ಗ್ರಾಮಕ್ಕೆ ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ 3 ವರ್ಷದಿಂದ ಒಂದೇ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸುತ್ತಿರುವ ಸಂತ…!

ಸಂತರೊಬ್ಬರು ಮೂರು ವರ್ಷಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಗ್ರಾಮದಲ್ಲಿ ರಸ್ತೆ, ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯಕ್ಕಾಗಿ ಒತ್ತಾಯಿಸಿರುವ ಅವರು, ಗ್ರಾಮದ ಬೇಡಿಕೆಗಳ ಈಡೇರಿಕೆಗಾಗಿ ಒಂಟಿ ಕಾಲಲ್ಲಿ ನಿಂತು ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಚ್ಚಾ ಬಾಬಾ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಇವರು ಉತ್ತರಪ್ರದೇಶದ ಫಿರೋಜಾಬಾದಿನ ತುಂಡ್ಲಾದಿಂದ ಸುಮಾರು 20 ಕಿಮೀ ದೂರದಲ್ಲಿರುವ ಯಮುನಾ … Continued

ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ನೀಡಿರುವ ಪ್ರಕಟಣೆಯ ಪ್ರಕಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 20) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್‌ … Continued

ವೀಡಿಯೊ…| ವೈದ್ಯರು ಪರೀಕ್ಷಿಸುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು

ಇಂದೋರ್ : 31 ವರ್ಷದ ಆಟೋ ಚಾಲಕರೊಬ್ಬರು ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆಯೇ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಇಂದೋರ್‌ನ ಶಿವಾಜಿ ನಗರದ ನಿವಾಸಿ ಸೋನು ಮಟ್ಕರ್ ಎಂದು ಗುರುತಿಸಲಾಗಿದೆ. ತಡರಾತ್ರಿ ಎದೆನೋವು ಕಾಣಿಸಿಕೊಂಡ ನಂತರ ಮಟ್ಕರ್ ಅವರೇ ಸಮೀಪದ ಕ್ಲಿನಿಕ್‌ಗೆ ತೆರಳಿದ್ದರು. ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾಗ ಏಕಾಏಕಿ ಕುಸಿದು … Continued

ಮಂಗಳೂರು | ಖೋಟಾ ನೋಟು ಚಲಾವಣೆ ಯತ್ನ : ನಾಲ್ವರ ಬಂಧನ

ಮಂಗಳೂರು : ಕೇರಳದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಹಾಗೂ ಈ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಅವರಿಂದ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು … Continued

ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ದೆಹಲಿ ಏಮ್ಸ್ ಗೆ ದಾಖಲು

ನವದೆಹಲಿ : ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರನ್ನು ಸೋಮವಾರ ಸಂಜೆ ತೀವ್ರ ಜ್ವರದಿಂದ ಅಸ್ವಸ್ಥಗೊಂಡ ನಂತರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ಗೆ ದಾಖಲಿಸಲಾಯಿತು. ಆಸ್ಪತ್ರೆಯ ಮೂಲಗಳ ಪ್ರಕಾರ, ಯೆಚೂರಿ ಅವರನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಯೆಚೂರಿ ಅವರ ಆರೋಗ್ಯ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ : ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಗ್ರಿಲ್ ಮಾಡುವಾಗ ಸಿಬಿಐ ಕೇಳಿದೆ ಎನ್ನಲಾದ ಪ್ರಶ್ನೆಗಳು ಯಾವುವು..? ಇಲ್ಲಿದೆ…

ನವದೆಹಲಿ : ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಗ್ರಿಲ್ ಮಾಡಿದೆ, ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಸ್ಟ್ 9 ರಂದು ಟ್ರೇನಿ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಹತ್ಯೆ ನಡೆಯಿತು. ಈ ಪ್ರಕರಣದ ಸಂಬಂಧ ಸಿಬಿಐ ಸತತ … Continued

ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ ಪರಿಷತ್‌ ಸದಸ್ಯನ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯದಿದ್ದರೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು “ಬಾಂಗ್ಲಾದೇಶದಂತಹ ಸನ್ನಿವೇಶ” ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ರಾಜ್ಯಪಾಲರು ತಮ್ಮ ಆದೇಶವನ್ನು ಹಿಂಪಡೆಯದಿದ್ದರೆ ಅಥವಾ … Continued

ದೀದಿಯತ್ತ ಯಾರಾದ್ರೂ ಬೆರಳು ತೋರಿಸಿದ್ರೆ ಬೆರಳು ಮುರಿಯ್ತೇವೆ ; ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ಸಂಪುಟದ ಸಚಿವ…!

ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆಯ ನಂತರ ಗೋಡೆಗೆ ತಳ್ಳಲ್ಪಟ್ಟ ಮಮತಾ ಬ್ಯಾನರ್ಜಿ ಸರ್ಕಾರವು ಸಾರ್ವಜನಿಕರ ಕೋಲಾಹಲಕ್ಕೆ ಪ್ರತಿಕ್ರಿಯೆ ನೀಡುತ್ತಿರುವ ರೀತಿ ಸರ್ಕಾರವನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಇದಕ್ಕೆ ಮತ್ತೊಂದು ನಿರ್ದಶನದಲ್ಲಿ ಪಶ್ಚಿಮ ಬಂಗಾಳ ಸಚಿವ ಉದಯನ್ ಗುಹಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಬ್ಯಾನರ್ಜಿಯನ್ನು … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ಸದ್ಯಕ್ಕೆ ರಿಲೀಫ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಖಾಸಗಿ ದೂರುಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ ವಿರುದ್ಧದ ವಿಚಾರಣೆಯನ್ನು ಮುಂದೂಡುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಆಪಾದಿತ ಮುಡಾ ಭೂ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವr ಚಂದ್ ಗೆಹ್ಲೋಟ್ ಅನುಮತಿ ನೀಡಿದ … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ಬ್ಯಾನರ್ಜಿಗೆ ಜೀವ ಬೆದರಿಕೆಯೊಡ್ಡಿದ ವಿದ್ಯಾರ್ಥಿನಿ ಅರೆಸ್ಟ್

ಕೋಲ್ಕತ್ತ : ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿದ್ಯಾರ್ಥಿನಿಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ ವಿದ್ಯಾರ್ಥನಿಯೊಬ್ಬಳನ್ನು ಬಂಧಿಸಲಾಗಿದೆ. ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ತಲ್‌ತಲಾ ಪೊಲೀಸ್ … Continued