ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿಸಿದ್ದ ಜಾಲ ಭೇದಿಸಿದ ಪೊಲೀಸರು ; 48 ಮಂದಿ ಬಂಧನ, ಅವರಲ್ಲಿ ಮೂವರು ಸರ್ಕಾರಿ ನೌಕರರು..!

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿದ್ದ ನಕಲಿ ಅಂಕಪಟ್ಟಿ( Fake marks card) ದಂಧೆಯ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, 3 ಸರ್ಕಾರಿ ಅಧಿಕಾರಿಗಳು ಸೇರಿ 48 ಮಂದಿಯನ್ನು ಬಂಧಿಸಿದ್ದಾರೆ. ಈ ಧಂದೆಯ ಕಿಂಗ್ ಪಿನ್ ತಲೆಮರೆಸಿಕೊಂಡಿದ್ದಾನೆ . ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲ್ಯಾಗ್‌ ಹುದ್ದೆಗೆ ನಕಲಿ ದಾಖಲೆ ಸಲ್ಲಿಸಿ ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ಒದಗಿಸಿದ್ದ … Continued

ವೀಡಿಯೊ..| ಮತ್ತೊಂದು ಹೆಲಿಕಾಪ್ಟರ್‌ ಮೂಲಕ ಏರ್‌ ಲಿಫ್ಟ್‌ ಮಾಡುತ್ತಿದ್ದಾಗ ನದಿಗೆ ಬಿದ್ದ ಹೆಲಿಕಾಪ್ಟರ್‌

ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್ ಶನಿವಾರ ಮಂದಾಕಿನಿ ನದಿಯ ಬಳಿ ಪತನಗೊಂಡಿತ್ತು. ರಿಪೇರಿಗಾಗಿ ಮತ್ತೊಂದು ಹೆಲಿಕಾಪ್ಟರ್ ಮೂಲಕ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್‌ ಲಿಫ್ಟ್‌ ಮಾಡುವಾಗ ಹೆಲಿಕಾಪ್ಟರ್ ಥಾರು ಕ್ಯಾಂಪ್ ಬಳಿ ಬಿದ್ದಿದೆ. ಯಾರಿಗೂ ಯಾವುದೇ ಗಾಯಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇದಾರನಾಥ … Continued

ಮುಡಾ ಹಗರಣ: ಸಿದ್ದರಾಮಯ್ಯ ಕುಟುಂಬಕ್ಕೆ ಸೈಟ್ ; ನಕಲಿ ನಿರ್ಣಯದ ಆಧಾರದ ಮೇಲೆ ನಿವೇಶನ ಹಂಚಿಕೆ-ಬಿಜೆಪಿ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ ಗಂಭೀರ ಆರೋಪ ಮಾಡಿದ್ದಾರೆ ಹಾಗೂ ಆಡಿಯೋ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರವಿಕುಮಾರ ಅವರು, 2020ರಲ್ಲಿ … Continued

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಜೈಲಿಗೆ ಹೇಳಿಕೆ: ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ನಾಗೇಶ ಆಕ್ಷೇಪ

ಬೆಂಗಳೂರು : “ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸಕರು ದಿನ ಬೆಳಗಾದರೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಅವರೇ ಬಂದು ವಾದಿಸಲಿ” ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ನಲ್ಲಿ ಶುಕ್ರವಾರ ಮೌಖಿಕವಾಗಿ ಹೇಳಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್‌.ಡಿ.ರೇವಣ್ಣ ವಿರುದ್ಧ ಪ್ರಕ್ರಿಯೆ ದಾಖಲಿಸದಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುಂದಿನ ವಿಚಾರಣೆ ವರೆಗೆ ವಿಚಾರಣಾಧೀನ ನ್ಯಾಯಾಲಯವು ಯಾವುದೇ ವಿಚಾರಣಾ ಪ್ರಕ್ರಿಯೆ ದಾಖಲಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಎಚ್‌.ಡಿ. ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. … Continued

ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿ ಮತ್ತು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ. ಸೌಜನ್ಯ ತಂದೆ ಚಂದಪ್ಪ ಗೌಡ ಮತ್ತು ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ … Continued

ಬಿಜೆಪಿಗೆ ಸೇರ್ಪಡೆಯಾದ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್ ಶುಕ್ರವಾರ ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ, ಬಾಬುಲಾಲ್ ಮರಾಂಡಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಅವರನ್ನು ಬಿಜೆಪಿಗೆ ಸ್ವಾಗತಿಸಿದ … Continued

ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ : ಭಾರತಕ್ಕೆ ಮೊದಲ ಚಿನ್ನದ ಪದಕ; 10 ಮೀ ಏರ್ ರೈಫಲ್​ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

ಪ್ಯಾರಿಸ್‌ : ಅವನಿ ಲೇಖರಾ ಶುಕ್ರವಾರ ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಎರಡು ಪ್ಯಾರಾಲಿಂಪಿಕ್ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತೆ, … Continued

ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!

ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued