ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

“ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ” : ಪ್ರಧಾನಿ ಮೋದಿ

ಟೋಂಕ್: ‘ಕಾಂಗ್ರೆಸ್ ಪಕ್ಷವು ಮಹಿಳೆಯರ ಮಂಗಳಸೂತ್ರ ಕಸಿಯಲು ಬಯಸಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಚರ್ಚೆಯ ನಡುವೆಯೇ, ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದರ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಬಲವಾದ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ದೇಶದ ಮುಂದೆ ಇಟ್ಟಿದ್ದೇನೆ ಎಂದು ಪ್ರಧಾನಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಮಂಗಳವಾರ ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ … Continued

೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

(೨೪-೦೪-೨೦೨೪ರ ಬೆಳಿಗ್ಗೆ ೧೧:೩೦ಕ್ಕೆ ಕೊಪ್ಪಿಕರ ರಸ್ತೆಯಲ್ಲಿ ಸಾಹಿತ್ಯ ಭಂಡಾರದ ನೂತನ ನವಿಕೃತಗೊಂಡ ಪುಸ್ತಕ ಮಳಿಗೆಯ ಉದ್ಘಾಟನೆಗೊಳ್ಳುತ್ತಿದೆ. ಈ ನಿಮಿತ್ತ ಲೇಖನ) ೧೯೩೪ ರ ಯುಗಾದಿಯಂದು  ಮ. ಗೋವಿಂದರಾವ್ ಮತ್ತು  ಮ. ಅನಂತಮೂರ್ತಿ ಅವರು  ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಸಾಹಿತ್ಯ ಭಂಡಾರವನ್ನು ಆರಂಭಿಸಿದರು. ಇಂದು ೬೦೦೦ ಚದರ ಅಡಿಯಲ್ಲಿ ನವೀಕರಣಗೊಂಡ ವಿಸ್ತಾರವಾದ ೩ … Continued

ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳು ಮತ್ತದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರದ ಕುರಿತಾಗಿ ರಾಜ್ಯ ಸರ್ಕಾರದ ಮುಖ್ಯ ಕಾಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ … Continued

ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಫೋಕ್ಸೋ ಪ್ರಕರಣದಡಿ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಮುರುಘಾ ಶರಣರನ್ನು … Continued

100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಉಪಕುಲಪತಿಯಾಗಿ ಪ್ರೊಫೆಸರ್ ನಯಿಮಾ ಖಾತೂನ್ ಅವರನ್ನು ನೇಮಕ ಮಾಡಲಾಗಿದೆ. ವಿಶ್ವವಿದ್ಯಾನಿಲಯದ ಸಂದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನುಮೋದನೆ ಪಡೆದ ನಂತರ ಶಿಕ್ಷಣ ಸಚಿವಾಲಯವು ಪ್ರೊಫೆಸರ್ ನಯಿಮಾ ಖಾತೂನ್ ಅವರನ್ನು ನೇಮಕ ಮಾಡಿದೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ 123 ವರ್ಷಗಳ ಇತಿಹಾಸದಲ್ಲಿ ಈ ಹುದ್ದೆಗೆ ನೇಮಕಗೊಂಡ … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

ಬೆಂಗಳೂರು : ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ತಂದಿದ್ದ 10 ಹಳದಿ ಅನಕೊಂಡಗಳನ್ನು ಪತ್ತೆ ಮಾಡಲಾಗಿದ್ದು, ಕಳ್ಳಸಾಗಣೆ ಮಾಡುವ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಹೇಳಿದೆ. ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ವೀಡಿಯೊ : ಸೇನಾ ಹೆಲಿಕಾಪ್ಟರ್‌ ಗಳ ಡಿಕ್ಕಿ ; 10 ಮಂದಿ ಸಾವು

ಮಂಗಳವಾರ ರಾಯಲ್ ಮಲೇಷಿಯನ್ ನೌಕಾದಳ(ಟಿಎಲ್‌ಡಿಎಂ)ವು ಪರೇಡ್‌ ನಡೆಸುತ್ತಿದ್ದಾಗ ಎರಡು ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದುಕೊಂಡ ನಂತರ ಹತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಮಲೇಷಿಯನ್ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ಪಶ್ಚಿಮ ರಾಜ್ಯ ಪೆರಾಕ್‌ನ ಲುಮುಟ್ ನೌಕಾನೆಲೆಯಲ್ಲಿ ಮಂಗಳವಾರ ಬೆಳಗ್ಗೆ (0132 GMT) 9:32 ಗಂಟೆಗೆ ಸಂಭವಿಸಿದ ಅಪಘಾತದಲ್ಲಿ ಹೆಲಿಕಾಪ್ಟರ್‌ಗಳಲ್ಲಿದ್ದ ಎಲ್ಲಾ 10 ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು … Continued