ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

ಬೆಂಗಳೂರು : ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿತ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ ಎಂದು ವರದಿಯಾಗಿದೆ. 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಧಾರವಾಡದ … Continued

10ನೇ ಬಾರಿಗೆ ರೆಪೋ ದರ ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ (Repo Rate)ವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಸದ್ಯಕ್ಕೆ ಇಳಿಕೆ ಮಾಡುವುದು ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee) ಹೆಚ್ಚಿನ ಸದಸ್ಯರು ಅಭಿಪ್ರಾಯಪಟ್ಟ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು … Continued

ರಾಮನಗರ ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ ರಾಜಸ್ಥಾನ ಗಣಿ ಉದ್ಯಮಿ

ರಾಮನಗರ : ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿ ಹಾಗೂ 3 ಸಾವಿರ ಎಕರೆಯ ಭೂಮಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿದ್ದು, ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಓಸ್ವಾಲ್‌ ಜೈನ್‌ ಅವರು … Continued

ಇಂದು ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ (ಅಕ್ಟೋಬರ್‌ 9) ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಚಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ … Continued

ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟ : ಮತ್ತೊಮ್ಮೆ ಠುಸ್‌ ಪಟಾಕಿಯಾದ ಎಕ್ಸಿಟ್ ಪೋಲ್‌ಗಳು…!

ನವದೆಹಲಿ: ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಪ್ರಕಟಿಸಿದ್ದು, ಹರಿಯಾಣದಲ್ಲಿ ಬಿಜೆಪಿ ಬಹುಮತ ಪಡೆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) -ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತ ಪಡೆದಿದೆ. ಈ ಫಲಿತಾಂಶಗಳು ಮತ್ತೊಮ್ಮೆ ಎಕ್ಸಿಟ್ ಪೋಲ್‌ಗಳು ಹೇಳಿದ್ದು ಠುಸ್‌ ಆಗಿದೆ. ಅದು ಹರಿಯಾಣದಲ್ಲಿ ಕಾಂಗ್ರೆಸ್‌ಗೆ … Continued

ವೀಡಿಯೊ…| ಭಾರತವನ್ನು ಹೊಗಳಿ ಹೆಚ್ಚುವರಿ ಲಗೇಜ್‌ ಶುಲ್ಕ ವಿಧಿಸಿದ ಪಾಕಿಸ್ತಾನದ ಸರ್ಕಾರಿ ಏರ್‌ಲೈನ್ಸ್‌ ವಿರುದ್ಧ ಹರಿಹಾಯ್ದ ಝಾಕಿರ್ ನಾಯ್ಕ್

ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರು ತಮ್ಮ ಪಾಕಿಸ್ತಾನದ ಭೇಟಿಯ ಸಮಯದಲ್ಲಿ ಅವರು ಆ ದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಹೆಚ್ಚುವರಿ ಸಾಮಾನು ಸರಂಜಾಮುಗಳ ಮೇಲೆ ವಿಧಿಸಿದ್ದ ಶುಲ್ಕ ಮನ್ನಾ ಮಾಡಲು ಪಾಕಿಸ್ತಾನದ ಸರ್ಕಾರಿ ಏರ್‌ಲೈನ್ಸ್‌ ನಿರಾಕರಿಸಿದ್ದಕ್ಕೆ ಗರಂ ಆಗಿದ್ದಾರೆ. ಪಾಕಿಸ್ತಾನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ತನ್ನ ಹೆಚ್ಚುವರಿ ಸಾಮಾ-ಸರಂಜಾಮುಗಳಿಗೆ ವಿಧಿಸಿಲಾಗಿದ್ದ ಶುಲ್ಕದಲ್ಲಿ ಶೇಕಡಾ 50 ರಷ್ಟು … Continued

ಹರಿಯಾಣ ವಿಧಾನಸಭೆ ಚುನಾವಣೆ 2024: ಹಿಸಾರ್‌ ಕ್ಷೇತ್ರದಿಂದ ಜಯಗಳಿಸಿದ ಭಾರತದ ಅತ್ಯಂತ ಶ್ರೀಮಂತ ಮಹಿಳೆ

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹಿಸಾರ್ 18,941 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಕಮಲ್ ಗುಪ್ತಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ ರಾರಾ ಅವರನ್ನು ಸೋಲಿಸಿದ್ದಾರೆ. ಹಿಸಾರ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದ ಸಾವಿತ್ರಿ ಜಿಂದಾಲ್ … Continued

ಜಾಟ್ ಕೇಂದ್ರೀಕೃತ ಪ್ರಚಾರದಿಂದ ಹಿಡಿದು ಒಳಜಗಳದ ವರೆಗೆ…: ಹರಿಯಾಣದಲ್ಲಿ ಕಾಂಗ್ರೆಸ್‌ ಆಘಾತಕಾರಿ ಸೋಲಿನ ಹಿಂದಿನ 5 ಕಾರಣಗಳು…

ನವದೆಹಲಿ: ಹರಿಯಾಣ ಚುನಾವಣೆಯ ಮತ ಎಣಿಕೆಗೆ ಮಂಗಳವಾರ ಬೆಳಗ್ಗೆ ಆರಂಭವಾದ ನಂತರ 9 ಗಂಟೆ ಸುಮಾರಿಗೆ ಕಾಂಗ್ರೆಸ್‌ ಬಿಜೆಪಿಗಿಂತ ಸಾಕಷ್ಟು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಲೇಬಿ ಹಂಚುವುದು ಮತ್ತು ಡೊಳ್ಳು ಬಾರಿಸುವ ಸಂಭ್ರಮಾಚರಣೆಯೂ ನಡೆದಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕಚೇರಿ ನಿರ್ಜನವಾಗಿತ್ತು. ಆದರೆ ಒಂದು ಗಂಟೆಯ ನಂತರ, ಟ್ರೆಂಡ್‌ ಸಂಪೂರ್ಣ ಬದಲಾಯಿತು. … Continued

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued