ನಾಲ್ವರು ವಿದ್ಯಾರ್ಥಿಗಳ ಸಾವಿನ ನಂತರ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ : ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದೆ. ಪ್ರ ಈ ಕುರಿತು ಎಸ್​ಪಿ ಎಂ.ನಾರಾಯಣ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದ ವತಿಯಿಂದ ಪ್ರವಾಸಕ್ಕೆ ಆಗಮಿಸಿದ್ದ ಉಳಿದ ವಿದ್ಯಾರ್ಥಿಗಳನ್ನು ಕೋಲಾರದ … Continued

ಮುರುಡೇಶ್ವರ ಬೀಚ್‌ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು

ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued

ಮುರುಡೇಶ್ವರ ; ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹುಡುಕಿ ತಂದಿವೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ಗುರುತಿಸಲಾಗಿದೆ. ಮುರುಡೇಶ್ವರದ ನವೀನ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ಎರಡು ಮೃತದೇಹ ಹಾಗೂ ಸಮುದ್ರದ ಅಳಿವೆಯಲ್ಲಿ … Continued

ಬಾಲಿವುಡ್‌ ನಟನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಪಹರಣ, ನಂತರ ಹಣಕ್ಕಾಗಿ 12 ಗಂಟೆಗಳ ಕಾಲ ಚಿತ್ರಹಿಂಸೆ…!

ನವದೆಹಲಿ : ಹಮ್‌ ಹೇ ರಾಹಿ ಪ್ಯಾರ್‌ ಕೆ ಮತ್ತು ವೆಲ್‌ಕಮ್‌ ಚಿತ್ರಗಳ ನಟನೆಗೆ ಹೆಸರಾದ ಚಲನಚಿತ್ರ ನಟ ಮುಷ್ತಾಕ್‌ ಖಾನ್‌ ಅವರನ್ನು ಅಪಹರಿಸಿ, ಗಂಟೆಗಟ್ಟಲೆ ಚಿತ್ರಹಿಂಸೆ ನೀಡಿ ₹ 2 ಲಕ್ಷ ನೀಡುವಂತೆ ಒತ್ತಾಯಿಸಿ ನಂತರ ದುಷ್ಕರ್ಮಿಗಳು ಪರಾರಿಯಾದ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ನವೆಂಬರ್ 20 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ … Continued

2024ರಲ್ಲಿ ಗೂಗಲ್‌ ನಲ್ಲಿ ಭಾರತೀಯರು ಅತಿಹೆಚ್ಚು ಸರ್ಚ್‌ ಮಾಡಿದ ವಿಷಯಗಳೇನು ಗೊತ್ತೆ..? ಇಲ್ಲಿದೆ ಪಟ್ಟಿ

ನವದೆಹಲಿ: 2024 ರ ವರ್ಷ ಮುಗಿದು ೨೦೨೫ಕ್ಕೆ ಕಾಲಿಡುವ ಹಂತದಲ್ಲಿದ್ದೇವೆ. ಈ ವರ್ಷ ಜನರು ಯಾವ ಯಾವ ವಿಷಯಗಳನ್ನು ಹೆಚ್ಚಾಗಿ ತಿಳಿದುಕೊಳ್ಳಲು ಇಷ್ಟಪಟ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ (Google) ಸರ್ಚ್ ಇಂಜಿನ್ ವಾರ್ಷಿಕವಾಗಿ ತನ್ನ ವಿಶೇಷ “ಇಯರ್ ಇನ್ ಸರ್ಚ್” ವರದಿಯಲ್ಲಿ ವಿವಿಧ ಥೀಮ್‌ಗಳಲ್ಲಿ ಹೆಚ್ಚು ಹುಡುಕಲಾದ ವಿಷಯಗಳ ಪಟ್ಟಿಯನ್ನು ಮಾಡುತ್ತದೆ. ಬಿಡುಗಡೆಯಾದ 2024 ರ … Continued

ಇನ್‌ಸ್ಟಂಟ್ ಲೋನ್ ಆ್ಯಪ್‌ನಿಂದ ₹ 2,000 ಸಾಲ ಪಡೆದ ನಂತರ ನಿರಂತರ ಕಿರುಕುಳ ; 47 ದಿನಗಳ ಹಿಂದೆ ವಿವಾಹವಾದ ಯುವಕ ಆತ್ಮಹತ್ಯೆ…!

ಹೈದರಾಬಾದ್ : ಇನ್‌ಸ್ಟಂಟ್ (ತ್ವರಿತ) ಲೋನ್ ಆ್ಯಪ್‌ನಿಂದ ಕೇವಲ ₹ 2,000 ಸಾಲ ತೆಗೆದುಕೊಂಡ ನಂತರ ನಿರಂತರವಾಗಿ ಕಿರುಕುಳ ಎದುರಿಸುತ್ತಿದ್ದ 27 ವರ್ಷದ ಯುವಕ ವಿವಾಹವಾದ 47 ದಿನಗಳ ನಂತರ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೀವನೋಪಾಯಕ್ಕಾಗಿ ಮೀನು ಹಿಡಿಯುತ್ತಿದ್ದ ನರೇಂದ್ರ ಎಂಬವರು ಪ್ರತಿಕೂಲ ಹವಾಮಾನದ ಕಾರಣದಿಂದ ಕೆಲವು ತಿಂಗಳ ಹಿಂದೆ ಮೀನುಗಾರಿಕೆಗೆ … Continued

2025ರ ಬಗ್ಗೆ ನಾಸ್ಟ್ರಾಡಾಮಸ್ ಭವಿಷ್ಯವಾಣಿಗಳು: ಮುಂದಿನ ವರ್ಷ ಏನೆಲ್ಲ ಗಂಡಾಂತರ ಕಾದಿದೆ..?

2024ರ ವರ್ಷ ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆಯೇ 2025ರ ಬಗ್ಗೆ ನಾಸ್ಟ್ರಾಡಾಮಸ್‌ ಹೇಳಿದ ಶತಮಾನಗಳ ಹಿಂದಿನ ಭವಿಷ್ಯವಾಣಿಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ. 16 ನೇ ಶತಮಾನದ ಫ್ರೆಂಚ್ ಜ್ಯೋತಿಷಿ ಮತ್ತು ವೈದ್ಯರಾದ ನಾಸ್ಟ್ರಾಡಾಮಸ್ ಅವರು, ಜರ್ಮನಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ ಉದಯ, 9/11 ದಾಳಿಗಳು ಮತ್ತು ಕೋವಿಡ್‌-19 ಸಾಂಕ್ರಾಮಿಕ ರೋಗಗಳು ಇವೇ ಮೊದಲಾದವುಗಳ ಬಗ್ಗೆ ಶತಮಾನಗಳ ಹಿಂದೆಯೇ … Continued

ವೀಡಿಯೊ..| ಹೆದ್ದಾರಿ ಬದಿ ಇದ್ದ ಹೊಟೇಲ್‌ ಒಳಗೆ ನುಗ್ಗಿದ ಕಾರು ; ಮೂವರಿಗೆ ಗಾಯ

ಅಹಮದಾಬಾದ್ : ಕಾರೊಂದು ರಸ್ತೆ ಬದಿಯ ರೆಸ್ಟೋರೆಂಟಿಗೆ ನುಗ್ಗಿದ ಘಟನೆ ಗುಜರಾತ್‌ ಛೋಟಾ ಉದಯಪುರ (Chhota Udaipur) ಜಿಲ್ಲೆಯಿಂದ ವರದಿಯಾಗಿದ್ದು, ಸಿಸಿ ಕೆಮರಾದಲ್ಲಿ ದಾಖಲಾಗಿದ್ದ ಈ ಅಪಘಾತದ ವೀಡಿಯೊದಲ್ಲಿ ಸೆರೆಯಾಗಿದೆ. ರೆಸ್ಟೊರೆಂಟ್ ಒಂದರಲ್ಲಿ ಗ್ರಾಹಕರು ಆಹಾರ ಸೇವಿಸುತ್ತ ಕುಳಿತಿದ್ದಾಗ ಕಾರೊಂದು ಸೀದಾ ರೆಸ್ಟೊರೆಂಟ್ ಒಳಗೇ ನುಗ್ಗಿದೆ. ಕ್ಷಣಮಾತ್ರದಲ್ಲಿ ಆ ಹೊಟೇಲನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಡಿ.10ರ ಬೆಳ್ಳಂಬೆಳಗ್ಗೆ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; ಹಳದಿ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಗಳಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 12 ಮತ್ತು 13 … Continued

ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ … Continued