ಮುಡಾ ಹಗರಣದಲ್ಲಿ ಶಾಸಕ ಜಿ.ಟಿ. ದೇವೇಗೌಡಗೂ ಸಂಕಷ್ಟ: ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Devegowda) ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (Muda ) ಸೈಟ್‌ ಪಡೆಯುವಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ​ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ನ್ಯಾಯಾಲಯದಲ್ಲಿ … Continued

‘ಮಕ್ಕಳಿಲ್ಲದ ಮಹಿಳೆಯನ್ನು ಗರ್ಭ ಧರಿಸುವಂತೆ ಮಾಡಿ….10 ಲಕ್ಷ ರೂ. ಗಳಿಸಿ’: ಹೀಗೊಂದು ವಂಚನೆ ಜಾಲ ಭೇದಿಸಿದ ಪೊಲೀಸರು…!

ಪಾಟ್ನಾ :  ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ನಂಬಿಸಿ ಮೋಸ ಮಾಡುವ ಒಂದು ವಿಶಿಷ್ಟ ಹಗರಣವೊಂದನ್ನು ಬಿಹಾರ ಪೊಲೀಸರು ಭೇದಿಸಿದ್ದಾರೆ. ಶುಕ್ರವಾರ, ಪೊಲೀಸರು ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರನ್ನು ನವಾಡ ಜಿಲ್ಲೆಯ ಪ್ರಿನ್ಸ್ ರಾಜ, ಭೋಲಾಕುಮಾರ ಮತ್ತು ರಾಹುಲ್ ಕುಮಾರ ಎಂದು ಗುರುತಿಸಲಾಗಿದೆ. ಪೊಲೀಸರು ಅದನ್ನು ಭೇದಿಸಿ ಮೂವರನ್ನು … Continued

ಚಿಕ್ಕಮಗಳೂರು | ಶರಣಾದ 6 ನಕ್ಸಲರ ಶಸ್ತ್ರಾಸ್ತ್ರಗಳು ಪತ್ತೆ

ಚಿಕ್ಕಮಗಳೂರು : ಸರ್ಕಾರಕ್ಕೆ ಶರಣಾಗಿರುವ ಆರು ಮಂದಿ ನಕ್ಸಲರು ಬಳಸುತ್ತಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೂತಿಟ್ಟಿದ್ದರು. ನಕ್ಸಲರು ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ … Continued

ನೀಲಿ ತಾರೆಗೆ ಲಂಚ ಪ್ರಕರಣದಲ್ಲಿ ಟ್ರಂಪ್‌ ಅಪರಾಧಿ; ಬೇಷರತ್‌ ಬಿಡುಗಡೆಯೇ ಶಿಕ್ಷೆ..

ವಾಷಿಂಗ್ಟನ್ : ನೀಲಿ ಚಿತ್ರ ತಾರೆ ಸ್ಟಾರ್ಮಿ ಡೆನಿಯಲ್ಸ್ ಅವರಿಗೆ ಲಂಚ ನೀಡಿದ ಪ್ರಕರಣದಲ್ಲಿ ದೋಷಿಯಾಗಿರುವ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಜೈಲು ಶಿಕ್ಷೆ ನೀಡದೆ ಅವರಿಗೆ ಬಿಡುಗಡೆಯ ಶಿಕ್ಷೆ ನೀಡಿದ್ದಾರೆ. ಇದರರ್ಥ ಚುನಾಯಿತ ಅಧ್ಯಕ್ಷರು ತಮ್ಮ ಮೇಲಿನ ಆರೋಪಗಳಿಗೆ ತಪ್ಪಿತಸ್ಥರೆಂದು ಕಂಡುಬಂದಿದ್ದಾರೆ, ಆದರೆ ಅವರು ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವುದರಿಂದ ಯಾವುದೇ ಜೈಲು … Continued

ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

ಆಶಾ ಕಾರ್ಯಕರ್ತರಿಗೆ ತಿಂಗಳಿಗೆ 10 ಸಾವಿರ ರೂ. ನೀಡಲು ಸರ್ಕಾರದ ನಿರ್ಧಾರ; ಸಿದ್ದರಾಮಯ್ಯ

ಬೆಂಗಳೂರು/ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶುಕ್ರವಾರ ನಡೆದ ಆಶಾ ಕಾರ್ಯಕರ್ತೆಯರ ಮಾತುಕತೆ ಫಲಪ್ರದವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ.ಗಳು ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು … Continued

ಸಚಿನ್ ಆತ್ಮಹತ್ಯೆ ಪ್ರಕರಣ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ

ಬೀದರ : ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶುಕ್ರವಾರ ಐವರನ್ನು ಬಂಧಿಸಿದೆ ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎಂದು ಹೇಳಲಾಗುತ್ತಿರುವ ರಾಜು ಕಪನೂರು ಸೇರಿದಂತೆ ಒಟ್ಟು ಎಂಟು ಜನರ ಹೆಸರನ್ನು ಉಲ್ಲೇಖಿಸಿದ್ದರು. ಈ ಸಂಬಂಧ ಅಧಿಕಾರಿಗಳು … Continued

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ಪುತ್ರ, 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ತುಮಕೂರು: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತ್ರಿಶಾಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಎನ್ನಲಾಗಿದ್ದು, ವಿಶಾಲ ಸರ್ವೋದಯ ಸ್ಕೂಲ್‌ನಲ್ಲಿ 7ನೇ … Continued

ಗಮನಿಸಿ….| ಎಸ್​ ಎಸ್ ​ಎಲ್​ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ … Continued

ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ….!

ಮೀರತ್ : ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್‌  ಗಾರ್ಡನ್‌ ನಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಓರ್ವ ಪುರುಷ, ಓರ್ವ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ … Continued