ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued

ಕೋಲ್ಕತ್ತಾ ಆರ್‌.ಜಿ. ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಬಂಧಿಸಿದ ಸಿಬಿಐ

ಕೋಲ್ಕತ್ತಾ: ಕಳೆದ ತಿಂಗಳು ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಹತ್ಯೆಗೈದ ಕೋಲ್ಕತ್ತಾ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಅತ್ಯಾಚಾರ-ಕೊಲೆ ಪ್ರಕರಣದ ಜೊತೆಗೆ ಸಿಬಿಐ ತನಿಖೆ ನಡೆಸುತ್ತಿರುವ ಸಂದೀಪ ಘೋಷ್ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಜೊತೆ ಮಾರಾಟಗಾರರಾದ ಬಿಪ್ಲವ್ ಸಿಂಘಾ … Continued

ಮುಡಾ ಪ್ರಕರಣ : ಸಿದ್ದರಾಮಯ್ಯ ಅವಧಿಯಲ್ಲೇ ಈ ಹಗರಣ ; ಸುಣ್ಣಕ್ಕೆ ಬೆಣ್ಣೆ ಹಂಚಿಕೆ: ಹಿರಿಯ ವಕೀಲ ರಾಘವನ್‌ ಆಕ್ಷೇಪ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್ : ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಭಾರತದ ನಿತೇಶಕುಮಾರ

ನವದೆಹಲಿ : ನಿತೇಶಕುಮಾರ ಅವರು ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಸಿಂಗಲ್ಸ್ ಎಸ್‌ಎಲ್ 3 (SL3) ವರ್ಗದ ಪ್ಯಾರಾ ಬ್ಯಾಡ್ಮಿಂಟನ್ ಫೈನಲ್‌ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದಿದ್ದಾರೆ. ಸೋಮವಾರ (ಸೆಪ್ಟೆಂಬರ್ 2) ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ನಡೆದ ಪುರುಷರ ಸಿಂಗಲ್ಸ್ ಎಸ್‌ಎಲ್ 3 ವರ್ಗದ ಚಿನ್ನದ ಪದಕದ ಪಂದ್ಯದಲ್ಲಿ ನಿತೇಶಕುಮಾರ ಅವರು ಗ್ರೇಟ್ ಬ್ರಿಟನ್‌ನ ಡೇನಿಯಲ್ … Continued

ಖರ್ಗೆ ಕುಟುಂಬದ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆ ಪ್ರಕರಣ ; ಸರ್ಕಾರದಿಂದ ವಿವರಣೆ ಕೇಳಿದ ರಾಜ್ಯಪಾಲ

ಬೆಂಗಳೂರು : ಸಹೋದರ ರಾಹುಲ್ ಖರ್ಗೆ ಅವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ … Continued

ಕೆಪಿಎಸ್​​ಸಿ ಪರೀಕ್ಷೆಯಲ್ಲಿ ಗೊಂದಲ : ಮರುಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued

ವೀಡಿಯೊ..| ಎಂ.ಎಸ್. ಧೋನಿಯನ್ನು ನಾನು ಎಂದಿಗೂ ಕ್ಷಮಿಸಲ್ಲ ; ಕ್ರಿಕೆಟರ್‌ ಯುವರಾಜ ಸಿಂಗ್ ತಂದೆ ಹೀಗೆ ಹೇಳಿದ್ಯಾಕೆ…?

ನವದೆಹಲಿ : ಭಾರತದ ಮಾಜಿ ಬ್ಯಾಟರ್ ಯುವರಾಜ ಸಿಂಗ್ ಅವರ ತಂದೆ ಯೋಗರಾಜ ಸಿಂಗ್ ಅವರು ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಜೀ ಸ್ವಿಚ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಯೋಗರಾಜ ಸಿಂಗ್ ಅವರು ಧೋನಿಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. … Continued

3 ಟಿವಿ ಚಾನೆಲ್‌ ಗಳ ಬಹಿಷ್ಕಾರಕ್ಕೆ ತೃಣಮೂಲ ಕಾಂಗ್ರೆಸ್‌ ನಿರ್ಧಾರ

ನವದೆಹಲಿ : ಕೋಲ್ಕತ್ತಾದ ಆರ್‌.ಜಿ. ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯೊಬ್ಬರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ತನ್ನ ವಕ್ತಾರರನ್ನು ಟಿವಿ ಚಾನೆಲ್‌ ಚರ್ಚೆಗಳಿಗೆ ಕಳುಹಿಸದಿರಲು ನಿರ್ಧರಿಸಿದ್ದು, ಮೂರು ಸುದ್ದಿ ವಾಹಿನಿಗಳನ್ನು ‘ಬಂಗಾಳ ವಿರೋಧಿ’ ಎಂದು ಆರೋಪಿಸಿದೆ. “ನಿರಂತರ ಬಂಗಾಳ ವಿರೋಧಿ ಅಜೆಂಡಾ-ಚಾಲಿತ ಪ್ರಚಾರದಿಂದಾಗಿ … Continued

ಮಳೆಯ ಆರ್ಭಟ ; ಆಂಧ್ರ, ತೆಲಂಗಾಣದಲ್ಲಿ 27 ಜನರು ಸಾವು

ಹೈದರಾಬಾದ್‌ : ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸತತ ಎರಡನೇ ದಿನವಾದ ಭಾನುವಾರದ ಭಾರೀ ಮಳೆಗೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಬಂದಿದ್ದು, ಜಲಾವೃತವಾಗಿದೆ. ಮಳೆ ರಸ್ತೆ ಮತ್ತು ರೈಲು ಸಂಚಾರವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯಿಂದ ತೆಲಂಗಾಣದಲ್ಲಿ ಕನಿಷ್ಠ 15 ಜನರು ಮತ್ತು ಆಂಧ್ರಪ್ರದೇಶದಲ್ಲಿ 12 ಜನರು ಸಾವಿಗೀಡಾಗಿದ್ದಾರೆ, ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ … Continued