ಆರೋಪಿತ ಕೋವಿಡ್ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖಾ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಆಪಾದಿತ ಕೋವಿಡ್ ಹಗರಣದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಲಾಗಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ತಂಡ ತಮ್ಮ ತನಿಖಾ ವರದಿಯನ್ನು ಶನಿವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು. ‘ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ … Continued

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್​ಡಿ ವಿದ್ಯಾರ್ಹತೆ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : 11 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ದೇಶಾದ್ಯಂತ ವಾಡಿಕೆಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 1, 2 ಹಾಗೂ 3ರಂದು ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಸೆ.1ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, … Continued

ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕದಲ್ಲಿ ಬದಲಾವಣೆ

ನವದೆಹಲಿ: ಭಾರತದ ಚುನಾವಣಾ ಆಯೋಗವು (ECI) ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನದ ದಿನಾಂಕದಲ್ಲಿ ಬದಲಾವಣೆ ಮಾಡಿದೆ. ಚುನಾವಣೆಯನ್ನುಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5ರಂದು ನಡೆಸಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ದಿನವನ್ನೂ ಅಕ್ಟೋಬರ್ 4ರ ಬದಲಾಗಿ ಅಕ್ಟೋಬರ್ 8 ಕ್ಕೆ ನಿಗದಿ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ. … Continued

ಮುಡಾ ಹಗರಣ: ರಾಜ್ಯಪಾಲರು ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ : ಸಾಲಿಸಿಟರ್‌ ಜನರಲ್‌ ಮೆಹ್ತಾ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್‌ನಲ್ಲಿ ಶನಿವಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪ್ರಾಸಿಕ್ಯುಶನ್‌ಗೆ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಬಲವಾಗಿ ಸಮರ್ಥಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ … Continued

ವೀಡಿಯೊ..| ಚಿರತೆಯನ್ನೇ ಬೇಟೆಯಾಡಿದ ನಾಯಿಗಳು…!

ಚಿರತೆ ನಾಯಿಯನ್ನು ಬೇಟೆ ಮಾಡುವುದನ್ನು ನೋಡಿರಬೇಕು. ಆದರೆ ನಾಯಿಗಳು ಚಿರತೆಯನ್ನು ಬೇಟೆಯಾಡುವುದನ್ನು ನೋಡುವುದು ಬಹಳ ಅಪರೂಪ. ಇದನ್ನು ನೋಡಿಲ್ಲದಿದ್ದರೆ ನಾಯಿಗಳ ಗುಂಪು ಚಿರತೆಯೊಂದನ್ನು ಬೇಟೆಯಾಡಿದ ವೀಡಿಯೊವೊಂದು ವೈರಲ್‌ ಆಗಿದೆ. ಈ ವೈರಲ್ ವೀಡಿಯೊ ಕ್ಲಿಪ್‌ನಲ್ಲಿ ನಾಯಿಗಳ ಗುಂಪು ಚಿರತೆ ಮೇಲೆ ಎರಗಿ ಕಚ್ಚಿ ಎಳೆಯುತ್ತಿರುದನ್ನು ತೋರಿಸುತ್ತದೆ. ಚಿರತೆ ತನ್ನನ್ನು ತಾನು ಉಳಿಸಿಕೊಳ್ಳಲು ತನ್ನ ಶಕ್ತಿಮೀರಿ ಪ್ರಯತ್ನಿಸುತ್ತದೆ … Continued

ವೀಡಿಯೊ..| ಹಳಿಯಾಳ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ, ನೂಕಾಟ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ ನಡೆದಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮಾಜಿ ಶಾಸಕ ಸುನಿಲ ಹೆಗಡೆ ಬಣ ಹಾಗೂ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿ ಗುಂಪಿಗಳ ಮಧ್ಯೆ ಗಲಾಟೆಯಾಗಿದೆ. ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಕರ್ಕಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ … Continued

ಹಂಗೇರಿ | ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ; ಉತ್ತರ ಕನ್ನಡದ ಧನ್ವಿತಾ ಮೊಗೇರ ವಲ್ಡ್ ಚಾಂಪಿಯನ್

ಕಾರವಾರ : ಯುರೋಪಿನ ಹಂಗೇರಿಯಲ್ಲಿ ನಡೆದ ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಧನ್ವಿತಾ ವಾಸು ಮೊಗೇರ ಚಿನ್ನದ ಪದಕ ಗೆದ್ದು ವಲ್ಡ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ. ಪ್ರಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ವಾಕೊ ಯೂಥ್ ವರ್ಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ -2024 ರಲ್ಲಿ … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸೂಪರ್‌ ಸ್ಟಾರ್‌ ಜೂ. ಎನ್‌ ಟಿ ಆರ್

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್‌ ಸ್ಟಾರ್‌ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್‌ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued