ದೆಹಲಿ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಸ್ಫೋಟಕ್ಕೂ ಮುನ್ನ 3 ತಾಸು ನಿಲ್ಲಿಸಿದ್ದ ಕಾರಿನೊಳಗಿದ್ದ, ಒಮ್ಮೆಯೂ ಕೆಳಗೆ ಇಳಿದಿರಲಿಲ್ಲ : ಮೂಲಗಳು
ನವದೆಹಲಿ: ದೆಹಲಿಯ ಕೆಂಪುಕೋಟೆ (Red Fort) ಬಳಿ ಸೋಮವಾರ ಸಂಜೆ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ವದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿದೆ. ಈ ಸ್ಫೋಟದಲ್ಲಿ ಒಂಭತ್ತು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಸ್ಫೋಟಗೊಂಡ ಹ್ಯುಂಡೈ ಐ20 (Hyundai i20) ಕಾರು ಸ್ಫೋಟಕ್ಕೆ ಕೆಲವೇ ನಿಮಿಷಗಳ ಮೊದಲು, ಐತಿಹಾಸಿಕ ಸುನೆಹ್ರಿ ಮಸೀದಿ (Sunehri Masjid) ಬಳಿ ಮೂರು … Continued