ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ … Continued

ಬಾಂಗ್ಲಾದೇಶ ಬಿಕ್ಕಟ್ಟು : ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕನ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಅವರು ಸೋಮವಾರ ದೇಶದಿಂದ ನಿರ್ಗಮಿಸಿದ ನಂತರ ಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರ ಮತ್ತು ಅರಾಜಕತೆಯ ನಡುವೆ, ಪ್ರತಿಭಟನಾಕಾರರು ಬಾಂಗ್ಲಾದೇಶದ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದ ಸಂಸದರಾಗಿರುವ ಮಶ್ರಫೆ … Continued

ಬಾಂಗ್ಲಾದೇಶ ಬಿಕ್ಕಟ್ಟು | ಬಾಂಗ್ಲಾದೇಶ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಬಗ್ಗೆ ಶೇಖ್ ಹಸೀನಾಗೆ ʼಭಾರತʼ ಮೊದಲೇ ಎಚ್ಚರಿಸಿತ್ತೆ ?

ನವದೆಹಲಿ: ಕಳೆದ ವರ್ಷ ಜೂನ್‌ನಲ್ಲಿ ಸೇನಾ ಮುಖ್ಯಸ್ಥರಾಗಿ ಜನರಲ್ ವಾಕರ್-ಉಜ್-ಜಮಾನ್ ಅವರನ್ನು ನೇಮಕ ಮಾಡುವುದರ ಬಗೆಗಿನ ಸಂಭವನೀಯ ಅಪಾಯಗಳ ಬಗ್ಗೆ ಭಾರತೀಯ ಸರ್ಕಾರಿ ಅಧಿಕಾರಿಗಳು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಈ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ವರದಿಯೊಂದು ಹೇಳಿದೆ. ಈ ಎಚ್ಚರಿಕೆಗಳ ಹೊರತಾಗಿಯೂ, ಹಸೀನಾ ಅವರು ವಾಕರ್-ಉಜ್-ಜಮಾನ್ ಅವರನ್ನು ಸೇನಾ ಮುಖ್ಯಸ್ಥರಾಗಿ … Continued

ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಎಎಪಿ ನಿರ್ಧಾರ

ನವದೆಹಲಿ :  ಇಂಡಿಯಾ (I.N.D.I.A) ಬ್ಲಾಕ್‌ಗೆ ಹಿನ್ನಡೆಯಲ್ಲಿ, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಘೋಷಿಸಿದೆ. ಮಹಾ ವಿಕಾಸ್ ಅಘಾಡಿ (MVA) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಊಹಾಪೋಹಗಳನ್ನು ಪಕ್ಷ ನಿರಾಕರಿಸಿದೆ. ಕೆಲವೇ ತಿಂಗಳುಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಪ್ರಾಥಮಿಕ ಸ್ಪರ್ಧೆಯು … Continued

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ

ಬೆಳಗಾವಿ: ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕಳೆದ 42 … Continued

ಹುಬ್ಬಳ್ಳಿ: ನಾಳೆ ವಚನ ದರ್ಶನ ಕೃತಿ ಲೋಕಾರ್ಪಣೆ

ಹುಬ್ಬಳ್ಳಿ: ಕರ್ನಾಟಕ ಸಾಮರಸ್ಯ ವೇದಿಕೆ, ಅರಿವು, ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಸಂಘಟನೆಗಳ ಸಹಯೋಗದಲ್ಲಿ ಆಗಸ್ಟ್‌ ೭ ರಂದು ಸಂಜೆ ೬ಕ್ಕೆ ವಚನ ದರ್ಶನ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಸ್ಥಳೀಯ ಸವಾಯಿ ಗಂಧರ್ವ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರದ ಪ್ರಾಂತ ಕಾರ್ಯವಾಹರಾದ ರಾಘವೇಂದ್ರ ಕಾಗವಾಡ ಅವರು … Continued

ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಘೋಷಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಯಾರು…?

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥರಾದ ಕೇವಲ ಒಂದು ತಿಂಗಳ ನಂತರ, ಜನರಲ್ ವಕಾರ್‌-ಉಸ್-ಜಮಾನ್ ಅವರು ಸೋಮವಾರ ದೇಶದಿಂದ ಪಲಾಯನ ಮಾಡಿದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಯನ್ನು ಘೋಷಿಸುವ ಮೂಲಕ ಬೆಳಕಿಗೆ ಬಂದಿದ್ದಾರೆ. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ … Continued

ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಬೆನ್ನಿಗೇ ‘ಪ್ರತಿಸ್ಪರ್ಧಿ ಬೇಗಂ’ ಖಲೀದಾ ಜಿಯಾ ಜೈಲಿನಿಂದ ಬಿಡುಗಡೆ…!

ಢಾಕಾ : ಪ್ರಸ್ತುತ ಜೈಲಿನಲ್ಲಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸೋಮವಾರ ಆದೇಶಿಸಿದ್ದಾರೆ. ಸತತ 15 ವರ್ಷಗಳಿಂದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ಪತ್ರಿಕಾ ಹೇಳಿಕೆ ಪ್ರಕಾರ, … Continued

ಬೆಳಗಾವಿ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಮಹಿಳೆಯರು ಸಾವು

ಬೆಳಗಾವಿ: ತಾಲೂಕಿನ ಸುಳೇಬಾವಿ ಗ್ರಾಮದ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಮೃತರನ್ನು ಗ್ರಾಮಸ್ಥರಾದ ಸವಿತಾ ಫಕ್ಕೀರಪ್ಪ ಒಂಟಿ (34) ಹಾಗೂ ಕಲಾವತಿ ಮಾರುತಿ ಬೀದರವಾಡಿ (41) ಎಂದು ಗುರುತಿಸಲಾಗಿದೆ. ಸೋಮವಾರ ಮಹಿಳಾ ಮಂಡಳದ ಸಭೆ ದೇವಸ್ಥಾನದಲ್ಲಿ ನಿಗದಿಯಾಗಿತ್ತು. ಎಲ್ಲರೂ ದೇವಸ್ಥಾನದಲ್ಲಿ ಸೇರಿದ್ದರು. ಸಭೆ … Continued

ವಯನಾಡು ಭೂ ಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಮೊದಲು ಕರೆ ಮಾಡಿದ್ದ ನೀತು ಜೊಜೊ ಅದೇ ದುರಂತದಲ್ಲಿ ಸಾವು

ವಯನಾಡು: ಜುಲೈ 30 ರಂದು ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಎಚ್ಚರಿಕೆ ನೀಡಿದವರಲ್ಲಿ ವಯನಾಡಿನ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ನೀತು ಜೊಜೊ ಮೊದಲಿಗರು, ಆದರೆ ರಕ್ಷಣಾ ತಂಡಗಳು ತಲುಪುವ ಮೊದಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯ ಚೂರಲ್ಮಲಾದಲ್ಲಿ ಸಂಭವಿಸಿದ ವಿನಾಶಕಾರಿ ಭೂ ಕುಸಿತದ ಸರಣಿಯ ಮೊದಲ ಭೂಕುಸಿತದ ನಂತರ … Continued