40 ಅಡಿ ಆಳದ ಹೊಂಡಕ್ಕೆ ಕಾರು ಉರುಳಿ ಬಿದ್ದು 8 ಅಯ್ಯಪ್ಪ ಭಕ್ತರು ಸಾವು

ತೇಣಿ: ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಅಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಂಡಕ್ಕೆ ಉರುಳಿದ ಪರಿಣಾಮ ಕನಿಷ್ಠ ಎಂಟು ಅಯಪ್ಪ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಿದ್ದಾರೆ. ಭಕ್ತರು ಸನ್ಮುಗಸುಂದರಪುರಂ ಗ್ರಾಮದ ನಿವಾಸಿಗಳಾಗಿದ್ದು, ಶಬರಿಮಲೆಗೆ ಭೇಟಿ ನೀಡಿದ ನಂತರ ಮನೆಗೆ ಮರಳುತ್ತಿದ್ದರು. ಶುಕ್ರವಾರ ತಡರಾತ್ರಿ ಕಾರು ಪಲ್ಟಿಯಾಗಿದೆ.ಗಾಯಗೊಂಡ … Continued

ಕೋವಿಡ್ -19 : ಚೀನಾ, ಇತರ ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾದಲ್ಲಿ ಕೋವಿಡ್ -19 ಭಾರಿ ಉಲ್ಬಣದ ಸುದ್ದಿಯ ನಡುವೆ, ಭಾರತದ ಕೋವಿಡ್‌ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮಾಂಡವಿಯಾ ಶನಿವಾರ ಪ್ರಕಟಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು … Continued

ಲಾಟರಿಯಲ್ಲಿ ₹ 33 ಕೋಟಿ ಗೆದ್ದ ದುಬೈನಲ್ಲಿರುವ ಭಾರತೀಯ ಚಾಲಕ..!

ದುಬೈ: ಭಾರತದ ಮೂಲದ ದುಬೈ ಚಾಲಕ ಅಜಯ ಒಗುಲಾ ಅವರು ಎಮಿರೇಟ್ಸ್ ಡ್ರಾದಲ್ಲಿ 15 ಮಿಲಿಯನ್ ದಿರ್ಹಂ (₹ 33 ಕೋಟಿ) ಬಹುಮಾನ ಗೆದ್ದಿದ್ದಾರೆ. “ನಾನು ಜಾಕ್‌ಪಾಟ್ ಹೊಡೆದಿದ್ದೇನೆ ಎಂದು ನನಗೆ ಇನ್ನೂ ನಂಬಲಾಗುತ್ತಿಲ್ಲ” ಎಂದು ಲಾಟರಿ ಬಹುಮಾನವನ್ನು ಗೆದ್ದ ನಂತರ, ಅಜಯ ಒಗುಲಾ ಹೇಳಿದ್ದಾರೆ ಎಂದು ಯುಎಇ ದಿನಪತ್ರಿಕೆ ಖಲೀಜ್ ಟೈಮ್ಸ್ ವರದಿ ಮಾಡಿದೆ. … Continued

ಮುನಿರತ್ನರಿಂದ ಕ್ರಿಮಿನಲ್‌ ಮಾನಹಾನಿ ಮೊಕದ್ದಮೆ : ಕೆಂಪಣ್ಣ ಸೇರಿ 19 ಮಂದಿಗೆ ಜಾಮೀನುರಹಿತ ವಾರೆಂಟ್‌

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತೋಟಗಾರಿಕೆ ಮತ್ತು ಯೋಜನಾ ಸಚಿವ ವಿ.ಮುನಿರತ್ನ ಅವರು ಹೂಡಿರುವ ಕ್ರಿಮಿನಲ್‌ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ 19 ಮಂದಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಜಾಮೀನುರಹಿತ ವಾರೆಂಟ್‌ ಹೊರಡಿಸಿದೆ. ವಕೀಲ ವಿವೇಕ ಸುಬ್ಬಾರೆಡ್ಡಿ ಅವರ ಮೂಲಕ ಸಲ್ಲಿಸಿರುವ ಕ್ರಿಮಿನಲ್‌ ಮಾನಹಾನಿ … Continued

ಕೋವಿಡ್‌-19 ಮುನ್ನೆಚ್ಚರಿಕೆ : ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ಬೆಂಗಳೂರು: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕು ಮತ್ತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು. ಚಾಲನಾ ಸಿಬ್ಬಂದಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್‌ … Continued

ಸಾಲ ವಂಚನೆ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಬಂಧನ

ನವದೆಹಲಿ : ಐಸಿಐಸಿಐ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವೀಡಿಯೊಕಾನ್ ಗ್ರೂಪ್‌ಗೆ ಒದಗಿಸಿದ ₹ 3,000 ಕೋಟಿಗೂ ಹೆಚ್ಚು ಸಾಲದ ನೀಡಿದ ಪ್ರಕಣದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ತೈಲ ಮತ್ತು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು

ಅಲಹಾಬಾದ್‌: ಎರಡು ವರ್ಷಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿದ್ದ ಕೇರಳದ ಪತ್ರಕರ್ತನಿಗೆ ಕೊನೆಗೂ ಜಾಮೀನು ದೊರಕಿದೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗಾರಿಕೆಗೆಂದು ತೆರಳಿದ್ದ ವೇಳೆ ಬಂಧಿತರಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಶುಕ್ರವಾರ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇವರಿಗೆ … Continued

1337.76 ಕೋಟಿ ರೂ.ಗಳಷ್ಟು ದಂಡ ವಿಧಿಸಿದ ಕೇಂದ್ರ ಸ್ಪರ್ಧಾ ಆಯೋಗದ ವಿರುದ್ಧ ಎನ್‌ಸಿಎಲ್‌ಎಟಿ ಮೊರೆ ಹೋದ ಗೂಗಲ್‌

ನವದೆಹಲಿ: 1,337.76 ಕೋಟಿ ರೂ.ಗಳಷ್ಟು ದಂಡ ವಿಧಿಸಿದ ಕೇಂದ್ರ ಸ್ಪರ್ಧಾ ಆಯೋಗದ ವಿರುದ್ಧ ಆಲ್ಫಾಬೆಟ್‌ ಮಾಲೀಕತ್ವದ ಗೂಗಲ್‌ ಕಂಪನಿಯು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಎಟಿ) ಮೊರೆ ಹೋಗಿದ್ದು, ಸಿಸಿಐ ಆದೇಶಕ್ಕೆ ತಡೆ ನೀಡುವಂತೆ ಎನ್‌ಸಿಎಲ್‌ಎಟಿಗೆ ಅರ್ಜಿ ಸಲ್ಲಿಸಿದೆ. ಮೇಲ್ಮನವಿ ಸಲ್ಲಿಸಲು ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (NCLAT) ಅನ್ನು ಸಂಪರ್ಕಿಸಲಾಗಿದೆ ಎಂದು ಗೂಗಲ್ … Continued

ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಇಲಾಖೆಯ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ನಿರಾಣಿ

ಬೆಳಗಾವಿ : ಬೆಳಗಾವಿ ನಗರದ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ, ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ … Continued

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

ಬೆಳಗಾವಿ : ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅವರು ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು