ಮಂಡ್ಯ : ವೃದ್ಧ ಭಿಕ್ಷುಕಿ ನಿಧನ: ಮೃತಳ ಮನೆಯಲ್ಲಿ ಮೂಟೆಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಪತ್ತೆ…!

ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯನ್ನು ಶೋಧಿಸಿದಾಗ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾದ ಘಟನೆ  ಮಂಡ್ಯದ ಗುತ್ತಲು ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ.  ಮಂಡ್ಯ ನಗರದ ಗುತ್ತಲು ಬಡಾವಣೆಯ ನಿವಾಸಿಯಾಗಿದ್ದ ನೂರ್ (ಹೆಸರು) ಎಂಬ … Continued

ಕರ್ನಾಟಕದಲ್ಲಿ 4 ಸಾವಿರ ದಾಟಿದ H1N1 ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಎಚ್‌1ಎನ್‌1 (H1N1)ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ. ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ … Continued

ಸರ್ಕಾರಿ ಶಾಲೆಗೆ ಅನುಮತಿ ಇಲ್ಲದೆ ಪ್ರವೇಶ: ಸಿಜೆಪಿ ಸಂಚಾಲಕ ಅಭಿಜೀತ ದಿಪ್ಕೆ ವಿರುದ್ಧ ಎಫ್‌ಐಆರ್

 ಲಾತೂರ್:  ಅನುಮತಿ ಇಲ್ಲದೆ ಸರ್ಕಾರಿ ಶಾಲೆ ಪ್ರವೇಶಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದರ ಜೊತೆಗೆ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಚಾಲಕ ಅಭಿಜೀತ ದಿಪ್ಕೆ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶದ್‌ಬಾನೋ … Continued

ಎಫ್‌ಎಸ್‌ಎಸ್‌ಎಐ ಕಠಿಣ ಕ್ರಮ : ಆಹಾರ ಕಂಪನಿಗಳಿಗೆ 150, ಪಂಚತಾರಾ ಹೋಟೆಲ್‌ಗಳಿಗೆ 20ಕ್ಕೂ ಹೆಚ್ಚು ನೋಟಿಸ್

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ನಿಯಮಗಳನ್ನು ಉಲ್ಲಂಘಿಸುವ ಆಹಾರ ಉದ್ಯಮಗಳ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ವಿವಿಧ ವಲಯಗಳ ಆಹಾರ ಉದ್ಯಮ ಸಂಸ್ಥೆಗಳ ವಿರುದ್ಧ ಮಹತ್ವದ ಜಾರಿ ಕ್ರಮ ಕೈಗೊಂಡಿರುವುದಾಗಿ ಎಫ್‌ಎಸ್‌ಎಸ್‌ಎಐ(FSSAI) ಶನಿವಾರ ತಿಳಿಸಿದೆ. ಇದರ ಭಾಗವಾಗಿ ಆಹಾರ ಕಂಪನಿಗಳಿಗೆ … Continued

ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಮೃತಪಟ್ಟಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಯಿಂದ ಮೃತಪಟ್ಟವರನ್ನು ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರಳಿಕೃಷ್ಣ ಎಂಬ ಪ್ರವಾಸಿಗ ಎಂದು ಗುರುತಿಸಲಾಗಿದೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ … Continued

ಭಾರತ್‌ 6G ಟೆಸ್ಟ್‌ಬೆಡ್‌ನಲ್ಲಿ 6.39 Gbps ವೇಗದ ಡಾಟಾ ಟ್ರಾನ್ಸ್ಮಿಶನ್‌ : ಜಾಗತಿಕ 6G ತಂತ್ರಜ್ಞಾನದಲ್ಲಿ ಭಾರತದ ಮಹತ್ವದ ಸಾಧನೆ

ನವದೆಹಲಿ/ಚೆನ್ನೈ: ಮುಂದಿನ ಪೀಳಿಗೆಯ 6G ದೂರಸಂಪರ್ಕ ತಂತ್ರಜ್ಞಾನದಲ್ಲಿ ಭಾರತವು ಮಹತ್ವದ ಹೆಜ್ಜೆ ಇಟ್ಟಿದೆ. ಐಐಟಿ ಮದ್ರಾಸ್‌ನ (IIT Madras) ಸಂಶೋಧಕರು ಸಂಪೂರ್ಣ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಭಾರತ 6G ಟೆಸ್ಟ್‌ಬೆಡ್ ಬಳಸಿ, ಸೆಕೆಂಡಿಗೆ 6.39 ಗಿಗಾಬಿಟ್‌ (6.39 Gbps) ವೇಗದಲ್ಲಿ 6G ಡಾಟಾ ಪ್ರಸರಣವನ್ನು ಯಶಸ್ವಿಯಾಗಿ ಪ್ರದರ್ಶಿಸಿದ್ದಾರೆ. ಈ ಸಾಧನೆಯ ಮಹತ್ವ ಕೇವಲ ಸಾಧಿಸಲಾದ ವೇಗದಲ್ಲಿ ಮಾತ್ರ … Continued

23ನೇ ವಯಸ್ಸಿನಲ್ಲಿ ಕೊಲೆ ಮಾಡಿ ಪರಾರಿ : 42 ವರ್ಷಗಳ ಬಳಿಕ 65ನೇ ವಯಸ್ಸಿನಲ್ಲಿ ಈತ ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ !

ನವದೆಹಲಿ : ಕೊಲೆ ಪ್ರಕರಣವೊಂದರಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ 65 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 1984ರಲ್ಲಿ ಪಶ್ಚಿಮ ದೆಹಲಿಯ ಜನಕಪುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಆರೋಪಿ ನತ್ತು ಅಲಿಯಾಸ್ ನತ್ತೂಲಾಲ ಎಂಬ ಆರೋಪಿಯನ್ನು ಸೆಂಟ್ರಲ್ ರೇಂಜ್ ಕ್ರೈಂ ಬ್ರಾಂಚ್ ಹಲವು ತಿಂಗಳ ಸತತ … Continued

ಬಿಸಿಐ ಅಧ್ಯಕ್ಷ ಮನನ್‌ಕುಕುಮಾರ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿ ಪತ್ರ ಬರೆದ ಬಿಸಿಐ ಸಹ ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ

ನವದೆಹಲಿ: ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಸಹ ಅಧ್ಯಕ್ಷ ಹಾಗೂ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಮಿಶ್ರಾ ಅವರ ನೇತೃತ್ವದಲ್ಲಿ ದೇಶದ ಕಾನೂನು ವೃತ್ತಿಯ ಪರಮೋಚ್ಚ ಸಂಸ್ಥೆಯು ತನ್ನಿಂದ ನಿರೀಕ್ಷಿಸಲಾಗಿರುವ “ಮಾನದಂಡಗಳಿಂದ ದೂರ ಸರಿದಿದೆ” ಎಂದು ರೆಡ್ಡಿ ಆರೋಪಿಸಿದ್ದಾರೆ. … Continued

ವಿಜಯಪುರ : ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆಯೂ ನಾಪತ್ತೆ

ವಿಜಯಪುರ: ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ (Vijayapura Tragedy) ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇದೇ ವೇಳೆ ತಂದೆಯೂ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಲಕಿಯರನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ಇವರ … Continued

ಯಮುನಾ ಪ್ರವಾಹ ಪ್ರದೇಶ ಹಾನಿ ಪ್ರಕರಣ : ʼಆರ್ಟ್ ಆಫ್ ಲಿವಿಂಗ್ʼ ಫೌಂಡೇಶನ್‌ಗೆ ₹5 ಕೋಟಿ ದಂಡ ಮರುಪಾವತಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ :  ಶ್ರೀ ಶ್ರೀ ರವಿಶಂಕರ್ ನೇತೃತ್ವದ ‘ಆರ್ಟ್ ಆಫ್ ಲಿವಿಂಗ್’ (Art of Living) ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಿಂದ  ದೊಡ್ಡ ರಿಲೀಫ್ ಸಿಕ್ಕಿದ್ದು, 2016ರಲ್ಲಿ ದೆಹಲಿಯ ಯಮುನಾ ನದಿ ಪ್ರವಾಹ ಪ್ರದೇಶದಲ್ಲಿ ನಡೆದ ‘ವಿಶ್ವ ಸಂಸ್ಕೃತಿ ಉತ್ಸವ’ದಿಂದ ಪರಿಸರಕ್ಕೆ ಹಾನಿಯಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) … Continued