ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 13 ರಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, … Continued

ಅಮೆರಿಕ : ಪತ್ನಿ-ಮಗನ ಮುಂದೆ ಕರ್ನಾಟಕ ಮೂಲದ ವ್ಯಕ್ತಿಯ ಬೆನ್ನಟ್ಟಿ ಶಿರಚ್ಛೇದ ಮಾಡಿದ ವ್ಯಕ್ತಿ…!

ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಮೋಟೆಲ್‌ನಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬನ ಶಿರಚ್ಛೇದನ ಮಾಡಲಾಗಿದೆ. ಡೌನ್‌ಟೌನ್‌ನ ಪೂರ್ವದಲ್ಲಿರುವ ಸ್ಯಾಮ್ಯುಯೆಲ್ ಬೌಲೆವಾರ್ಡ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್ ಅನ್ನು ನಿರ್ವಹಿಸುತ್ತಿದ್ದ ಐವತ್ತು ವರ್ಷದ ಚಂದ್ರ ನಾಗಮಲ್ಲಯ್ಯನ ಅವರ ಮೇಲೆ, ಹಿಂಸಾತ್ಮಕ ಅಪರಾಧ ಇತಿಹಾಸ ಹೊಂದಿರುವ ಮತ್ತು ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ 37 ವರ್ಷದ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಪದೇ ಪದೇ ಮಚ್ಚಿನಿಂದ … Continued

ಅನ್ಬುಮಣಿ ಎಂಬ ಕಳೆ ತೆಗೆದುಹಾಕಲಾಗಿದೆ : ಮಗನನ್ನೇ ಪಿಎಂಕೆ ಪಕ್ಷದಿಂದ ಹೊರಹಾಕಿದ ಎಸ್‌.ರಾಮದಾಸ…!

ಚೆನ್ನೈ : ತಮಿಳುನಾಡಿನ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದಲ್ಲಿನ ಬಿಕ್ಕಟ್ಟಿನ ನಡುವೆ, ಪಕ್ಷದ ಸಂಸ್ಥಾಪಕ ಎಸ್. ರಾಮದಾಸ ಗುರುವಾರ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ…! ಹಾಗೂ ಪಿಎಂಕೆ ಕಾರ್ಯಕರ್ತರು ಅವರ ಜೊತೆಗಿನ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸುವಂತೆ ಸೂಚಿಸಿದ್ದಾರೆ. ರಾಮದಾಸ ಅವರು ಅನ್ಬುಮಣಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರು. “ಅನ್ಬುಮಣಿ … Continued

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ಉನ್ನತ ನಕ್ಸಲ್ ಕಮಾಂಡರ್‌ ಸೇರಿ 10 ನಕ್ಸಲೀಯರು ಎನ್ ಕೌಂಟರಿನಲ್ಲಿ ಸಾವು

ರಾಯ್ಪುರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉನ್ನತ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ ಮತ್ತು ಇತರ ಒಂಬತ್ತು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆಯಾದವರಲ್ಲಿ ಉನ್ನತ ನಕ್ಸಲ್ ನಾಯಕ ಮನೋಜ ತಲೆಗೆ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾಗಿತ್ತು. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ … Continued

ಭಟ್ಕಳ : ನೂರಾರು ಜಾನುವಾರುಗಳ ಮೂಳೆಗಳ ರಾಶಿ ಪತ್ತೆ..!

ಭಟ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿ ಮುಗ್ದೂಂ ಕಾಲೋನಿಯ ಗುಡ್ಡದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೂರಾರು ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರಗಳು ರಾಶಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ. ಪುರಸಭೆ ವ್ಯಾಪ್ತಿಯ ಮುಗ್ದೂಮ್ ಕಾಲೋನಿಯ ಗುಡ್ಡ ಪ್ರದೇಶದಲ್ಲಿ ನೂರಾರು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಹಾಗೂ … Continued

ತನ್ನ ಮೇಲೆ ದಾಳಿ ಮಾಡಿದ ನರಿ ಜೊತೆ 30 ನಿಮಿಷ ಹೋರಾಡಿ ನರಿಯನ್ನೇ ಕೊಂದು ಹಾಕಿದ 65 ವರ್ಷದ ವೃದ್ಧೆ…!

ಭೋಪಾಲ : ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ಅಸಾಮಾನ್ಯ ಘಟನೆಯೊಂದರಲ್ಲಿ 65 ವರ್ಷದ ಮಹಿಳೆಯೊಬ್ಬರು ನರಿಯ ದಾಳಿಯನ್ನು ಧೈರ್ಯದಿಂದ ಎದುರಿಸಿ ಅದನ್ನೇ ಸಾಯಿಸಿದ್ದಾರೆ ಎಂದು ವರದಿಯಾಗಿದೆ. ಹೊಲದಲ್ಲಿ ಮೇವು ಕತ್ತರಿಸುತ್ತಿದ್ದಾಗ ನರಿ 65 ವರ್ಷದ ವೃದ್ಧೆಯ ಮೇಲೆ ದಾಳಿ ಮಾಡಿದೆ. ಸುಮಾರು 30 ನಿಮಿಷಗಳ ಕಾಲ ನರಿಯೊಂದಿಗೆ ಹೋರಾಡಿದ ವೃದ್ಧೆ, ನಂತರ ತನ್ನ ಸೀರೆಯ ಅಂಚಿನಿಂದ … Continued

ನಾಳೆ (ಸೆ.12) ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ

ನವದೆಹಲಿ : ನೂತನವಾಗಿ ಆಯ್ಕೆಯಾದ ಭಾರತದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ನಾಳೆ (ಸೆಪ್ಟೆಂಬರ್ 12) ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ವಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸಹ ಆಹ್ವಾನಿತರಾಗಿದ್ದಾರೆ. ರಾಧಾಕೃಷ್ಣನ್ ಅವರ ಮೊದಲ ಕಾರ್ಯಕ್ರಮ ಅಂದು ಮಧ್ಯಾಹ್ನ 12 ಗಂಟೆಗೆ … Continued

ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ಅಮೆರಿಕ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಹತ್ಯೆ: ಕಾಲೇಜು ಛಾವಣಿ ಮೇಲೆ ಶಂಕಿತ ಶೂಟರ್‌ ಇರುವಿಕೆ ತೋರಿಸಿದ ವೀಡಿಯೊ

ವಾಷಿಂಗ್ಟನ್: ಜನಪ್ರಿಯ ಬಲಪಂಥೀಯ ಕಾರ್ಯಕರ್ತ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಾಪ್ತ ಚಾರ್ಲಿ ಕಿರ್ಕ್ ಅವರನ್ನು ಬುಧವಾರ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಘಟನೆಯ ವೀಡಿಯೊದಲ್ಲಿ 31 ವರ್ಷದ ರೇಡಿಯೋ ನಿರೂಪಕ ಮತ್ತು ಪಾಡ್‌ಕ್ಯಾಸ್ಟರ್ ಹೊರಾಂಗಣದಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. … Continued

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟಿಗೆ ಮತ್ತೆರಡು ಪಿಐಎಲ್

ಬೆಂಗಳೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಧರ್ಮದವರಲ್ಲದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ದಸರಾ … Continued