ನಕಲಿ ಬೆಳ್ಳುಳ್ಳಿ | ಇರಲಿ ಎಚ್ಚರ… ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ ; ವೀಡಿಯೊ ನೋಡಿದ್ರೆ ದಂಗಾಗ್ತೀರಾ…!

ಮುಂಬೈ : ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ ಹಾಗೂ ಮೊಟ್ಟೆ ಮಾರುಕಟ್ಟೆಗೆ ಬಂದಿದ್ದವು. ಈಗ ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಯಿಂದಾಗಿ ನಕಲಿ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ, ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಗಳಿಂದಾಗಿ ಸಿಮೆಂಟ್‌ನಿಂದ ಮಾಡಿದ ನಕಲಿ ಬೆಳ್ಳುಳ್ಳಿಯನ್ನು ಖರೀದಿದಾರರಿಗೆ ಮಾರಾಟ ಮಾಡಲಾಗುತ್ತಿದೆ ಎಂದು … Continued

ವೀಡಿಯೊ | ʼವಾಪಸ್‌ ಹೋಗಿʼ : ಕೆನಡಾದ ಟೊರೊಂಟೊದಲ್ಲಿ ನಡೆದ ಭಾರತ ದಿನದ ಮೆರವಣಿಗೆಗೆ ಖಲಿಸ್ತಾನ್ ಪರ ಪ್ರತಿಭಟನಾಕಾರರ ಅಡ್ಡಿ

ಕೆನಡಾದ ಟೊರೊಂಟೊದಲ್ಲಿ ಭಾನುವಾರ ನಡೆದ ಭಾರತದ ಸ್ವಾಂತ್ರ್ಯ ದಿನದ ಪರೇಡ್‌ಗೆ ಹತ್ತಾರು ಖಲಿಸ್ತಾನ್ ಪರ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಭಾರತೀಯ ಡಯಾಸ್ಪೊರಾ ಆಯೋಜಿಸಿದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಇದು ಕೆಲಕಾಲ ಉದ್ವಿಗ್ನತೆಗೆ ಕಾರಣವಾಯಿತು. ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೈರಲ್ ವೀಡಿಯೊ, ದಲ್ಲಿ ಟೊರೊಂಟೊದ ನಾಥನ್ ಫಿಲಿಪ್ಸ್ ಸ್ಕ್ವೇರ್‌ನಲ್ಲಿ ಆಗಸ್ಟ್ 18 ರಂದು ಭಾರತದ … Continued

ಕರ್ನಾಟಕದಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಾದ್ಯಂತ ಮಳೆ  ಇಂದಿನಿಂದ (ಆಗಸ್ಟ್ 19) ಚುರುಕುಗೊಳ್ಳಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಮಂಗಳವಾರದಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued

ಬೆಂಗಳೂರು : ಹಾಸ್ಟೆಲ್‌ನಲ್ಲಿ ಇಲಿ ಔಷಧ ಸಿಂಪಡಿಸಿದ ನಂತರ 19 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು : ಇಲಿಗಳನ್ನು ಓಡಿಸಲು ಹಾಸ್ಟೆಲ್ ಆಡಳಿತ ಮಂಡಳಿಯು ಇಲಿ ನಿವಾರಕ ಔಷಧ ಸಿಂಪಡಿಸಿದ ನಂತರ ಉಸಿರಾಟ ಸಮಸ್ಯೆ ಉಂಟಾಗಿ ಬೆಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ನಿಲಯದ 19 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಆಗಸ್ಟ್ 18ರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದೆ ಎಂದು … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರಿಂದ ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಕೋಲ್ಕತ್ತಾದ ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ 70 ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು, ಆರೋಗ್ಯ ಸಿಬ್ಬಂದಿ ವಿರುದ್ಧದ ಹಿಂಸಾಚಾರ ತಡೆಗೆ ವಿಶೇಷ ಕಾನೂನನ್ನು ತ್ವರಿತವಾಗಿ ಜಾರಿಗೊಳಿಸಬೇಕು ಮತ್ತು ವೈದ್ಯಕೀಯ ಸೌಲಭ್ಯಗಳಲ್ಲಿ ಸುಧಾರಿತ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಶೋಕ್ ವೈದ್, … Continued

ಉಡುಪಿ: ಸಿದ್ಧಿ ವಿನಾಯಕ ದೇವಸ್ಥಾನ ನಿರ್ಮಿಸಿದ್ದ ಕ್ರೈಸ್ತ ಉದ್ಯಮಿ ನಿಧನ

ಉಡುಪಿ : ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲ ಕಟ್ಟಿಸಿದ್ದ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ (80) ಭಾನುವಾರ (ಆಗಸ್ಟ್ 18) ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಐದು ದಶಕಗಳ ಕಾಲ ಉದ್ಯಮಿಯಾಗಿ ಬಳಿಕ ನಿವೃತ್ತಿಗೊಂಡು ತನ್ನ ಸ್ವಂತ ಊರಿಗೆ ಬಂದು ನೆಲೆಸಿದ್ದ ಗ್ಯಾಬ್ರಿಯಲ್, ತನ್ನ ಆರಾಧ್ಯ ದೈವ ಗಣಪತಿಗೆ ತನ್ನೂರಲ್ಲೇ ಗುಡಿ ಕಟ್ಟಿಸಿದ್ದರು…! ಶ್ರೀ ಸಿದ್ಧಿ … Continued

ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಜಿಗಣಿಯೊಂದರಲ್ಲೇ 5 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು

ಚೆನ್ನೈ: ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಗಾಯಕಿಯನ್ನು ತೀವ್ರ ಹೊಟ್ಟೆ ನೋವಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪಿ. ಸುಶೀಲಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆ ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ನೈಟಿಂಗೇಲ್ ಪಿ. … Continued

ಮೂರು ಆಯ್ಕೆಗಳಿವೆ…: ಬಿಜೆಪಿ ಸೇರ್ಪಡೆಯಾಗುವ ವದಂತಿ ಮಧ್ಯೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್‌ ಮಾರ್ಮಿಕ ಹೇಳಿಕೆ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್‌ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳ ನಡುವೆ ತಾನು ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲ ಎಂಬ ಭಾವನೆ ಬರುವಂತಾಗಿದೆ ಹಾಗೂ ತನಗೆ ಪರ್ಯಾಯ ಮಾರ್ಗಹುಡುಕುವ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಮುನ್ನ … Continued

ಮರಾಠಾ ಸಮಾಜದ ಸಭೆ | ಸಮಾಜದ ಅಭ್ಯುದಯಕ್ಕೆ ಸಂಘಟಿತ ಹೋರಾಟ ಅಗತ್ಯ : ಕಿರಣ ಜಾಧವ

ಬೆಳಗಾವಿ : ಮರಾಠಾ ಸಮಾಜದ ಅಭ್ಯುದಯಕ್ಕೆ ಸಂಘಟಿತ ಪ್ರಯತ್ನ ಇಂದಿನ ಅಗತ್ಯವಾಗಿದೆ ಎಂದು ಮರಾಠಾ ಸಮಾಜದ ಮುಖಂಡ ಕಿರಣ ಜಾಧವ ಹೇಳಿದ್ದಾರೆ. ನಗರದ ಮಿಲನ್ ಹೊಟೇಲ್ ಸಭಾಗೃಹದಲ್ಲಿ ಶನಿವಾರ ನಡೆದ ಬೆಳಗಾವಿ ಉತ್ತರ ಮರಾಠಾ ಸಮಾಜ ಬಾಂಧವರ ಸಭೆಯಲ್ಲಿ ಅವರು ಮಾತನಾಡಿದರು. ಮರಾಠಾ ಸಮಾಜದ ಮೀಸಲಾತಿಯನ್ನು ಈಗ ಇರುವ 3 ಬಿ ಯಿಂದ 2 ಎ … Continued