗಳ ನಡೆ ಹಳ್ಳಿಕಡೆ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ತಮ್ಮ ಜಿಲ್ಲೆ ಅಥವಾ ತಾಲೂಕಿನ ಹಳ್ಳಿಗಳಲ್ಲಿ ಪ್ರತಿ … Continued

ಹತ್ರಾಸ ಕೊಲೆ ಪ್ರಕರಣ: ಮುಖ್ಯ ಆರೋಪಿ ತಲೆಗೆ ೧ ಲಕ್ಷ ರೂ.ಘೋಷಣೆ

ಹತ್ರಾಸ್(ಉತ್ತರಪ್ರದೇಶ): ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್‌ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ. ಇತರ ಇಬ್ಬರು ಆರೋಪಿಗಗಳ ಸುಳಿವಿಗೆ ತಲಾ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದ್ದು, … Continued

ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕದಲ್ಲಿ ಪ್ರತಿಭಟನೆ

ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ … Continued

ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್‌ ಎಚ್ಚರಿಕೆ

ಗೋಕಾಕ್ : ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಬಸವೇಶ್ವರ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು … Continued