ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಬೆಳಗಾವಿ: ಪರಿಶಿಷ್ಟ ಜಾತಿ (ಎಸ್​​ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್​​ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ಇದನ್ನು ವಿಧಾನ ಪರಿಷತ್‌ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ -2022 ಅನ್ನು ಕಳೆದ ಮಂಗಳವಾರ ಕಾನೂನು ಸಚಿವ ಜೆ.ಸಿ. … Continued

ಮಗಳ ಅಶ್ಲೀಲ ವೀಡಿಯೊ ಪ್ರಸಾರ ಮಾಡಿದ್ದನ್ನು ವಿರೋಧಿಸಿದ ಬಿಎಸ್‌ಎಫ್ ಯೋಧನ ಹತ್ಯೆ

ತನ್ನ ಮಗಳ ಅಶ್ಲೀಲ ವೀಡಿಯೊವನ್ನು ಪ್ರಸಾರ ಮಾಡುವುದನ್ನು ವಿರೋಧಿಸಿದ ನಂತರ ಗುಜರಾತ್‌ನ ನಾಡಿಯಾಡ್‌ನಲ್ಲಿ ಬಿಎಸ್‌ಎಫ್ ಯೋಧನೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಎನ್‌ಡಿಟಿವಿ ಸೋಮವಾರ ವರದಿ ಮಾಡಿದೆ. ಶನಿವಾರ ಚಕ್ಲಾಸಿ ಗ್ರಾಮದಲ್ಲಿ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ 15 ವರ್ಷದ ಹುಡುಗನ ಮನೆಗೆ ಬಿಎಸ್‌ಎಫ್ ಯೋಧ ಹೋಗಿದ್ದರು ಎಂದು ವರದಿ ತಿಳಿಸಿದೆ. ಅಲ್ಲಿ ಮನೆಯವರು ಯೋಧನ ಮೇಲೆ … Continued

ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆ ಎಂಬಂತೆ ಕಾಣುತ್ತಿರಲಿಲ್ಲ : ಕೂಪರ್ ಆಸ್ಪತ್ರೆಯ ಶವಾಗಾರದ ಸಿಬ್ಬಂದಿ ಪ್ರತಿಪಾದನೆ

ಮುಂಬೈ: ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣದ ಎರಡು ವರ್ಷಗಳ ನಂತರ ಇದು ಆತ್ಮಹತ್ಯೆ ಎಂದು ತೋರುತ್ತಿಲ್ಲ’ ಎಂದು ಕೂಪರ್ ಆಸ್ಪತ್ರೆಯ ಶವಾಗಾರದ ಸಿಬ್ಬಂದಿ ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ತಿಳಿಸಿದ್ದಾರೆ. ಸುಶಾಂತ ಸಿಂಗ್‌ ರಜಪೂತ್ ಅವರ ಮರಣೋತ್ತರ ಪರೀಕ್ಷೆ ನಡೆಸಿದ ಕೂಪರ್ ಆಸ್ಪತ್ರೆಯ ಶವಾಗಾರದ ಸೇವಕ ರೂಪ್‌ಕುಮಾರ್ ಶಾ ಅವರು ಪ್ರತಿಪಾದಿಸಿದ್ದಾರೆ … Continued

ಬಿಆರ್‌ಎಸ್‌ ಶಾಸಕರಿಗೆ ಆಮಿಷ ಪ್ರಕರಣ: ಸಿಬಿಐಗೆ ಪ್ರಕರಣ ಹಸ್ತಾಂತರಿಸಿದ ಹೈಕೋರ್ಟ್, ಕೆಸಿಆರ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ಅವರ ಬಿಆರ್‌ಎಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿಯ ನಾಲ್ವರು ಶಾಸಕರು ಮತ್ತು ಬಿಜೆಪಿ ನಡುವಿನ ‘ಪೋಚ್‌ಗೇಟ್’ ಪ್ರಕರಣವನ್ನು ತೆಲಂಗಾಣ ಹೈಕೋರ್ಟ್ ಇಂದು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವರ್ಗಾಯಿಸಿದೆ. ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣದ ತನಿಖೆ ನಡೆಸುತ್ತಿದ್ದ ತೆಲಂಗಾಣ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ … Continued

ಅಥಣಿ : ಜೈನ ಸಮಾಜದಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ

ಅಥಣಿ : ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ಪ್ರವಾಸ ತಾಣವನ್ನಾಗಿ ಮಾಡಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರ್ಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು, ಸೋಮವಾರ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ರಾಷ್ಟ್ರಪತಿ, ಹಾಗೂ ಪ್ರಧಾನಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ … Continued

ಲವ್‌ ಜಿಹಾದ್‌ ಬಗ್ಗೆ ಎಚ್ಚರ ವಹಿಸಿ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್

ಶಿವಮೊಗ್ಗ: ಪ್ರತಿಯೊಬ್ಬರೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರುವುದರಿಂದ ಕನಿಷ್ಠ ತಮ್ಮ ಮನೆಗಳಲ್ಲಿ ಆತ್ಮ ರಕ್ಷಣೆಗಾಗಿ ಚಾಕುಗಳನ್ನು ಇಟ್ಟುಕೊಳ್ಳಿ ಎಂದು ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಅವರು ಹಿಂದೂ ಸಮುದಾಯಕ್ಕೆ ಕರೆ ನೀಡಿದರು. ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ಘನತೆಗೆ ಧಕ್ಕೆಯಾದರೆ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ ಎಂದು ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ … Continued

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಹೊಸ ವರ್ಷಾಚರಣೆಗೆ ರಾತ್ರಿ 1ರ ಗಡುವು

ಬೆಳಗಾವಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ಆರ್ಥಿಕ ಚಟುವಟಿಕೆಗೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಮಾರ್ಗಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ ಮತ್ತು ಕಂದಾಯ … Continued

ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್‌ ಠಾಕ್ರೆ

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮತ್ತೆ ಮಹಾರಾಷ್ಟ್ರದ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ” ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿವಾದಿತ ಪ್ರದೇಶದ ನಿವಾಸಿಗಳು ಮರಾಠಿ ಮಾತನಾಡುವ ಜನರು ಎಂದು ಠಾಕ್ರೆ ಹೇಳಿದ್ದಾರೆ. ‘ಪ್ರಾದೇಶಿಕ ಭಾಷೆಗಳನ್ನಾಧರಿಸಿ ರಾಜ್ಯಗಳು … Continued

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಏಮ್ಸ್‌ಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಾದ ಕಾರಣಗಳು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ … Continued

ಸಾಲ ವಂಚನೆ ಪ್ರಕರಣ: ವೀಡಿಯೊಕಾನ್‌ ಮುಖ್ಯಸ್ಥ ವೇಣುಗೋಪಾಲ ಧೂತ್‌ ಅವರನ್ನು ಬಂಧಿಸಿದ ಸಿಬಿಐ

ಮುಂಬೈ: ಐಸಿಐಸಿಐ ಸಾಲ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಡಿಯೋಕಾನ್ ಗ್ರೂಪ್ ಪ್ರವರ್ತಕ ವೇಣುಗೋಪಾಲ ಧೂತ್ ಅವರನ್ನು ಬಂಧಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ ಕೊಚ್ಚರ ಅವರನ್ನು ಸಿಬಿಐ ಬಂಧಿಸಿತ್ತು. ಚಂದಾ ಕೊಚ್ಚರ್ ಮತ್ತು ಆಕೆಯ ಪತಿ ದೀಪಕ್ … Continued