ಉದ್ಧವ್ ಠಾಕ್ರೆ ಬೆಂಗಾವಲು ವಾಹನದ ಮೇಲೆ ತೆಂಗಿನಕಾಯಿ ಎಸೆದರು, ಸಗಣಿ ಎರಚಿದರು…

ಥಾಣೆ : ರಾಜ್ ಠಾಕ್ರೆ ಅವರ ಬೆಂಗಾವಲು ವಾಹನದ ಮೇಲೆ ಅಡಕೆ ದಾಳಿ ನಡೆಸಿದ ಒಂದು ದಿನದ ನಂತರ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಶನಿವಾರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ತೆಂಗಿನಕಾಯಿ ಮತ್ತು ಸಗಣಿ ಎಸೆದಿದ್ದಾರೆ. ಶುಕ್ರವಾರ ನಡೆದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ … Continued

ಭಯೋತ್ಪಾದಕರ ಜೊತೆ ಗುಂಡಿನ ಚಕಮಕಿ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಮೂವರು ಯೋಧರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಮಧ್ಯಾಹ್ನ ಅಹ್ಲಾನ್ ಗಡೋಲ್‌ನಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಭಯೋತ್ಪಾದಕರು ಸೈನಿಕರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ … Continued

ವಿನೇಶ್ ಫೋಗಟ್ ಅನರ್ಹತೆ ಮೇಲ್ಮನವಿ ಮೇಲಿನ ಸಸ್ಪೆನ್ಸ್ ಮುಂದುವರಿಕೆ ; ಮತ್ತೆ ಗಡುವು ವಿಸ್ತರಿಸಿದ ಸಿಎಎಸ್‌

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಿದ್ದರ ವಿರುದ್ಧ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್​ನಲ್ಲಿ ಮನವಿ ಸಲ್ಲಿಸಿದ್ದು, ಈಗ ವಿನೇಶ್ ಅವರ ಮೇಲ್ಮನವಿ ವಿಚಾರಣೆಯ ಗಡುವನ್ನು ಆಗಸ್ಟ್ 11 ರವರೆಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿಸ್ತರಿಸಿದೆ. ವಾಸ್ತವವಾಗಿ … Continued

ಮಾತು ನಂಬಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ 1.53 ಕೋಟಿ ರೂ. ಕಳೆದುಕೊಂಡ ದಂಪತಿ: ಪೊಲೀಸರ ಕಾರ್ಯದಿಂದ ಹೆಚ್ಚಿನ ಹಣ ವಸೂಲಿ ; ನಡೆದದ್ದು ಹೇಗೆ..?

ಬೆಂಗಳೂರು : ಬೆಂಗಳೂರಿನ ಟೆಕ್ ಉದ್ಯಮ ದಂಪತಿ ಆನ್‌ಲೈನ್ ಟ್ರೇಡಿಂಗ್ ಹಗರಣದಲ್ಲಿ ಕಳೆದುಕೊಂಡಿದ್ದ ಹಣದ ಹೆಚ್ಚಿನ ಭಾಗವನ್ನು ಯಶಸ್ವಿಯಾಗಿ ಮರುಪಡೆದುಕೊಂಡಿದ್ದಾರೆ. ಸ್ಥಳೀಯ ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ. ಬೆಂಗಳೂರು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಗಳೂರಿನ ದಂಪತಿ ಆನ್‌ಲೈನ್ ಹೂಡಿಕೆ ಮಾಡಲು ವಂಚಕರಿಂದ ಕಳೆದುಕೊಂಡಿದ್ದ 1.53 ಕೋಟಿ ರೂ.ಗಳಲ್ಲಿ 1.4 … Continued

ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

ಜಶ್ಪುರ: ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆನೆ ದಾಳಿಗೆ ಈವರೆಗೆ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಬಾಗೀಚಾ ನಗರ ಪಂಚಾಯತ್‌ನ ಗಮ್ಹ್ರಿಯಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಅವರು … Continued

‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. … Continued

ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued

ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್‌ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. … Continued