ಅಮಾನತುಗೊಂಡ 14 ಉತ್ಪನ್ನಗಳ ಮಾರಾಟ ಸ್ಥಗಿತ ; ಅಂಗಡಿಗಳಿಂದ ಹಿಂಪಡೆಯಲು ಸೂಚನೆ : ಸುಪ್ರೀಂ ಕೋರ್ಟ್‌ ಗೆ ತಿಳಿಸಿದ ಪತಂಜಲಿ

ನವದೆಹಲಿ: ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಏಪ್ರಿಲ್‌ನಲ್ಲಿ ಉತ್ಪಾದನಾ ಪರವಾನಗಿ ಅಮಾನತುಗೊಳಿಸಿದ್ದರಿಂದ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್‌ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಸ್ಟೋರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಪತಂಜಲಿ ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಅದು … Continued

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖ ಕಲ್ಲಡ್ಕ ಡಾ.ಪ್ರಭಾಕರ ಭಟ್‌ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಕಲ್ಲಡ್ಕ … Continued

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷೆಯಾಗಿ ಆಯೇಷಾ ಖಾನಂ ನೇಮಕ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕವಾಗಿದ್ದಾರೆ. ಕರ್ನಾಟಕ ಸಾರ್ವಜನಿಕ ಮತ್ತು ಸಂಪರ್ಕ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯನ್ನು ರಾಜ್ಯ ಸರ್ಕಾರ ನೇಮಕಗೊಳಿಸಿದೆ. ಜೊತೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಿಗೆ ಈ ಹುದ್ದೆ ಲಭಿಸಿದೆ. ಅಕಾಡೆಮಿ ಸದಸ್ಯರಾಗಿ ಹಿರಿಯ … Continued

ವೀಡಿಯೊ…| ಭಾರಿ ಭೂಕುಸಿತ-ಕುಸಿದ ಬೃಹತ್ ಪರ್ವತದ ಒಂದು ಭಾಗ : ಆಗಸದೆತ್ತರಕ್ಕೆ ಧೂಳಿನ ಮೋಡ ; ಬದರಿನಾಥ ಹೆದ್ದಾರಿ ಬಂದ್

ಡೆಹ್ರಾಡೂನ್‌: ಈ ವರ್ಷ ಮುಂಗಾರು ಮಳೆ ಉತ್ತರ ಭಾರತಕ್ಕೆ ಕಾಲಿಡುತ್ತಿದ್ದಂತೆ ಹಿಮಾಲಯದ ಉತ್ತರಾಖಂಡ ರಾಜ್ಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯ ಪಾತಾಳಗಂಗಾ ಲಾಂಗ್ಸಿ ಸುರಂಗದ ಬಳಿ ಭಾರಿ ಭೂಕುಸಿತ ಉಂಟಾಗಿದ್ದು, ಬುಧವಾರ ರಸ್ತೆಯನ್ನು ನಿರ್ಬಂಧಿಸಲಾಗಿದೆ. ಭೂಕುಸಿತದಿಂದ ಭಾರಿ ಪ್ರಮಾಣದ ಧೂಳು ಆವರಿಸಿದ್ದರಿಂದ ಗೋಚರತೆಗೆ ಕೆಲಕಾಲ ಅಡ್ಡಿ … Continued

ಟಿ20 ವಿಶ್ವಕಪ್ ಗೆಲುವಿಗೆ ನೀಡಿದ್ದ 2.5 ಕೋಟಿ ರೂ. ಬೋನಸ್‌ ನಿರಾಕರಿಸಿದ ದ್ರಾವಿಡ್ ; ಯಾಕೆಂದು ಗೊತ್ತಾದ್ರೆ ನೀವು ಫ್ಯಾನ್‌ ಆಗ್ತೀರಾ..!

ನವದೆಹಲಿ: ಭಾರತದ ನಿರ್ಗಮಿತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು 2024 ರ ಟಿ 20 ವಿಶ್ವಕಪ್ ಗೆಲುವಿಗೆ ತಂಡವನ್ನು ಮುನ್ನಡೆಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ನೀಡಲಾಗಿದ್ದ ಹೆಚ್ಚುವರಿ 2.5 ಕೋಟಿ ರೂ. ಬೋನಸ್ ಅನ್ನು ಬಿಸಿಸಿಐಗೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ. ಸಮಾನ ಹಂಚಿಕೆಗೆ ಒತ್ತು ನೀಡುವ ಮೂಲಕ ದ್ರಾವಿಡ್ ತನ್ನ … Continued

ಕರ್ನಾಟಕದಲ್ಲಿ ಡೆಂಗೆ ಹೆಚ್ಚಳ : ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗೆ ಜ್ವರ ಪ್ರಕರಣಗಳ ಹೆಚ್ವಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ಆದೇಶಿಸಿದೆ. ಕಲಾಪ ಪ್ರಾರಂಭವಾಗುತ್ತಿದ್ದ ಮುಖ್ಯನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ನೇತೃತ್ವದ ವಿಭಾಗೀಯ ಪೀಠವು ವಿಷಯ … Continued

ಮುಂಬೈ ಹಿಟ್ & ರನ್ ಪ್ರಕರಣ : ಶಿವಸೇನೆ ಉಪನಾಯಕ ಸ್ಥಾನದಿಂದ ಆರೋಪಿಯ ತಂದೆ ವಜಾ

ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಪ್ರಕರಣದ ಪ್ರಮುಖ ಆರೋಪಿ ಮಿಹಿರ್‌ ಶಾ ತಂದೆ ರಾಜೇಶ ಶಾ ಅವರನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಪಕ್ಷದ ಮುಖ್ಯಸ್ಥ ಏಕನಾಥ ಶಿಂಧೆ ಅವರ ಸೂಚನೆ ಮೇರೆಗೆ ರಾಜೇಶ ಶಾ ಅವರನ್ನು ಉಪನಾಯಕ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು … Continued

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪಿಎ ಹರೀಶನನ್ನು ಬುಧವಾರ ವಶಕ್ಕೆ ಶಾಂತಿನಗರದ ಇ.ಡಿ. ಕಚೇರಿಗೆ ಕರೆತಂದಿದ್ದಾರೆ ಎಂದು … Continued

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸಿಆರ್‌ಪಿಸಿ ಸೆಕ್ಷನ್ 125ರ ಅಡಿ ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ಜೀವನಾಂಶ ಪಡೆಬಹುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಮಹತ್ವದ ತೀರ್ಪು ನೀಡಿದೆ. ಹಾಗೂ ಅವರ ಧರ್ಮವನ್ನು ಲೆಕ್ಕಿಸದೆ ಇದು ಎಲ್ಲಾ ವಿವಾಹಿತ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ಹೇಳಿದೆ. ತನ್ನ ಮಾಜಿ ಪತ್ನಿಗೆ ₹10,000 ಮಧ್ಯಂತರ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ … Continued

ಬಸ್ – ಹಾಲಿನ ಟ್ಯಾಂಕರ್ ಡಿಕ್ಕಿ ; 18 ಮಂದಿ ಸಾವು

ಲಕ್ನೋ : ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಂದು, ಬುಧವಾರ ಬಸ್‌ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ … Continued