ಪುಲ್ವಾಮಾ ಘಟನೆಗೆ ೨ ವರ್ಷ: ಹುತಾತ್ಮರಿಗೆ ಪ್ರಧಾನಿ ಗೌರವ

ನವದೆಹಲಿ: ಪುಲ್ವಾಮಾ ಭಯೋತ್ಪಾದಕರ ದಾಳಿಯ ೨ನೇ ವಾರ್ಷಿಕೋತ್ಸವದಂದು ಪ್ರಧಾನಿ ಮೋದಿ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ಯಾವುದೇ ಭಾರತೀಯನು ಈ ಕರಾಳ ದಿನವನ್ನು ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ, ಪುಲ್ವಾಮಾ ದಾಳಿ ಸಂಭವಿಸಿದೆ. ಆ ದಾಳಿಯಲ್ಲಿ ನಾವು ಕಳೆದುಕೊಂಡ ಎಲ್ಲ ಹುತಾತ್ಮರಿಗೆ ನಾವು ಗೌರವ ಸಲ್ಲಿಸುತ್ತೇವೆ. ನಮ್ಮ ಭದ್ರತಾ … Continued

ಹಿಂದಿ ಹೇರಿದರೆ ರಕ್ತಪಾತವಾದೀತು: ಸಿದ್ದರಾಮಯ್ಯ ಅಬ್ಬರ

ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದನ್ನು ಬಲವಂತವಾಗಿ ರಾಜ್ಯದ ಜನರ ಮೇಲೆ ಹೇರಿದರೆ ರಕ್ತಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಉತ್ತರ ಭಾರತದ ಐದಾರು ರಾಜ್ಯಗಳನ್ನು ಹೊರತುಪಡಿಸಿದರೆ ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಮಾತಾಡುವವರೇ ಇಲ್ಲ. ಇದರಿಂದಾಗಿ ಹಿಂದಿ ರಾಷ್ಟ್ರ ಭಾಷೆಯಾಗಲು … Continued

ಜಪಾನ್‌ನಲ್ಲಿ ಭೂಕಂಪನಕ್ಕೆ ೧೨೦ ಜನರಿಗೆ ಗಾಯ

ಈಶಾನ್ಯ ಜಪಾನ್‌ನಲ್ಲಿ ಶನಿವಾರ ತಡರಾತ್ರಿ ಭೂಕಂಪನ ಸಂಭವಿಸಿದ್ದು, ಸುಮಾರು ೧೨೦ ಜನರು ಗಾಯಗೊಂಡಿರುವುದು ವರದಿಯಾಗಿದೆ. ಭೂ ಕಂಪನದಿಂದಾಗಿ ಬುಲೆಟ್‌ ರೈಲು ಮಾರ್ಗಗಳು, ಹಲವು ಕಟ್ಟಡಗಳು, ರಸ್ತೆಗಳು ಹಾನಿಗೀಡಾಗಿವೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆ ೭.೩ ರಷ್ಟು ದಾಖಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಜೀವಹಾನಿಯಾಗಿರುವುದು ವರದಿಯಾಗಿಲ್ಲ ಸಮುದ್ರದ ಆಳದಲ್ಲಿ ಭೂ ಕಂಪನದ ಕೇಂದ್ರ ಪತ್ತೆಯಾಗಿದ್ದು, ಯಾವುದೇ … Continued

ಮುಂದಿನ ಚುನಾವಣೆಯಲ್ಲಿ ನಿಮ್ಮ ತಾಕತ್‌ ತೋರಿಸಿ: ಕಾರ್ಯಕರ್ತರಿಗೆ ದೇವೆಗೌಡ ಮನವಿ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ತಾಕತ್ತು ಏನು ಎಂಬುದನ್ನು ತೋರಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು. ನಾನು ಮುಂದೆ ನಿಮಗೆ ಮಾರ್ಗದರ್ಶನ ಮಾಡಬಹುದು … Continued

ತಮಿಳುನಾಡು ರೈತರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಚೆನ್ನೈ: ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ದಾಖಲೆ ಪ್ರಮಾಣದ ಆಹಾರಧಾನ್ಯ ಉತ್ಪಾದನೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರೈತರನ್ನು ಶ್ಲಾಘಿಸಿದ್ದಾರೆ. ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ರೈತರು ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಬೆಳೆದಿರುವುದು ಶ್ಲಾಘನೀಯ. ರೈತರು ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ ಎಂದರು. ಹೊಸ ಕೃಷಿ … Continued

ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಪ್ರಧಾನಿ: ಶಿವಸೇನೆ ಆರೋಪ

ಮುಂಬೈ: ಕೃಷಿ ಕಾನೂನುಗಳನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಧಾನಿ “ಆಂದೋಲನಜೀವಿಗಳುʼ ಎಂದು ಕರೆದಿರುವುವುದು ದೇಶದ ಸ್ವಾತಂತ್ರ್ಯ ಹೋರಾಟ ಮಾಡಿದವರಿಗೂ ಮಾಡಿದ ಅವಮಾನ ಎಂದು ಶಿವಸೇನೆ ಆರೋಪ ಮಾಡಿದೆ. ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಪ್ರಧಾನಿ ಮೋದಿ ಅವರು ದೇಶದ ಆಂದೋಲನಗಳನ್ನು ಗೇಲಿ ಮಾಡಿದ್ದಾರೆ. ಬಿಜೆಪಿ ತುರ್ತು ಪರಿಸ್ಥಿತಿಯಿಂದ ಅಯೋಧ್ಯೆ ಚಳುವಳಿಯವರೆಗೆ, ಹಣದುಬ್ಬರದಿಂದ ಕಾಶ್ಮೀರದಿಂದ ಆರ್ಟಿಕಲ್-370 … Continued

ಮನಸು ಮಾಡಿದ್ರೆ ೨೪ ಗಂಟೆಗಳಲ್ಲಿ ೫ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಕೊಡಿಸಬಲ್ಲೆ

ಬೆಳಗಾವಿ: ನಾನು ಮನಸು ಮಾಡಿದರೆ ೨೪ ಗಂಟೆಗಳಲ್ಲಿ ಐದು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ೧೭ ಶಾಸಕರು ಖುಷಿಯಿಂದ ಇಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ ಬೇಕೆನಿಸಿದರೆ ೨೪ ತಾಸುಗಳಲ್ಲಿ ಐವರು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದರು. ಕಾಂಗ್ರೆಸ್ನ ಉನ್ನತ ಹಂತದ … Continued

ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ: ಎಚ್‌ಡಿಕೆ

ಬೆಂಗಳೂರು: ಬಸವಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಅವರು ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕ ಸಾಮರ್ಥ್ಯದ ಕೊರತೆಯಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿತ್ತು. ಆದರೆ ಈಗ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೆಣೆಸಲಿದ್ದಾರೆ … Continued

ರೈತರ ಹೋರಾಟಕ್ಕೆ ಮಹಾತ್ಮ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಬೆಂಬಲ

ಗಾಜಿಯಾಬಾದ್‌: ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಕೇಂದ್ರ ಸರಕಾರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಗಾಜಿಯಾಬಾದ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಅವರು, ಶಾಂತಿಯುತವಾಗಿ ಹೋರಾಟ ನಡೆಸುವಂತೆ ರೈತರಿಗೆ ಕರೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ರೈತರು … Continued

ಉತ್ತರಾಖಂಡ ದುರಂತ: ೪೧ ಶವಗಳ ಪತ್ತೆ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹ ದುರಂತದಲ್ಲಿ ಈವರೆಗೆ ೪೧ ಶವಗಳನ್ನು ಹೊರತೆಗೆಯಲಾಗಿದೆ. ರವಿವಾರ ಮಧ್ಯಾಹ್ನದ ವೇಳೆಗೆ ೪೧ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದೆ. ಫೆ.೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಪ್ರವಾಹದಿಂದಾಗಿ ಋಷಿಗಂಗಾ ವಿದ್ಯುತ್‌ ಯೋಜನೆ ಕಾಮಗಾರಿ ಹಾನಿಗೊಳಗಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಣೆ ಮಾಡುವ … Continued