ನಾನು ಎಂದಿಗೂ ಪ್ರಧಾನಿ ಮೋದಿ ಸ್ನೇಹಿತ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ, ಚಿಂತೆಯ ಅಗತ್ಯವಿಲ್ಲ: ಮೆತ್ತಗಾದ ಟ್ರಂಪ್

ನವದೆಹಲಿ: ಶುಕ್ರವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ “ಚೀನಾ ಕಡೆಗೆ ಭಾರತ ಹೋಯಿತು” ಎಂಬ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ ಮತ್ತು ಅದೇ ಸಂಭವಿಸಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯ ಸಮಯದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಟ್ರಂಪ್, ಇತ್ತೀಚಿನ ವಾರಗಳಲ್ಲಿ ರಷ್ಯಾದ ತೈಲ ಖರೀದಿಯನ್ನು ಮುಂದುವರೆಸಿದ್ದಕ್ಕಾಗಿ ಭಾರತದ ವಿರುದ್ಧದ ತಮ್ಮ … Continued

ಸ್ಪರ್ಧಾ ನಿಯಮಗಳ ಉಲ್ಲಂಘನೆ : ಗೂಗಲ್‌ ಗೆ 3.5 ಶತಕೋಟಿ ಡಾಲರ್ ದಂಡ ವಿಧಿಸಿದ ಯುರೋಪಿಯನ್ ಒಕ್ಕೂಟ

ತನ್ನದೇ ಆದ ಡಿಜಿಟಲ್ ಜಾಹೀರಾತು ಸೇವೆಗಳನ್ನು ಸಪೋರ್ಟ್‌ ಮಾಡುವ ಮೂಲಕ ಸ್ಪರ್ಧಾತ್ಮಕ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಯುರೋಪಿಯನ್ ಒಕ್ಕೂಟವು ಗೂಗಲ್‌ (Google)ಗೆ $3.5 ಶತಕೋಟಿ ದಂಡ ವಿಧಿಸಿದೆ. ಇದು ತಂತ್ರಜ್ಞಾನ ದೈತ್ಯದ ನಾಲ್ಕನೇ ಪ್ರಮುಖ ನಂಬಿಕೆ-ವಿರೋಧಿ ದಂಡ (antitrust penalty)ವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಗ್ರಾಹಕರು ಮತ್ತು ಸ್ಪರ್ಧಿಗಳಿಬ್ಬರಿಗೂ ಹಾನಿ ಮಾಡಿದ ಗೂಗಲ್‌ನ ಸ್ಪರ್ಧಾತ್ಮಕ-ವಿರೋಧಿ ಅಭ್ಯಾಸಗಳಿಗಾಗಿ ದಂಡ … Continued

5.2 ಕೆ.ಜಿ ತೂಕದ ‘ಛೋಟಾ ಭೀಮ’ನ ಜನನ…ಇದು ಅಪರೂಪದ ಹೆರಿಗೆ

ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿ ಶುಭಾಂಗಿ ಯಾದವ್ ಎಂಬ ಮಹಿಳೆ ಬರೋಬ್ಬರಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಸಾಮಾನ್ಯವಾಗಿ ನವಜಾತ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದು ಹೇಳುತ್ತಿದ್ದಾರೆ. ನವಜಾತ ಶಿಶುವಿನ … Continued

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಕಚ್ಚಿದ ಅದೇ ಹಾವು…! ಇದು ಹಾವಿನ ಕೋಪವೋ ಅಥವಾ….

ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿ ಪ್ರಕಾರ, ಒಂದೇ ಕಪ್ಪು ಹಾವು 40 ದಿನಗಳ ಅವಧಿಯಲ್ಲಿ 13 … Continued

60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ :  60 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ, ಉದ್ಯಮಿ ರಾಜ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಈ ವಂಚನೆಯು ದಂಪತಿಯ ಪ್ರಸ್ತುತ ಕಾರ್ಯನಿರ್ವಹಿಸದ ಸಂಸ್ಥೆಯಾದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ ಒಪ್ಪಂದಕ್ಕೆ … Continued

“ನಾವು ಭಾರತ, ರಷ್ಯಾವನ್ನು ಕರಾಳ ಚೀನಾಕ್ಕೆ ಕಳೆದುಕೊಂಡಿದ್ದೇವೆ” : ಹೊಸ ಪೋಸ್ಟ್‌ ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು, ಶುಕ್ರವಾರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ “ನಾವು ಭಾರತ ಮತ್ತು ರಷ್ಯಾವನ್ನು ಅತ್ಯಂತ ಕರಾಳ ಚೀನಾಕ್ಕೆ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಹೇಳಿದ್ದಾರೆ. ನಂತರ ಮೂರೂ ದೇಶಗಳಿಗೆ “ಸಮೃದ್ಧ” ಭವಿಷ್ಯವನ್ನು ಹಾರೈಸಿದ್ದಾರೆ. ವಾರದ ಆರಂಭದಲ್ಲಿ ಚೀನಾದ ಕ್ಸಿ ಜಿನ್‌ಪಿಂಗ್ ಆಯೋಜಿಸಿದ್ದ ಟಿಯಾಂಜಿನ್ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಹಲವಾರು ವಿಶ್ವ ನಾಯಕರಲ್ಲಿ … Continued

ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued

ಶಿರಸಿ : ಏರ್‌ ಗನ್‌ ನಿಂದ ಗುಂಡು ಹಾರಿ ಬಾಲಕ ಸಾವು

ಶಿರಸಿ: ಎರಡು ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಾತ್‌ ಆಗಿ ಏರ್ ಗನ್ ಗುಂಡು ಹಾರಿ ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ಸಮೀಪದ ಸೋಮನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸೋಮನಳ್ಳಿಯ ರಾಘವೇಂದ್ರ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡಲು ಬಸಪ್ಪ ಉಂಡಿಯರ್ ಕುಟುಂಬ … Continued

ಅಕ್ರಮ ಮಣ್ಣು ಅಗೆತ ಪ್ರಕರಣ ; ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ಮಹಿಳಾ ಐಪಿಎಸ್ ಅಧಿಕಾರಿಗೆ ಗದರಿಸುತ್ತಿರುವ ವೀಡಿಯೊ ವೈರಲ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ ಪವಾರ್ ಅವರು ಸೋಲಾಪುರದ ಹಳ್ಳಿಯೊಂದರಲ್ಲಿ ಅಕ್ರಮವಾಗಿ ಮಣ್ಣು ಅಗೆಯುವುದರ ವಿರುದ್ಧ ಕ್ರಮ ಕೈಗೊಳ್ಳದಂತೆ ಮಹಿಳಾ ಐಪಿಎಸ್ ಅಧಿಕಾರಿಯ ಮೇಲೆ ಒತ್ತಡ ಹೇರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಸಿಲುಕಿದ್ದಾರೆ. ಎರಡು ದಿನಗಳ ಹಿಂದೆ ಸೋಲಾಪುರದ ಕರ್ಮಲಾ ತಾಲೂಕಿನ … Continued

33 ಜೀವ ರಕ್ಷಕ ಔಷಧಿಗಳ ಮೇಲಿನ ತೆರಿಗೆ ಸಂಪೂರ್ಣ ತೆಗೆದುಹಾಕಿದ ಜಿಎಸ್‌ಟಿ ಮಂಡಳಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯ ಪ್ರಮುಖ ಬದಲಾವಣೆ ಘೋಷಿಸಿದ್ದು, ಇದು ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲನ ನೀಡಿದೆ. ಜಿಎಸ್‌ಟಿ ಆಡಳಿತವು ಈಗ ಶೇ. 5 ಮತ್ತು ಶೇ. 18 ಎರಡು ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ನಿಗದಿಪಡಿಸಿದ್ದು, ಸೂಪರ್ ಐಷಾರಾಮಿ ಮತ್ತು ಸಿನ್‌ ವಸ್ತುಗಳಿಗೆ ಶೇ. 40 ವಿಶೇಷ … Continued