ಕಾಂಗ್ರೆಸ್‌ ಶಾಸಕರಾರೂ ಬಿಜೆಪಿಗೆ ಸೇರಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹಿಂದೆ ೧೦ ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುತ್ತಾರೆ ಎಂದು ಹೇಳುತ್ತಿದ್ದರು, ಈಗ ಐದು ಶಾಸಕರು ಬರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾವುದೇ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರು … Continued

ರಾಹುಲ್‌ ಗಾಂಧಿ ವಲಸೆ ನಾಯಕ: ಸಚಿವ ಪ್ರಹ್ಲಾದ ಜೋಶಿ ಟೀಕೆ

ಅಮೇಥಿ ಕ್ಷೇತ್ರದ ಜನರು ತಿರಸ್ಕರಿಸಿದ ನಂತರ ಆಶ್ರಯಕ್ಕಾಗಿ ಕೇರಳದ ವೈನಾಡ್‌ಗೆ ಬಂದಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒಬ್ಬ ವಲಸೆ ನಾಯಕ ಎಂದು ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದರೆ ಏನನ್ನೂ ಪಡೆಯಲು ಸಾಧ್ಯವಿಲ್ಲ ಎಂಬುದು ಕೇರಳ ಜನರಿಗೆ ಮನವರಿಕೆಯಾಗಿದೆ ಎಂದರು. ಶಬರಿಮಲೈ ದೇವಸ್ಥಾನದಲ್ಲಿ ಎಲ್ಲ ವಯಸ್ಸಿನ … Continued

ಸಿಎಂ ಹಣದ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮಾರಿಷಿಸ್‌ಗೆ ತೆರಳಿ ಅಕ್ರಮ ಹಣ ಇರಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪದ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬುಜೆಪಿ ಶಾಸಕ ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪ ಕುರಿತು ಸರ್ವೋಚ್ಚ ನ್ಯಾಯಾಲಯದ … Continued

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ: ಸಿದ್ದರಾಮಯ್ಯ

ಸದ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ವಿವಾದಿತವಾಗಿರುವುದರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ಹಣ ಕೊಡುವುದಿಲ್ಲ ಎಂದು ಹೇಳಿ ಅವರನ್ನು ಹಿಂದೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಬೇರೆ … Continued

ನೂತನ ಕೃಷಿ ಕಾಯ್ದೆ ಸಮರ್ಥಿಸಿಕೊಂಡ ಪ್ರಧಾನಿ

ಲಖನೌ: ರೈತರ ಪ್ರತಿಭಟನೆ ಬೆಂಬಲಿಸುವ ಟೂಲ್‌ಕಿಟ್‌ ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವುದು ವಿವಾದಕ್ಕೆ ತಿರುಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ರಾಜ್‌ಭರ್’ (ಒಬಿಸಿ) ಸಮುದಾಯದ ಆದರ್ಶ ಪುರುಷ ರಾಜ ಸುಹೇಲ್ದೇವ್ ಪ್ರತಿಮೆಗೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ … Continued

ಬಸ್‌ ನಾಲೆಗೆ ಬಿದ್ದು ೩೭ ಜನರು ಜಲಸಮಾಧಿ

ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಸೇತುವೆ ಮೇಲಿಂದ ಬಸ್‌ ಬನ್ಸಾಗರ ನಾಲೆಗೆ ಬಿದ್ದು ೧೬ ಮಹಿಳೆಯರು ಸೇರಿದಂತೆ ೩೭ ಜನರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳಗ್ಗೆ ೯ ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್‌ ನಾಲೆಗ ಬಿದ್ದಿದೆ. ಅತಿಯಾದ ವೇಗವೇ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. … Continued

ಪುದುಚೆರಿಯಲ್ಲಿ ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್‌ ಸರಕಾರ

ನವದೆಹಲಿ: ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗ ಇಬ್ಬರು ಕಾಂಗ್ರೆಸ್‌ ಶಾಸಕರು ರಾಜಿನಾಮೆ ನೀಡಿರುವುದರಿಂದ ಪುದುಚೆರಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಇಬ್ಬರು ಶಾಸಕರ ರಾಜಿನಾಮೆಯೊಂದಿಗೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ಸಂಖ್ಯೆ ಸಮಬಲವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪುದುಚೇರಿ ಭೇಟಿಗೂ ಮುನ್ನ ಇಬ್ಬರು ಶಾಸಕರು ರಾಜೀನಾಮೆ ನಿಡಿರುವುದರಿಂದ ಕಾಂಗ್ರೆಸ್‌ಗೆ ಭಾರೀ ಆಘಾತವಾಗಿದೆ. … Continued

ಹಿಂದಿನ ಸರಕಾರಗಳು ಯೋಧರನ್ನು, ನಾಯಕರನ್ನು ಕಡೆಗಣಿಸಿದ್ದವು: ಪ್ರಧಾನಿ ಮೋದಿ

ಹಿಂದಿನ ಸರಕಾರಗಳು ಮಾಡಿದ ತಪ್ಪನ್ನು ಸರಿಪಡಿಸಲು ಮುಂದಾಗಿರುವ ನಮ್ಮ ಸರಕಾರ ಅರ್ಹ ಯೋಧರು ಹಾಗೂ ನಾಯಕರಿಗೆ ಗೌರವ ನೀಡುವ ಕಾರ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಉತ್ತರ ಪ್ರದೇಶದ ಬಹ್ರೇಚ್‌ನಲ್ಲಿ ವೀರ ಯೋಧ ಸೋಹೆಲ್ದೇವ್‌ ಅವರ ಮೂರ್ತಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಹಿಂದಿನ ಸರಕಾರಗಳು ಅರ್ಹ ನಾಯಕರಾದ ನೇತಾಜಿ … Continued

ಉತ್ತರಾಖಂಡ ಪ್ರವಾಹ: ಮೃತರ ಸಂಖ್ಯೆ ೫೮ಕ್ಕೆ ಏರಿಕೆ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಬಂಡೆ ಕುಸಿದ ಪರಿಣಾಮದಿಂದ ಉಂಟಾದ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ೫೮ಕ್ಕೇರಿದೆ. ೧೦ನೇ ದಿನ ಮಂಗಳವಾರ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ೨ ಶವಗಳನ್ನು ಹೊರತೆಗೆಯಲಾಯಿತು. ಇನ್ನೂ ೧೪೬ ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಮೋಲಿ ಜಿಲ್ಲೆಯ ಸುರಂಗದಲ್ಲಿ ೩೦ ಜನ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದಿಂದ ತಮ್ಮ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ರಾಜ್ಯದ ಪಂಚಮಸಾಲಿ ಜನಾಂಗದವರು … Continued