ವೀಡಿಯೊಗಳು…| ಹೆಬ್ರಿ : ಮೇಘ ಸ್ಫೋಟ, ದಿಢೀರ್‌ ಪ್ರವಾಹ, ಕೊಚ್ಚಿ ಹೋದ ವಾಹನಗಳು

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕೆಲವೆಡೆ ಭಾನುವಾರ ಮೇಘ ಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆಯಿಂದ ದಿಢೀರ್‌ ಪ್ರವಾಹ ಉಂಟಾಗಿ ಜನ ನಲುಗಿ ಹೋದ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 3:30 ರಿಂದ ಸಂಜೆ 4:30 ವರೆಗೆ ‘ಭಾರೀ ಗುಡುಗು- ಸಿಡಿಲು ಸಹಿತ ಮಳೆಯಾಗಿದ್ದು ದಿಢೀರ್ ಮೇಘ ಸ್ಫೋಟದಿಂದ ಭಾರೀ ಮಳೆ ಸುರಿದಿದೆ. ಮುದ್ರಾಡಿ … Continued

₹ 1,800 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ : ಇಬ್ಬರ ಬಂಧನ

ನವದೆಹಲಿ/ಭೋಪಾಲ್: ಗುಜರಾತ್‌ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮಧ್ಯಪ್ರದೇಶದ ಭೋಪಾಲ್ ಬಳಿಯ ಬಾಗ್ರೋಡಾ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಡ್ರಗ್ಸ್ ತಯಾರಿಕಾ ದಂಧೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಸುಮಾರು ₹ 1,800 ಕೋಟಿ ಮೌಲ್ಯದ ಮೆಫೆಡ್ರೋನ್ (MD) ಔಷಧಗಳನ್ನು … Continued

ಮುರುಡೇಶ್ವರ : ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು, ಓರ್ವನ ರಕ್ಷಣೆ

ಕಾರವಾರ : ಪ್ರವಾಸಕ್ಕೆ ಬಂದಿದ್ದ ವೇಳೆ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಮುದ್ರದ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ (17) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಿದ್ಯಾ ಸೌಧ … Continued

ಬಿಎಸ್‌ಎನ್ಎಲ್ ನಿಂದ ಬಳಕೆದಾರರಿಗೆ ದೊಡ್ಡ ಆಫರ್; 4G ಸ್ಪೀಡ್ ಜೊತೆ 24 GB ಡೇಟಾ ಫ್ರೀ…

ನವದೆಹಲಿ: ಖಾಸಗಿ ಕಂಪನಿಗಳ ಬೆಲೆ ಏರಿಕೆ ಮಾಡಿದ ನಂತರ ಬಿಎಸ್‌ಎನ್‌ಎಲ್ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈಗ ಬಿಎಸ್‌ಎನ್‌ಎಲ್ (BSNL) ಹೊಸ ಆಫರ್ ಬಿಡುಗಡೆ ಮಾಡಿದ್ದು, 24GB ಡೇಟಾ ಉಚಿತವಾಗಿ ನೀಡುವ ಘೋಷಣೆ ಮಾಡಿದೆ. ಆದರೆ ಇದಕ್ಕೆ ಒಂದು ಸಣ್ಣ ಷರತ್ತಿದೆ. ಬಿಎಸ್‌ಎನ್ಎಲ್ ಈ ತಿಂಗಳು 25ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಬಎಸ್‌ಎನ್ಎಲ್ ಸಂಸ್ಥೆ ಆರಂಭವಾಗಿ 24 ವರ್ಷ … Continued

ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ ಸಹ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸಹಕೈದಿಯೊಬ್ಬನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಮೇಲೆ ಜೈಲಿನಲ್ಲಿ ಹಲ್ಲೆ ಮಾಡಲಾಗಿದೆ. ಬಿಹಾರದ ಮೂಲದ ಸದ್ಯ ಬೆಳಗಾವಿ ರಾಮತೀರ್ಥನಗರ ನಿವಾಸಿ ಹಿತೇಶಕುಮಾರ ಚವಾಣ ಹಲ್ಲೆಗೆ ಒಳಗಾದ ಕೈದಿಯಾಗಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಾದ ಬಸವರಾಜ … Continued

ವೀಡಿಯೊ ..| ʼರಾಮಲೀಲಾʼ ಪ್ರದರ್ಶನದ ವೇಳೆ ಅಭಿನಯಿಸುತ್ತಿದ್ದಾಗಲೇ ಹೃದಯಾಘಾತದಿಂದ ರಾಮನ ಪಾತ್ರಧಾರಿ ಸಾವು

ನವದೆಹಲಿ : ರಾಮಲೀಲಾದಲ್ಲಿ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಶಹದಾರದಲ್ಲಿರುವ ಜೈ ಶ್ರೀ ರಾಮಲೀಲಾ ವಿಶ್ವಕರ್ಮ ನಗರದಲ್ಲಿ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಪೂರ್ವ ದೆಹಲಿಯ ನಿವಾಸಿ ಸುಶೀಲ ಕೌಶಿಕ (45) ಅವರು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಆಭರಣಗಳಂತೆ … Continued

ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued

ವಿದೇಶೀ ವಿನಿಮಯ ಸಂಗ್ರಹ : 700 ಶತಕೋಟಿ ಡಾಲರ್ ದಾಟಿದ ವಿಶ್ವದ 4ನೇ ರಾಷ್ಟ್ರವಾದ ಭಾರತ…

ನವದೆಹಲಿ: ಇದೇ ಮೊದಲ ಬಾರಿಗೆ, ಭಾರತದ ವಿದೇಶಿ ವಿನಿಮಯ (forex) ಮೀಸಲು ಸಂಗ್ರಹ $700 ಬಿಲಿಯನ್ ಗಡಿಯನ್ನು ದಾಟಿದೆ. ಭಾರತದ ವಿದೇಶಿ ವಿನಿಮಯ ಮೀಸಲು ಸತತ ಏಳು ವಾರಗಳ ಗಮನಾರ್ಹ ಬೆಳವಣಿಗೆಯ ಸರಣಿಯನ್ನು ಮುಂದುವರೆಸಿದೆ. ಈ ಸಾಧನೆಯೊಂದಿಗೆ, ಭಾರತವು ಚೀನಾ, ಜಪಾನ್ ಮತ್ತು ಸ್ವಿಟ್ಜರ್ಲೆಂಡ್‌ ನಂತರ ಈ ಮೈಲಿಗಲ್ಲು ದಾಟಿದ ವಿಶ್ವದ ನಾಲ್ಕನೇ ಆರ್ಥಿಕತೆಯಾಗಿ ಹೊರಹೊಮ್ಮಿದೆ. … Continued

ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾದ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ಮುಂದೆಯೂ ಮಳೆಯಾಗಲಿದೆ ಎಂದು ತಿಳಿಸಿದೆ. ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ … Continued

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ : ಕೇಂದ್ರ ಸರ್ಕಾರ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು … Continued