ವೀಡಿಯೊ…| ಇಸ್ರೋದ ಗಗನಯಾನ ಯೋಜನೆಗೆ ಡ್ರೋಗ್ ಪ್ಯಾರಾಚೂಟ್‌ಗಳ ಪರೀಕ್ಷೆ ನಡೆಸಿದ ಡಿಆರ್‌ ಡಿಒ

ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯು ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ (VSSC) ಸಹಯೋಗದೊಂದಿಗೆ ಇಸ್ರೋದ ಬಾಹ್ಯಾಕಾಶ ಯೋಜನೆಯಾದ ಗಗನಯಾನ ಸಿಬ್ಬಂದಿ ಮಾಡ್ಯೂಲ್ ಅನ್ನು ಬಾಹ್ಯಾಕಾಶದಿಂದ ಕೆಳಗಿಳಿಸುವಾಗ ಅದರ ವೇಗ ಕಡಿಮೆ ಮಾಡಲು ನಿರ್ಣಾಯಕವಾಗಿರುವ ಡ್ರಗ್ ಪ್ಯಾರಾಚೂಟ್‌ಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯದ (ಟಿಬಿಆರ್‌ಎಲ್) ರೈಲ್ … Continued

ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರು? ಐದಾರು ಹೆಸರುಗಳು ಮುಂಚೂಣಿಯಲ್ಲಿ…

ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಭಾನುವಾರ ಎನ್. ಬಿರೇನ್ ಸಿಂಗ್ ಅವರ ಹಠಾತ್ ಮತ್ತು ಅನಿರೀಕ್ಷಿತ ರಾಜೀನಾಮೆ ನೀಡಿದ ನಂತರ ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಹಲವು ಹೆಸರುಗಳು ಮೆನ್ನೆಲೆಗೆ ಬಂದಿವೆ. ಹಿಂಸಾಚಾರ ಪೀಡಿತ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರ ಸ್ವೀಕರಿಸುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ಅಧಿಕೃತ ಹೇಳಿಕೆ … Continued

ಇವಿಎಂ ಡೇಟಾಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಇವಿಎಂ(EVM) ದತ್ತಾಂಶಗಳನ್ನು‌( ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ (Supreme Court) ಚುನಾವಣಾ ಆಯೋಗಕ್ಕೆ ಮಂಗಳವಾರ(ಫೆ.11) ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದ್ದು, ಸದ್ಯಕ್ಕೆ ಇವಿಎಂನಿಂದ ಯಾವುದೇ ದತ್ತಾಂಶ ಅಳಿಸಬೇಡಿ ಅಥವಾ ಯಾವುದೇ … Continued

ಜಮ್ಮು- ಕಾಶ್ಮೀರ | ಭಯೋತ್ಪಾದಕರಿಂದ ಐಇಡಿ ಸ್ಫೋಟ ; ಇಬ್ಬರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು ನಡೆಸಿದ ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ ಮಧ್ಯಾಹ್ನ 3:50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಗಸ್ತು ತಿರುಗುತ್ತಿದ್ದ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. … Continued

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued

ವೀಡಿಯೊ…| ಮಹಾ ಕುಂಭಮೇಳಕ್ಕೆ ಹೋಗಲು ರೈಲು ಹತ್ತಲು ಸಾಧ್ಯವಾಗದ್ದಕ್ಕೆ ರೈಲಿನ ಕಿಟಿಕಿಯನ್ನೇ ಒಡೆದು ಹಾಕಿದ ಪ್ರಯಾಣಿಕರು…

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿರುವ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ರೈಲು ಹತ್ತಲು ಸಾಧ್ಯವಾಗದೆ ಸ್ವತಂತ್ರ ಸೇನಾನಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ನ ಗಾಜಿನ ಕಿಟಕಿಗಳನ್ನು ಒಡೆದ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ರೈಲು ಹತ್ತಲಾಗದೆ ಹತಾಶೆಗೊಂಡ ಪ್ರಯಾಣಿಕರು ರೈಲಿಗೆ ಕಲ್ಲು ಎಸೆದು ಎಸಿ ಕಂಪಾರ್ಟ್‌ಮೆಂಟ್‌ಗಳ ಗಾಜುಗಳನ್ನು … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್

ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್‌ ಅನ್ನು … Continued

ಹಾವೇರಿ | ದೇಹ ಮನೆಗೆ ಒಯ್ಯುವಾಗ ‘ಡಾಬಾ ಬಂತು ಊಟ ಮಾಡ್ತೀಯಾ’ ಎಂದು ಗೋಳಾಡಿದ ಪತ್ನಿ ; ಉಸಿರಾಟ ಆರಂಭಿಸಿದ ಮೃತ ವ್ಯಕ್ತಿ…!

ಹಾವೇರಿ : ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆತನ ಮೃತದೇಹವನ್ನು ಊರಿಗೆ ಕರೆತರುವ ಹಾದಿಯಲ್ಲಿ ಆತ ಬದುಕಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಈ ಘಟನೆ ನಡೆದಿದ್ದು, ಆಂಬುಲೆನ್ಸ್‌ನಲ್ಲಿ ದೇಹದ ಪಕ್ಕದಲ್ಲೇ ಕುಳಿತು ಗೋಳಾಡುತ್ತಿದ್ದ ಪತ್ನಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಹೇಳಿ ಕಣ್ಣೀರಿಟ್ಟಿದ್ದಾಳೆ. ಈ ವೇಳೆ ಮೃತ ಗಂಡ … Continued