ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಈಗ ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ … Continued

ನೂತನ ಪೋಪ್ ಆಗಿ ಆಯ್ಕೆಯಾದ ರಾಬರ್ಟ್ ಪ್ರೇವೋಸ್ಟ್

ರೋಮನ್ ಕ್ಯಾಥೋಲಿಕರಿಗೆ ಒಂದು ಐತಿಹಾಸಿಕ ಕ್ಷಣದಲ್ಲಿ, ಚಿಕಾಗೋದ ದಕ್ಷಿಣ ಉಪನಗರಗಳಿಂದ ಬಂದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಅವರು 267 ನೇ ಪೋಪ್ ಆಗಿ ಆಯ್ಕೆಯಾಗಿದ್ದಾರೆ. ಹಾಗೂ ಪೋಪ್ ಲಿಯೋ XIV ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ. ಪೋಪ್ ಫ್ರಾನ್ಸಿಸ್ ಅವರ ಮರಣದ ನಂತರ, 69 ವರ್ಷದ ಪ್ರೆವೋಸ್ಟ್ ಅವರು ಪೋಪ್ ಹುದ್ದೆಗೆ ಏರಿದ ಮೊದಲ ಅಮೇರಿಕನ್ … Continued

ಪಾಕಿಸ್ತಾನದ ದಾಳಿಗೆ ಭಾರತದ ಪ್ರತಿದಾಳಿ: ಪಾಕಿಸ್ತಾನದ 3 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತ…

ನವದೆಹಲಿ: ಭಾರತದ ಆಪರೇಷನ್ ಸಿಂಧೂರ್ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಭಾರತವು ಪಾಕಿಸ್ತಾನ ವಾಯುಪಡೆಯ ಮೂರು ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಪಾಕಿಸ್ತಾನವು ಭಾರತದೊಳಗೆ ದಾಳಿ ನಡೆಸಲು ಪ್ರಯತ್ನಿಸಿತು, ಆದರೆ ಭಾರತದ ರಕ್ಷಣಾ ವ್ಯವಸ್ಥೆಗಳು ಅದನ್ನು ವಿಫಲಗೊಳಿಸಿದವು. ವರದಿಗಳ ಪ್ರಕಾರ, ಪಾಕಿಸ್ತಾನವು ಭಾರತದ ವಾಯುಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದಾಗ … Continued

ಪಾಕಿಸ್ತಾನದ ಎಫ್ -16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನಗಳಲ್ಲಿ ಪಾಕಿಸ್ತಾನದ ಅಪ್ರಚೋದಿತ ದಾಳಿಗಳ ಮಧ್ಯೆ, ಗುರುವಾರ ಸಂಜೆ ಭಾರತವು ರಾಜಸ್ಥಾನದ ರಾಮಗಡ್ ವಲಯದಲ್ಲಿ ಶತ್ರುವಿನ F-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತೀಯ ವಾಯು ರಕ್ಷಣಾ ಘಟಕಗಳು ಸತ್ವಾರಿಯಲ್ಲಿರುವ ಆಯಕಟ್ಟಿನ ಜಮ್ಮು ವಿಮಾನ ನಿಲ್ದಾಣ ಸೇರಿದಂತೆ ಜಮ್ಮುವಿನ ಗಡಿ ಪ್ರದೇಶಗಳ ಕಡೆಗೆ ಪಾಕಿಸ್ತಾನ ಹಾರಿಸಿದ ಕನಿಷ್ಠ ಎಂಟು … Continued

ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ: ಲಾಹೋರ್, ಇಸ್ಲಾಮಾಬಾದ್ ಮೇಲೆ ಭಾರತದ ವಾಯು ದಾಳಿ

ನವದೆಹಲಿ: ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ನಂತರ ಭಾರತ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಜಮ್ಮು ವಿಮಾನನಿಲ್ದಾಣವು ಭಾರತೀಯ ವಾಯುಪಡೆಯ ನಿಲ್ದಾಣವನ್ನು ಸಹ ಹೊಂದಿದೆ. ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಇರುವ ಲಾಹೋರ್ ನಗರವನ್ನೇ ಗುರಿಯಾಗಿಸಿ … Continued

15 ನಗರಗಳ ಮೇಲೆ ಗುರಿಯಿಟ್ಟಿದ್ದ ಪಾಕ್ ಡ್ರೋನ್‌ಗಳು- ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ನಾಶ

ನವದೆಹಲಿ : ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನವು ಭಾರತೀಯ ಸೇನಾ ನೆಲೆಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದ್ದು, ಆದರೆ ಬಾರತ ಅದನ್ನು ವಿಫಲಗೊಳಿಸಿದೆ. ಭಾರತವು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಅಲ್ಲದೆ, ಪಾಕಿಸ್ತಾನದ​ ಫೈಟರ್​ ಜೆಟ್​ ಎಫ್‌-16 ಅನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ವಾಯುನೆಲೆ, … Continued

ಪಾಕಿಸ್ತಾನ್ ಮುರ್ದಾಬಾದ್ ಎಂದ ಬಾಲಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು…

ಶಹಜಹಾನಪುರ : ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ ವೈಮಾನಿಕ ದಾಳಿಯ ನಂತರ, ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯ ಹಳ್ಳಿಯಲ್ಲಿ ನಡೆದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರದ ಮೇಲೆ ಭಾರತ ನಡೆಸಿದ ವಾಯುದಾಳಿಯ ನಂತರ ಸಾರ್ವಜನಿಕರ ಸಂಭ್ರಮದ ವೇಳೆ ಎಂಟು ವರ್ಷದ … Continued

ಆಪರೇಷನ್ ಸಿಂಧೂರ | ಪಹಲ್ಗಾಮ್‌, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?

ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued

ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರೋಹಿತ್‌ ಶರ್ಮಾ

ನವದೆಹಲಿ : ಭಾರತದ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಅವರು, ಏಕದಿನ ಮಾದರಿಯಲ್ಲಿ ಮಾತ್ರ ಆಡುವುದಾಗಿ ಸ್ಪಷ್ಟಪಡಿಸಿದ್ದಾರೆ. 2024 ರ ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಟಿ20 ಸ್ವರೂಪದ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತರಾಗಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ 2024-25ರ … Continued