ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ ಶುಕ್ರವಾರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು … Continued

ವೀಡಿಯೊ…| ವೈಷ್ಣೋದೇವಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಭಜನೆ ಹಾಡಿದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ…!

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ (Jammu & Kashmir) ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಅವರು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಜನೆ ಹಾಡಿದ್ದಾರೆ. ಮಾತಾ ವೈಷ್ಣೋದೇವಿ ತೀರ್ಥೋದ್ಭವದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ‘ತುನೆ ಮುಜೆ ಬುಲಾಯ ಶೆರಾವಾಲಿಯೇ’ ಭಜನೆ … Continued

ಪತ್ನಿಯ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಬೆಂಗಳೂರು : ವಿಚ್ಛೇದನ (divorce) ಅರ್ಜಿಯನ್ನು ಹಿಂಪಡೆಯಲು ಪತ್ನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ಗುರುವಾರ ನಡೆದಿದೆ. ಪತ್ನಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವ್ಯಕ್ತಿ ತನ್ನ ಪತ್ನಿಯ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತ ಪತಿ 39 ವರ್ಷ ವಯಸ್ಸಿನ ಮಂಜುನಾಥ ಕುಣಿಗಲ್ ಪೇಟೆಯಲ್ಲಿ ವಾಸವಿದ್ದ ಎಂದು ಪೊಲೀಸರು … Continued

ಅಮೆರಿಕದ ಜನ್ಮದತ್ತ ಪೌರತ್ವ ಹಕ್ಕು ರದ್ದತಿಯ ಟ್ರಂಪ್‌ ಆದೇಶಕ್ಕೆ ಫೆಡರಲ್‌ ಕೋರ್ಟ್‌ ತಡೆ

ಅಮೆರಿಕದ ಫೆಡರಲ್ ನ್ಯಾಯಾಧೀಶರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೇಶದಲ್ಲಿ ಜಾರಿಯಲ್ಲಿರುವ ಜನ್ಮದತ್ತ ಪೌರತ್ವದ ಹಕ್ಕನ್ನು ರದ್ದುಪಡಿಸುವ ಕಾರ್ಯಕಾರಿ ಆದೇಶವನ್ನು ತಡೆಹಿಡಿದಿದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಗುರುವಾರ ವರದಿ ಮಾಡಿದೆ. ನ್ಯಾಯಾಧೀಶರು ಆದೇಶವನ್ನು “ಅಸಂವಿಧಾನಿಕ” ಎಂದು ಕರೆದಿದ್ದಾರೆ. ನಾಲ್ಕು ಡೆಮಾಕ್ರಟಿಕ್ ನೇತೃತ್ವದ ರಾಜ್ಯಗಳ ಅರ್ಜಿಯನ್ನು ಪರಿಗಣಿಸಿರುವ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಜಾನ್ ಕೊಘೆನರ್ ಅವರು … Continued

ವೀಡಿಯೊ…| ವೃದ್ಧೆ ಮೇಲೆ ದಾಳಿ ನಡೆಸಿ ಎಳೆದಾಡಿದ ನಾಯಿಗಳ ಗುಂಪು ; ವೃದ್ಧೆಗೆ 40 ಹೊಲಿಗೆ…!

ಪಂಜಾಬ್‌ನ ಖನ್ನಾದ ನೈ ಅಬಾದಿಯಲ್ಲಿ ಬುಧವಾರ ಬೀದಿ ನಾಯಿಗಳು ವೃದ್ಧ ಮಹಿಳೆಯ ಮೇಲೆ ದಾಳಿ ಮಾಡುತ್ತಿರುವ ಆಘಾತಕಾರಿ ವೀಡಿಯೊ ಹೊರಬಿದ್ದಿದೆ. ಮನೆಕೆಲಸದವಳಾಗಿರುವ ವೃದ್ಧೆ ಮನೆಯ ಗೇಟ್ ಕಡೆಗೆ ನುಗ್ಗಿ ಪಾರಾಗಲು ಪ್ರಯತ್ನಿಸಿದರೂ ನಾಯಿಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಬೀದಿ ನಾಯಿ ವೃಧೆಯ ಬಟೆಯನ್ನು ಹಿಡಿದೆಳೆದು ಅವಳು ಕೆಳಗೆ ಬೀಳುವಂತೆ ಮಾಡಿತು. ಇತರ ನಾಯಿಗಳು ಬೇಗನೆ ವೃದಧೆಯನ್ನು … Continued

ತರಗತಿಯಿಂದ ಹೊರನಡೆದು 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ ; ದೃಶ್ಯ ಸೆರೆ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಕ್ರಾಂತಿ ರಜೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ವಾಪಸಾದ ಸ್ವಲ್ಪ ಸಮಯದಲ್ಲೇ ಬೆಳಗ್ಗೆ 10:30ರ ಸುಮಾರಿಗೆ ವಿದ್ಯಾರ್ಥಿ ಮೂರನೇ ಮಹಡಿಯಿಂದ … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅವಾಚ್ಯ ಶಬ್ದ ಬಳಕೆ ಆರೋಪದ ಪ್ರಕರಣ :ಸಿ.ಟಿ.ರವಿಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಯಾವುದೇ ಆತುರದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ಮಾಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ … Continued

ಕರ್ನಾಟಕ ವಿವಿ ಕನ್ನಡ ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಆರೋಪ ; ಭುಗಿಲೆದ್ದ ವಿವಾದ

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದ (Karnatak University) ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಈಗ ಪಠ್ಯ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಸಾರಂಗ ಮುದ್ರಿಸಿರುವ, ಪದವಿ ಕನ್ನಡ ಪಠ್ಯ ಪುಸ್ತಕದ ಬೆಳಗು -1 ಕೃತಿಯಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಧಾರವಾಡದ ನ್ಯಾಯವಾದಿ ಅರುಣ ಜೋಶಿ ಆಕ್ಷೇಪಿಸಿದ್ದಾರೆ. ʼʼಬಿಎ, … Continued

ಗೂಡ್ಸ್​​ ವಾಹನ ಪಲ್ಟಿ : 25ಕ್ಕೂ ಹೆಚ್ಚು ನರೇಗಾ ಕೂಲಿ ಕಾರ್ಮಿಕರಿಗೆ ಗಾಯ

ಬೆಳಗಾವಿ: ನರೇಗಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಗೂಡ್ಸ್‌ ಪಲ್ಟಿಯಾಗಿ 25 ಕ್ಕೂ ಅಧಿಕ ಕೆಲಸಗಾರರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಂಗೆ ನರೇಗಾ ಕೆಲಸಕ್ಕೆಂದು ಕೂಲಿ ಕಾರ್ಮಿಕರು ಗೂಡ್ಸ್‌ ವಾಹನದಲ್ಲಿ ಹೊರಟಿದ್ದರು. ಈ ವೇಳೆ ಅಡ್ಡ … Continued

ಚಲನಚಿತ್ರ ನಿರ್ದೇಶಕ ರಾಮಗೋಪಾಲ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ

ಹೈದರಾಬಾದ್‌ ; ಖ್ಯಾತ ಚಲನಚಿತ್ರ ನಿರ್ಮಾಪಕ  ಹಾಗೂ ನಿರ್ದೇಶಕ  ರಾಮಗೋಪಾಲ ವರ್ಮಾ ಅವರಿಗೆ ಮುಂಬೈ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ತೀರ್ಪು ಹಲವಾರು ವರ್ಷಗಳಿಂದ ನಡೆಯುತ್ತಿರುವ ಕಾನೂನು ಹೋರಾಟದ ನಂತರ ಬಂದಿದೆ. ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಕೂಡ ಹೊರಡಿಸಲಾಗಿದೆ. ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು … Continued