ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued

ಮೈ ಜುಂ ಎನ್ನುವ ವೀಡಿಯೊ : ಒಮ್ಮೆಗೇ ಧುಮ್ಮಿಕ್ಕಿದ ನೀರಿನ ಝರಿಯಲ್ಲಿ ಜಾರಿಬಿದ್ದ 6 ಮಹಿಳೆಯರು ಸ್ವಲ್ಪದರಲ್ಲೇ ಪಾರು…!

ಗಯಾ: ಬಿಹಾರದ ಗಯಾ ಜಿಲ್ಲೆಯ ಲಂಗುರಿಯಾ ಬೆಟ್ಟದ  ದೊಡ್ಡ ಝರಿಯಲ್ಲಿ ಹಠಾತ್‌ ಹೆಚ್ಚಾದ ನೀರಿನ ರಭಸಕ್ಕೆ ಜಾರಿದ ಆರು ಮಹಿಳೆಯರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ನಡೆದ ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಲಮೂಲಗಳ ಬಳಿ ಮಳೆಗಾಲದ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜ್ಞಾಪನೆಯೂ ಆಗಿದೆ. ಸುಮಾರು ಎರಡು … Continued

ಮಳೆಯಲ್ಲಿ ಆಟವಾಡುತ್ತೇನೆಂದು ಹಠ ಮಾಡಿದ್ದಕ್ಕೆ 10 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಂದ ತಂದೆ…!

ನವದೆಹಲಿ: ದೆಹಲಿಯಲ್ಲಿ ಶನಿವಾರ 10 ವರ್ಷದ ಬಾಲಕನೊಬ್ಬ ಮಳೆಯಲ್ಲಿ ಆಟವಾಡಲು ಹೊರಗೆ ಹೋಗಬೇಕೆಂದು ಹಠ ಮಾಡಿದಕ್ಕೆ ಆತನ ತಂದೆ ಆತನನ್ನು ಇರಿದು ಕೊಂದಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಪರಾಧಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ, ದಾದಾದೇವ ಆಸ್ಪತ್ರೆಯಿಂದ ಪೊಲೀಸರಿಗೆ ಮಗುವಿಗೆ ಇರಿತದ ಗಾಯಗಳಾದ ಬಗ್ಗೆ ಕರೆ ಬಂದಿತು. ತನಿಖಾಧಿಕಾರಿ ತಕ್ಷಣ ಆಸ್ಪತ್ರೆಗೆ … Continued

ಬೆಳಗಾವಿ | ಮರಕ್ಕೆ ಕಟ್ಟಿ ಐವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ಥಳಿತ

ಬೆಳಗಾವಿ : ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ಯುವಕರ ಗುಂಪು ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿವೆ. ಗೋ ಸಾಗಣೆ ತಡೆಯಲು ಮುಂದಾಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಘಟನೆಗೂ ಗೋ ರಕ್ಷಣೆಗೂ … Continued

ಜುಲೈ 7ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.ಜೂನ್‌ 30ರಿಂದ ದಕ್ಷಿಣ ಕನ್ನಡ, … Continued

ವೀಡಿಯೊ..| ಭಾಷಣ ಮಾಡುತ್ತಿದ್ದಾಗ ಪೋಡಿಯಂಗೆ ಅಪ್ಪಳಿಸಿದ ಡ್ರೋನ್ ; ಸ್ವಲ್ಪದರಲ್ಲೇ ಪಾರಾದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

ಪಾಟ್ನಾ : ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ರ್ಯಾಲಿಯ ಸಂದರ್ಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವೇದಿಕೆಯ ಮೇಲೆ ಡ್ರೋನ್ ಅಪ್ಪಳಿಸಿದ ಪರಿಣಾಮ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ‘ವಕ್ಫ್ ಬಚಾವೋ, ಸಂವಿಧಾನ್ ಬಚಾವೋ ಸಮ್ಮೇಳನ’ (ವಕ್ಫ್ ಉಳಿಸಿ, ಸಂವಿಧಾನವನ್ನು ಉಳಿಸಿ) ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. … Continued

ಕುಟುಂಬ ಇಲ್ಲ, ಇಂಗ್ಲಿಷ್ ಗೊತ್ತಿಲ್ಲ : ಅಮೆರಿಕಕ್ಕೆ ಹೋದ ಭಾರತೀಯ ಯುವತಿ ನಾಪತ್ತೆ

ನವದೆಹಲಿ: ಅರೇಂಜ್ಡ್‌ ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ಪ್ರಾರಂಭಿಸಿ ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ಸ್ಥಳೀಯ ಪೊಲೀಸರು ಸಿಮ್ರಾನ್ ಸಿಮ್ರಾನ್ ಎಂದು ಗುರುತಿಸಲಾದ ಮಹಿಳೆ ತನ್ನ ಫೋನ್ ಪರಿಶೀಲಿಸುತ್ತಾ ಸುತ್ತಲೂ ನೋಡುತ್ತಿರುವುದು ಕಂಡುಬಂದಿದೆ. ಬುಧವಾರ ಕಾಣೆಯಾಗುವ ಮೊದಲು ಅವರು ಯಾರಿಗೋ ಕಾಯುತ್ತಿರುವಂತೆ ತೋರುತ್ತಿದೆ … Continued

ಭಿನ್ನಮತ, ಸಂಪುಟ ಪುನರ್ರಚನೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿರುವ ರಾಜ್ಯ ಉಸ್ತುವಾರಿ ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನದ ನಡುವೆ ಕರ್ನಾಟಕದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಕ್ಷದೊಳಗಿನ ಆಂತರಿಕ ಗೊಂದಲ ಹಾಗೂ ಅಸಮಾಧಾನ ಪರಿಹರಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಸೋಮವಾರ (ಜೂನ್‌ ೩೦) … Continued

ಬೆಂಗಳೂರು : ಮಹಿಳೆ ಶವವನ್ನು ಮೂಟೆಕಟ್ಟಿ ತುಂಬಿ ಕಸದ ಲಾರಿಯಲ್ಲಿ ಎಸೆದು ಪರಾರಿ

ಬೆಂಗಳೂರು: ಮಹಿಳೆಯ ಮೃತದೇಹವನ್ನು ಚೀಲದೊಳಗೆ ತುಂಬಿಸಿ, ಕುತ್ತಿಗೆಗೆ ಕಾಲುಗಳನ್ನು ಕಟ್ಟಿ, ಪುರಸಭೆಯ ಕಸದ ಲಾರಿಯಲ್ಲಿ ಎಸೆದ ಘಟನೆ ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿ ಬೆಳಕಿಗೆ ಬಂದಿದೆ. ಚನ್ನಮ್ಮನಕೆರೆ ಸ್ಕೇಟಿಂಗ್ ಮೈದಾನದ ಬಳಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಯ ಹಿಂಭಾಗದ ಲಿಫ್ಟ್‌ನಲ್ಲಿ ಶವ ಪತ್ತೆಯಾಗಿದೆ. ಮಹಿಳೆ ಸುಮಾರು 25-30 ವರ್ಷ ವಯಸ್ಸಿನವರು ಎಂದು ನಂಬಲಾಗಿದೆ. … Continued