ತಿರುಪತಿ ದೇವಸ್ಥಾನದ ಆವರಣದಲ್ಲಿ ನಮಾಜ್ ; ಭುಗಿಲೆದ್ದ ವಿವಾದ

ಹೈದರಾಬಾದ್: ಗುರುವಾರ ತಿರುಪತಿಯ ತಿರುಮಲದ ದೇವಸ್ಥಾನದ ಆವರಣದ ಬಳಿ ತಿರುಮಲ ಕಲ್ಯಾಣ ಮಂಟಪದ ಸಮೀಪ ವ್ಯಕ್ತಿಯೊಬ್ಬ ಹಜರತ್ ಕ್ಯಾಪ್ ಧರಿಸಿ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆದ ನಂತರ ವಿವಾದ ಭುಗಿಲೆದ್ದಿದೆ. ಈ ಘಟನೆ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊದಲ್ಲಿ ಆ ವ್ಯಕ್ತಿ ಹಜರತ್ ಕ್ಯಾಪ್ ಧರಿಸಿ ನಮಾಜ್ ಮಾಡುತ್ತಿರುವುದನ್ನು ತೋರಿಸಲಾಗಿದೆ. ಸ್ಥಳದಲ್ಲಿ … Continued

ಅಮೆರಿಕ ಬಿಟ್ಟು ಬೇರೆಡೆ ತಯಾರಾದ ಐಫೋನ್‌ಗಳ ಮೇಲೆ 25%ರಷ್ಟು ಸುಂಕ ; ಟ್ರಂಪ್ ಎಚ್ಚರಿಕೆ

ಆಪಲ್ ಅಮೆರಿಕದಲ್ಲಿ ದೇಶದಲ್ಲಿ ಮಾರಾಟವಾಗುವ ಫೋನ್‌ಗಳನ್ನು ತಮ್ಮ ದೇಶದೊಳಗೆ ತಯಾರಿಸದಿದ್ದರೆ 25% ಸುಂಕವನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ. ಟ್ರಂಪ್ ಅವರ ಎಚ್ಚರಿಕೆಯ ಮೇರೆಗೆ ಆಪಲ್‌ನ ಷೇರುಗಳು ಮಾರುಕಟ್ಟೆ ಪೂರ್ವ ವಹಿವಾಟಿನಲ್ಲಿ 2.5% ಕುಸಿದವು. “ಅಮೆರಿಕದಲ್ಲಿ ಮಾರಾಟವಾಗುವ ಅವರ ಐಫೋನ್‌ಗಳನ್ನು ಭಾರತ ಅಥವಾ ಬೇರೆಲ್ಲಿಯೂ ಅಲ್ಲ, ಅಮೆರಿಕದಲ್ಲಿಯೇ ತಯಾರಿಸಬೇಕು ಎಂದು … Continued

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ | ಆರೋಪಿಗಳಿಗೆ ಜಾಮೀನು; ಹಿಂಬಾಲಕರೊಂದಿಗೆ ರೋಡ್ ಶೋ…!

ಹಾವೇರಿ: 2024ರ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ್ದು, ಜೈಲಿನಿಂದ ಬಿಡುಗಡೆಗೊಂಡ ಎಲ್ಲಾ ಆರೋಪಿಗಳು ವಿಜಯೋತ್ಸವ ಆಚರಿಸಿದ್ದು, ಹಾವೇರಿಯಿಂದ ಅಕ್ಕಿ ಆಲೂರುವರೆಗೆ ರೋಡ್‌ ಶೋ ನಡೆಸಿರುವ ಘಟನೆ ನಡೆದಿರುವುದು ವರದಿಯಾಗಿದೆ. ಇದರ ನಂತರ ಜಾಮೀನಿನನ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹಾಗೂ … Continued

ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ​​​​ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued

ವೀಡಿಯೊ | ನೀವು ನಮ್ಮ ನೀರು ನಿಲ್ಲಿಸಿದ್ರೆ ನಾವು ನಿಮ್ಮ…; ಉಗ್ರ ಹಫೀಜ್ ಸಯೀದ್ ಧಾಟಿಯಲ್ಲೇ ಭಾರತಕ್ಕೆ ಪಾಕಿಸ್ತಾನ ಮಿಲಿಟರಿ ವಕ್ತಾರನ ಬೆದರಿಕೆ !

ಪಾಕಿಸ್ತಾನಿ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಇತ್ತೀಚೆಗೆ ಭಾರತದ ವಿರುದ್ಧ ದ್ವೇಷ ತುಂಬಿದ ಭಾವನೆಗಳನ್ನು ಹೊರಹಾಕಿದ್ದಾರೆ, ಇದು ಹಿಂದೆ ಜಾಗತಿಕ ಭಯೋತ್ಪಾದಕ ಹಫೀಜ್ ಸಯೀದ್ ವ್ಯಕ್ತಪಡಿಸಿದಂತೆಯೇ ಇದೆ ಎಂಬುದು ಹಲವರ ಅಭಿಪ್ರಾಯವಾಗಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ವರದಿಯಾಗಿರುವ ಹಫೀಜ್ ಸಯೀದ್, ಭಾರತ ಮತ್ತು … Continued

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಇಂಡಿಗೋ ವಿಮಾನವು ಅದರ ವಾಯುಪ್ರದೇಶ ಬಳಸಲು ಮಾಡಿದ ಮನವಿ ತಿರಸ್ಕರಿಸಿದ ಪಾಕಿಸ್ತಾನ

 ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನವು, ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತುತ್ತಾದ ನಂತರ ಪ್ರಕ್ಷುಬ್ಧತೆ ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯ ಪ್ರವೇಶಿಸಲು ಅನುಮತಿ ಕೋರಿತ್ತು, ಆದರೆ ಪಾಕಿಸ್ತಾನದ ಲಾಹೋರ್ ವಾಯು ಸಂಚಾರ ನಿಯಂತ್ರಣವು ತುರ್ತು ಸಂದರ್ಭದ ಈ ಮನವಿಯನ್ನು ತಿರಸ್ಕರಿಸಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ. 6E … Continued

ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ. ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ … Continued

ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued

ವಕ್ಫ್ ತಿದ್ದುಪಡಿ ಕಾಯಿದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯಿದೆ- 2025ಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮಧ್ಯಂತರ ಪರಿಹಾರದ ಕುರಿತು ತನ್ನ ಆದೇಶ ಕಾಯ್ದಿರಿಸುವ ಮೊದಲು ಮೂರು ದಿನಗಳ ಕಾಲ ಎಲ್ಲ ಪಕ್ಷಕಾರರ … Continued

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ … Continued