ಉಡುಪಿ : ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಶುಕ್ರವಾರವು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, … Continued

ಉತ್ತರ ಕನ್ನಡ ಜಿಲ್ಲೆ ; ಇಂದು (ಜುಲೈ 19)ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ 19) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, … Continued

ಚಪ್ಪಲಿ ಧರಿಸಿ ಹೋಗಿದ್ದಕ್ಕೆ ಫ್ರಿಡೊ ಸಿಇಒ, ಏಥರ್ ಸಹ-ಸಂಸ್ಥಾಪಕರಿಗೆ ಪ್ರವೇಶ ನಿರಾಕರಿಸಿದ್ದ ಬೆಂಗಳೂರು ರೆಸ್ಟೋರೆಂಟ್‌

ಬೆಂಗಳೂರು: ಬೆಂಗಳೂರಿನ ಮಾಲ್‌ನವರು ಇತ್ತೀಚೆಗೆ ಭಾರತೀಯ ಸಾಂಪ್ರದಾಯಿಕ ಉಡುಗೆಯಾದ ಧೋತಿಯನ್ನು ಧರಿಸಿದ್ದಕ್ಕಾಗಿ ವಯಸ್ಸಾದ ರೈತನಿಗೆ ಪ್ರವೇಶವನ್ನು ನಿರಾಕರಿಸಿದ ನಂತರ, ಫ್ರಿಡೋ ಸಂಸ್ಥಾಪಕ ಮತ್ತು ಸಿಇಒ ಗಣೇಶ ಸೋನಾವಾನೆ ಅವರು ತಮಗೂ ಇಂಥಹದ್ದೇ ಅನುಭವಾಗಿದ್ದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಮತ್ತು ಏಥರ್ ಸಹ-ಸಂಸ್ಥಾಪಕ ಸ್ವಪ್ನಿಲ್ ಜೈನ್ ಅವರಿಗೆ ಚಪ್ಪಲಿ ಧರಿಸಿದ್ದಕ್ಕಾಗಿ ಬೆಂಗಳೂರಿನ ರೆಸ್ಟೋರೆಂಟ್‌ಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ (ಆಗಸ್ಟ್‌ 1ರ ವರೆಗೆ) ವಿಸ್ತರಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಆದೇಶಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು … Continued

ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಹಲವು ಬೋಗಿಗಳು ; ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಹಾಗೂ ೨೦ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಿಬ್ರುಗಢಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಹಳಿತಪ್ಪಿದವು. ಹಿರಿಯ ರೈಲ್ವೇ ಮತ್ತು ಸ್ಥಳೀಯ … Continued

ರೈತರಿಗೆ ಪಿಸ್ತೂಲ್ ತೋರಿಸಿದ ವೀಡಿಯೊ ವೈರಲ್‌ ; ವಿವಾದಿತ ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ತಾಯಿ ಬಂಧನ

ಮುಂಬೈ: ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ಅವರ ತಾಯಿ ಮನೋರಮಾ ಖೇಡ್ಕರ ಅವರು ಗ್ರಾಮಸ್ಥರ ಗುಂಪಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿರುವ ವೀಡಿಯೊಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಇಂದು, ಗುರುವಾರ (ಜುಲೈ ೧೮) ಬೆಳಿಗ್ಗೆ ಆಕೆಯನ್ನು ಬಂಧಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದ್ದು, ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಹಲವು ದಿನಗಳಿಂದ … Continued

ಶಿರೂರು ಗುಡ್ಡ ಕುಸಿತ ದುರಂತ : 10 ಮಂದಿ ಕಣ್ಮರೆ , ಅವರಲ್ಲಿ ಆರು ಮಂದಿ ಮೃತದೇಹ ಪತ್ತೆ : ಜಿಲ್ಲಾಧಿಕಾರಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿರುವ ಮಾಹಿತಿ ಸಿಕ್ಕಿದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, … Continued

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಮಾರುತಿ ಒಮ್ನಿ ಮೇಲೆ ಗುಡ್ಡ ಕುಸಿದು ಬಿದ್ದು ಜಖಂಗೊಂಡಿದ್ದು, ವಾಹನಲ್ಲಿದ್ದವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗುರುವಾರ ( ಜು.18) ನಸುಕಿನ ಜಾವ 3ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ದೊಡ್ಡತಪ್ಪಲು ಸಮೀಪ ಭೂ … Continued

ವೀಡಿಯೊ | ನಾಗರಿಕ ಸಂಪರ್ಕವೇ ಇಲ್ಲದ, ಕಣ್ಣಿಗೇ ಕಾಣಿಸಿಕೊಳ್ಳದ ವಿಶ್ವದ ಅತಿದೊಡ್ಡ ಬುಡಕಟ್ಟು ಜನಾಂಗದ ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಸ್ಥಳೀಯ ಹಕ್ಕುಗಳ ಲಾಭರಹಿತ ಸಂಸ್ಥೆ ಸರ್ವೈವಲ್ ಇಂಟರ್‌ನ್ಯಾಷನಲ್‌ ನಿಂದ ಪಡೆದ ಗಮನಾರ್ಹವಾದ ಅಪರೂಪದ ಚಿತ್ರಗಳು ಮತ್ತು ವೀಡಿಯೊಗಳು ಈವರೆಗೆ ನಾಗರಿಕ ಸಂಪರ್ಕಕ್ಕೇ ಬಾರದ ಸ್ಥಳೀಯ ಬುಡಕಟ್ಟು ಜನಾಂಗದ ದೈನಂದಿನ ದಿನಚರಿಯನ್ನು ತೋರಿಸುತ್ತವೆ, ಇದು ಮರ ಕಟಾವ್‌ ಮಾಡುವ ಪ್ರದೇಶಕ್ಕೆ “ಅಪಾಯಕಾರಿಯಾಗಿ ಹತ್ತಿರದಲ್ಲಿದೆ” ಎಂದು ವರದಿ ಹೇಳಿದೆ. ಪೆರುವಿನ ಮಾಶ್ಕೊ ಪಿರೊ ಬುಡಕಟ್ಟು 50 ಕ್ಕೂ ಹೆಚ್ಚು … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಅಂಕೋಲಾ:  ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವೀಗಿಡಾದ ಮತ್ತೆರಡು ಮೃತ ದೇಹಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ ಆವಂತಿಕಾ (6) … Continued