ಹಾವೇರಿ | ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ; ಹೋರಿ ತಿವಿದು ಮೂವರು ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಹಾವೇರಿ ಜಿಲ್ಲೆಯ ವಿವಿಧೆಡೆ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಹಾಯ್ದು ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿಯ ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ ಕೋಡಿಹಳ್ಳಿ (75) ಎಂಬವರು ಮನೆಗೆ ಹೊರಟಿದ್ದ ವೇಳೆ … Continued

ದೆಹಲಿಯಲ್ಲಿ ಎನ್‌ಕೌಂಟರ್ : ‘ಸಿಗ್ಮಾ ಗ್ಯಾಂಗ್’ ನ ನಾಲ್ವರು ʼಮೋಸ್ಟ್ ವಾಂಟೆಡ್ʼ ಗ್ಯಾಂಗ್‌ಸ್ಟರ್‌ ಗಳು ಹತ

ನವದೆಹಲಿ: ದೆಹಲಿಯಲ್ಲಿ ಬಿಹಾರ ಪೊಲೀಸರ ಸಹಯೋಗದೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್‌ನಲ್ಲಿ ನಾಲ್ವರು ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ಗಳು ಹತರಾಗಿದ್ದಾರೆ. ಈ ಘಟನೆ ಗುರುವಾರ ಮುಂಜಾನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ದೆಹಲಿ ಪೊಲೀಸರ ಪ್ರಕಾರ, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಹದ್ದೂರ್ ಶಾ ರಸ್ತೆಯಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಹತರಾದವರನ್ನು ರಂಜನ್ ಪಾಠಕ್ (25), ಬಿಮಲೇಶ್ … Continued

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರಗೆ ಪಾಕಿಸ್ತಾನಿ ತಾಲಿಬಾನ್‌ ನಿಂದ ಬಹಿರಂಗ ಬೆದರಿಕೆ…

 ನವದೆಹಲಿ: ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಬಿಡುಗಡೆ ಮಾಡಿದ ಹಲವಾರು ವೀಡಿಯೊಗಳು ಪಾಕಿಸ್ತಾನದ ಸೇನಾ ಮುಖ್ಯಸ್ಥ, ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರನ್ನು ಮುಜುಗರದ ಸ್ಥಿತಿಗೆ ದೂಡಿವೆ. ಈ ವೀಡಿಯೊಗಳಲ್ಲಿ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ(TTP)ದ ಉನ್ನತ ಕಮಾಂಡರ್ ಒಬ್ಬರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ್‌ಗೆ ನೇರವಾಗಿ ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನದ ಸೈನ್ಯವು ತಮ್ಮ ಸೈನಿಕರನ್ನು ಸಾಯಲು ಕಳುಹಿಸುವುದನ್ನು ತಪ್ಪಿಸಬೇಕು … Continued

ಬಿಹಾರ ಚುನಾವಣೆ : ವಾರಗಳ ಹಗ್ಗಜಗ್ಗಾಟದ ನಂತರ ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಹೆಸರು ಘೋಷಣೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅನೇಕ ದಿನಗಳ ಊಹಾಪೋಹಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಯಿತು. ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ ಸಹಾನಿ ಅವರನ್ನು ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ … Continued

ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿನಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ಇದರ … Continued

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಆಘಾತಕಾರಿ ವರದಿ ಬಹಿರಂಗ

 ಬೆಂಗಳೂರು : ಕರ್ನಾಟಕದಾದ್ಯಂತ ನದಿಗಳ ಪರಿಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ರಾಜ್ಯಾದ್ಯಂತ 12 ಪ್ರಮುಖ ನದಿಗಳ ನೀರು ಕುಡಿಯಲು ಅಪಾಯಕಾರಿ ಎಂದು ತೋರಿಸುವ ಆಘಾತಕಾರಿ ವರದಿಯನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಈ ನದಿಗಳ ಉದ್ದಕ್ಕೂ 32 ಬಿಂದುಗಳಿಂದ ಸಂಗ್ರಹಿಸಲಾದ ಮಾದರಿಗಳು ರಾಜ್ಯದ ಯಾವುದೇ ನದಿಯೂ ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ … Continued

ಕರಾಳ ʼಕಫಲಾʼ ವ್ಯವಸ್ಥೆ ರದ್ದುಗೊಳಿಸಿದ ಸೌದಿ ಅರೇಬಿಯಾ ; ಇನ್ಮುಂದೆ ವಲಸೆ ಕಾರ್ಮಿಕರಿಗೆ ಹೆಚ್ಚಿನ ಸ್ವಾತಂತ್ರ್ಯ

ಸೌದಿ ಅರೇಬಿಯಾದಿಂದ ‘ಕಫಾಲಾ’ ಕಾರ್ಮಿಕ ವ್ಯವಸ್ಥೆ ರದ್ದು: 13 ಮಿಲಿಯನ್ ವಲಸಿಗ ಕಾರ್ಮಿಕರಿಗೆ ಹೊಸ ಸ್ವಾತಂತ್ರ್ಯ ರಿಯಾದ್: ಸೌದಿ ಅರೇಬಿಯಾವು ತನ್ನ 50 ವರ್ಷಗಳಷ್ಟು ಹಳೆಯದಾದ ಕಫಾಲಾ (Kafala) ಕಾರ್ಮಿಕ ಪ್ರಾಯೋಜಕತ್ವ ವ್ಯವಸ್ಥೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಇದು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರ ‘ವಿಷನ್ 2030’ ಸುಧಾರಣೆಗಳ ಭಾಗವಾಗಿ ಘೋಷಿಸಲಾದ ಒಂದು ಐತಿಹಾಸಿಕ ಹೆಜ್ಜೆಯಾಗಿದೆ. … Continued

ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಗುಂಡು

ಮಂಗಳೂರು : ಅಕ್ರಮ ಗೋವು ಸಾಗಣೆಯಲ್ಲಿ ಭಾಗಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ, ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು … Continued

“ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆ ಹಂತದಲ್ಲಿದ್ದಾರೆ ಎಂದ ಪುತ್ರ ; ಸಂಭಾವ್ಯ ಉತ್ತರಾಧಿಕಾರಿ ಯಾರೆಂದು ಹೇಳಿದ ಯತೀಂದ್ರ : ರಾಜಕೀಯದಲ್ಲಿ ಸಂಚಲನ…!

ಬೆಂಗಳೂರು/ಬೆಳಗಾವಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರಂತರ ಊಹಾಪೋಹಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರಂತಹವರಿಗೆ ‘ಮಾರ್ಗದರ್ಶಕರಾಗಿ’ರಬೇಕು ಎಂದು ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ … Continued

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲಕ್ಕೆ ಐಷಾರಾಮಿ ಕಾರುಗಳ ಖರೀದಿ ನಿರ್ಧಾರ ಟೀಕಿಸಿದ ಕಾಂಗ್ರೆಸ್‌

ನವದೆಹಲಿ: ಲೋಕಪಾಲ (ಭ್ರಷ್ಟಾಚಾರ ನಿಗ್ರಹ ಸಂಸ್ಥೆ) ತನ್ನ ಸದಸ್ಯರಿಗಾಗಿ ತಲಾ ಸುಮಾರು ₹ 70 ಲಕ್ಷ ಮೌಲ್ಯದ ಏಳು ಬಿಎಂಡಬ್ಲ್ಯೂ ಕಾರುಗಳನ್ನು ಖರೀದಿಸಲು ನಿರ್ಧರಿಸಿದೆ ಎಂಬ ವರದಿಯು ತೀವ್ರ ಟೀಕೆಗೆ ಗುರಿಯಾಗಿದೆ. ಸಮಗ್ರತೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಂಸ್ಥೆಗೆ ಇದು ” ವಿಪರ್ಯಾಸ” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಲೋಕಪಾಲ ಕುರಿತ ಸಂಸದೀಯ ಸಮಿತಿಯ … Continued