ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಿತು. ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

 ನವದೆಹಲಿ : ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಸಂದೇಶಗಳ ಎನ್‌ಕ್ರಿಪ್ಶನ್ ಅನ್ನು ಬಹಿರಂಗ ಮಾಡಲು ಒತ್ತಾಯಿಸಿದರೆ “ಭಾರತದಿಂದ ನಿರ್ಗಮಿಸಬೇಕಾಗುತ್ತದೆ” ಎಂದು ವಾಟ್ಸಾಪ್ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್ ಭರವಸೆ ನೀಡುವ ಗೌಪ್ಯತೆ ಮತ್ತು ಗೂಢಲಿಪೀಕರಣ ಸಂದೇಶಗಳು ಅಂತ್ಯದಿಂದ ಅಂತ್ಯದವರೆಗೆ ಎನ್‌ಕ್ರಿಪ್ಟ್ ಆಗಿರುವುದರಿಂದ ಜನರು ಅದನ್ನು ಬಳಸುತ್ತಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಎಂಡ್-ಟು-ಎಂಡ್ … Continued

ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ…

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ನಡೆಯುತ್ತಿದೆ. ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಬಿಹಾರದ ತಲಾ 5 ಕ್ಷೇತ್ರಗಳು, … Continued

ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ಮೊರೆನಾ : ಇಂದಿರಾ ಗಾಂಧಿ ಅವರ ಹತ್ಯೆ ಬಳಿಕ ಅವರಿಗೆ ಸೇರಿದ ಆಸ್ತಿಗಳು ಹಾಗೂ ಕುಟುಂಬದ ಸ್ವತ್ತುಗಳು ಸರ್ಕಾರದ ವಶ ಆಗುವುದನ್ನು ತಪ್ಪಿಸಿ ಆಸ್ತಿ ಉಳಿಸಿಕೊಳ್ಳುವ ಸಲುವಾಗಿ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದು ಮಾಡಿದರು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಈಗ ಕಾಂಗ್ರೆಸ್ ಮತ್ತೆ ಪಿತ್ರಾರ್ಜಿತ ತೆರಿಗೆ … Continued