ಕರ್ನಾಟಕದ 5 ಜಿಲ್ಲೆಗಳಲ್ಲಿ 5 ದಿನಗಳ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ(ಜುಲೈ 9)ಗಳ ವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, … Continued

ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಅವರ ಬದಲಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ. … Continued

ವೀಡಿಯೊ..| ಹತ್ರಾಸ್‌ ಕಾಲ್ತುಳಿತದ ಘಟನೆ ನಂತರ ಭೋಲೆ ಬಾಬಾ ಬೆಂಗಾವಲು ಜೊತೆ ಗ್ರಾಮ ತೊರೆದ ವೀಡಿಯೊ ವೈರಲ್‌

ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಗೆ ಸಂಬಂಧಿಸಿದಂತೆ ಗುರುವಾರ ಆರು ಜರನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಸತ್ಸಂಗ ನಡೆಸಿದ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ (Bhole Baba) ಘಟನೆ ಬಳಿಕ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ವಾಹನದಲ್ಲಿ ಪರಾರಿಯಾಗಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ … Continued

ನೂತನ ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರಾದ ನ್ಯಾ.ವೀರಪ್ಪ ಅವರು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದಾರೆ ರಾಜ್ಯದಲ್ಲಿ ಎರಡು ಉಪಲೋಕಾಯುಕ್ತ ಹುದ್ದೆಗಳಿವೆ. ಆ ಪೈಕಿ ಎರಡನೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 3, ಉಡುಪಿ ಜಿಲ್ಲೆ 3 ತಾಲೂಕುಗಳ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಣೆ

ಕಾರವಾರ /ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ … Continued

ಮಳೆ : ಜುಲೈ 5ರಂದು ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ(ಜುಲೈ 5) ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ‌ರಜೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಕುಮಟಾ ತಾಲೂಕಿನಲ್ಲಿ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜುಲೈ 18ರ ವರೆಗೆ ವಿಸ್ತರಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ … Continued

ಹತ್ರಾಸ್ ಕಾಲ್ತುಳಿತದ ಘಟನೆ : 6 ಮಂದಿ ಬಂಧನ, ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಲಕ್ನೋ : ಹತ್ರಾಸ್‌ನಲ್ಲಿ ಸತ್ಸಂಗದ ನಂತರ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರೆಲ್ಲರೂ ಸತ್ಸಂಗವನ್ನು ನಡೆಸುವ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ನಾರಾಯಣ ಸಾಕರ್ ಹರಿ ಅಥವಾ ‘ಭೋಲೆ ಬಾಬಾ’ ನಡೆಸಿದ ಸತ್ಸಂಗದ ನಂತರ ನಡೆದ ಕಾಲ್ತುಳಿತದಲ್ಲಿ ಒಟ್ಟು … Continued

ಮತ್ತೆ ಜಾರ್ಖಂಡ್ ಸಿಎಂ ಆಗಿ ಹೇಮಂತ ಸೊರೇನ್‌ ಪ್ರಮಾಣವಚನ

ರಾಂಚಿ: ಐದು ತಿಂಗಳ ನಂತರ ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಅವರು ಗುರುವಾರ ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ಬಹುಕೋಟಿ ಮೌಲ್ಯದ ಭೂ ಹಗರಣ ಆರೋಪ ಹೊತ್ತಿದ್ದ ಕಾರಣ ಜನವರಿಯಲ್ಲಿ ಜಾರಿ ನಿರ್ದೇಶನಾಲಯ ಬಂಧಿಸುವ … Continued

ವೀಡಿಯೊ..| ಕೆಮ್ಮಿನ ಸಿರಪ್ ಬಾಟಲಿ ನುಂಗಿದ ನಾಗರಹಾವು; ಅದನ್ನು ರಕ್ಷಿಸಿದ್ದು ಹೇಗೆ..? ವೀಕ್ಷಿಸಿ

ಸಮುದ್ರದ ಆಳದಿಂದ ಪರ್ವತ ಶಿಖರಗಳವರೆಗೆ, ಮಾನವರು ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಭೂಮಿಯನ್ನು ಕಸದ ತೊಟ್ಟಿಯನ್ನಾಗಿ ಮಾಡಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯಗಳು ಕಾಡುಗಳಲ್ಲಿ ಸಹ ನುಸುಳಿವೆ. ಪರಿಣಾಮವಾಗಿ, ಕಾಡು ಪ್ರಾಣಿಗಳು ಸಾಮಾನ್ಯವಾಗಿ ತಮ್ಮ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಅಗಿಯುತ್ತವೆ ಅಥವಾ ನುಂಗುತ್ತವೆ. ಅಂತಹ ಒಂದು ನಿದರ್ಶನದಲ್ಲಿ, ಭುವನೇಶ್ವರದಲ್ಲಿ ಕೆಮ್ಮಿನ ಸಿರಪ್ ಬಾಟಲಿಯನ್ನು ನುಂಗಿದ ನಂತರ ನಾಗರಹಾವು ಉಸಿರಾಡಲು ಹೆಣಗಾಡುತ್ತಿರುವುದು … Continued