‘ಕಾಮಿಡಿ ಕಿಲಾಡಿಗಳು-3’ ವಿಜೇತ ರಾಕೇಶ ಪೂಜಾರಿ ನಿಧನ

ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ ಪೂಜಾರಿ ( 33) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ಪರಿಚಯಸ್ಥರ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾಗ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಂದು, ಸೋಮವಾರ (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಲೋ … Continued

ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, … Continued

ಜಿನೀವಾ ಮಾತುಕತೆಯ ನಂತರ ಅಮೆರಿಕ-ಚೀನಾ ಮಧ್ಯೆ ವ್ಯಾಪಾರ ಒಪ್ಪಂದ

ಜಿನೀವಾ: ಹಾನಿಕಾರಕ ವ್ಯಾಪಾರ ಯುದ್ಧವನ್ನು ತಗ್ಗಿಸಲು ಚೀನಾದ ಉನ್ನತ ಆರ್ಥಿಕ ಅಧಿಕಾರಿಗಳೊಂದಿಗೆ ಅಮೆರಿಕ ನಡೆಸಿದ ಮಾತುಕತೆಗಳಲ್ಲಿ “ಗಣನೀಯ ಪ್ರಗತಿ” ಕಂಡುಬಂದಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಭಾನುವಾರ ವರದಿ ಮಾಡಿದ್ದಾರೆ. ಆದರೆ ಜಿನೀವಾದಲ್ಲಿ ಎರಡು ದಿನಗಳ ಮಾತುಕತೆಗಳು ಮುಕ್ತಾಯಗೊಂಡ ನಂತರ ತಲುಪಿದ ಒಪ್ಪಂದದ ಬಗ್ಗೆ ವಿವರಗಳನ್ನು ನೀಡಿಲ್ಲ. ಸೋಮವಾರ ವಿವರಗಳನ್ನು ಪ್ರಕಟಿಸಲಾಗುವುದು ಮತ್ತು … Continued

‘ಹಾವಿನ ತಲೆಗಾಗಿ ಹೋಗಿದ್ದೇವೆ….’: ಪಾಕ್ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯ ಬಗ್ಗೆ

ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲಾಳುಗಳನ್ನಲ್ಲ” ಎಂದು ಸರ್ಕಾಋವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು … Continued

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ … Continued

ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ

ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ. ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ … Continued

ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ … Continued

ವೀಡಿಯೊ..| ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 40 ಯೋಧರು, 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವು ; ಡಿಜಿಎಂಒ ರಾಜೀವ ಘಾಯ್‌

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಅಡಿಯಲ್ಲಿ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಕ್ಕೆ ನುಗ್ಗಿ 9 ಪ್ರಮುಖ ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳ ಮೇಲೆ ನಡೆಸಿದ ನಿಖರ ದಾಳಿದಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆʼʼ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO), ಲೆಫ್ಟಿನೆಂಟ್‌ ಜನರಲ್‌ ರಾಜೀವ ಘಾಯ್‌ ಹೇಳಿದ್ದಾರೆ. ಭಾರತ … Continued

ಆಪರೇಷನ್ ಸಿಂಧೂರ : ಬ್ರಹ್ಮೋಸ್ ಕ್ಷಿಪಣಿ ಬಳಸಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಮಾಡಿದ ಭಾರತ; ಪಟ್ಟಿ ಇಲ್ಲಿದೆ…

ನವದೆಹಲಿ: ಪಾಕಿಸ್ತಾನದ ವಾಯುನೆಲೆಗಳನ್ನು ಹೊಡೆದುರುಳಿಸಲು ಮತ್ತು ನಾಶಮಾಡಲು ಭಾರತ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿತು. ಪಾಕಿಸ್ತಾನದ ಕನಿಷ್ಠ 11 ವಾಯುನೆಲೆಗಳ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಿವೆ. ಪಶ್ಚಿಮ ಗಡಿ ಮತ್ತು ನಿಯಂತ್ರಣ ರೇಖೆ (LoC) ಉದ್ದಕ್ಕೂ ಪಾಕಿಸ್ತಾನದ ಆಕ್ರಮಣಕಾರಿ ಕ್ರಮಗಳಿಗೆ ನಿರ್ಣಾಯಕ ಪ್ರತಿಕ್ರಿಯೆಯಾಗಿ, ಭಾರತೀಯ ಸಶಸ್ತ್ರ ಪಡೆಗಳು ಶನಿವಾರ (ಮೇ 10) ಪಾಕಿಸ್ತಾನದ ತಾಂತ್ರಿಕ ಸೌಲಭ್ಯಗಳು, … Continued

ಯುದ್ಧ ನಿಲ್ಲಿಸುವಂತೆ ಅಮೆರಿಕಕ್ಕೆ ಪಾಕಿಸ್ತಾನ ಗೋಗರೆದಿದ್ದೇಕೆ..? ಭಾರತದ ಬ್ರಹ್ಮೋಸ್‌ ಶಕ್ತಿಗೆ ಪಾಕ್‌ ಪರಮಾಣು ಶಸ್ತ್ರಾಗಾರದ ಬಳಿಯ ಮಿಲಿಟರಿ ನೆಲೆಗಳು ಧ್ವಂಸ ; ಪಾಕ್‌ ಕಂಗಾಲು…!

ನವದೆಹಲಿ: ಗಡಿ ನಿಯಂತ್ರಣ ರೇಖೆ(LoC)ಯಾದ್ಯಂತ ನಾಲ್ಕು ದಿನಗಳ ನಿಖರವಾದ ಕ್ಷಿಪಣಿ ದಾಳಿಗಳು, ಡ್ರೋನ್ ಆಕ್ರಮಣಗಳು ಮತ್ತು ಫಿರಂಗಿ ಯುದ್ಧಗಳ ನಂತರ, ಭಾರತ ಮತ್ತು ಪಾಕಿಸ್ತಾನವು ಮೇ 10 ರ ಸಂಜೆಯಿಂದ ಜಾರಿಗೆ ಬರುವಂತೆ ಭೂಮಿ, ವಾಯು ಮತ್ತು ಸಮುದ್ರದಲ್ಲಿನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಒಪ್ಪಿಕೊಂಡಿವೆ. ಕದನ ವಿರಾಮದ ಘೋಷಣೆಯಾದ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನವು … Continued