ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. … Continued

ಯುಎಪಿಎ ಅಡಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2010 ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(Unlawful Activities (Prevention) Act)ಯಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ (ಜೂನ್ 14) ತಿಳಿಸಿದ್ದಾರೆ. ಅರುಂಧತಿ ರಾಯ್ … Continued

ದರ್ಶನ್ ಪ್ರಕರಣ : ತೀವ್ರ ಆಘಾತ-ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು ಎಂದ ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿ ತಿಳಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ರೇಣುಕಾಸ್ವಾಮಿ ಅವರನ್ನು ನಟ ದರ್ಶನ್‌ … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಅವರ ಬಂಧನಕ್ಕೆ ತಡೆ ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ … Continued

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿಗೆ ಹೊತ್ತು ತಂದ ವಿಶೇಷ ಐಎಎಫ್ ವಿಮಾನ

ಕೊಚ್ಚಿ : ಕುವೈತ್‌ನಲ್ಲಿ ಬುಧವಾರ (ಜೂನ್ 12) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ವಿಶೇಷ ಐಎಎಫ್ ವಿಮಾನ ಇಂದುಮಶುಕ್ರವಾರ (ಜೂನ್‌ 14) ಕೊಚ್ಚಿಗೆ ಬಂದಿಳಿಯಿತು. ಕುವೈತ್‌ನ ಮಂಗಾಫ್ ಪ್ರದೇಶದ ಕಾರ್ಮಿಕ ವಸತಿ ಸೌಲಭ್ಯದಿಂದ ಮೃತರ ಅವಶೇಷಗಳನ್ನು ತಕ್ಷಣವೇ ಸ್ವದೇಶಕ್ಕೆ ತರಲು ಭಾರತ ಸರ್ಕಾರ ಆಯೋಜಿಸಿದ್ದ ಭಾರತದ ವಾಯು … Continued

‘ನಮಸ್ತೆʼ ಈಗ ಜಾಗತಿಕ : ಜಿ7 ನಾಯಕರನ್ನು ಭಾರತೀಯ ಸಂಪ್ರದಾಯ ʼನಮಸ್ತೆʼ ಮೂಲಕ ಸ್ವಾಗತಿಸಿದ ಇಟಲಿ ಪ್ರಧಾನಿ | ವೀಡಿಯೊ ವೈರಲ್‌

ನವದೆಹಲಿ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಜಿ7 ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಕೈ ಮುಗಿದು ನಮಸ್ಕರಿಸುವ ಮೂಲಕ ಸ್ವಾಗತಿಸಿರುವುದು ಎಲ್ಲ ಗಮನ ಸೆಳೆದಿದೆ. ಮೆಲೋನಿ ಅವರು ವಿವಿಧ ದೇಶದ ನಾಯಕರಿಗೆ ನಮಸ್ತೆ ಮಾಡುವ ಮೂಲಕ ಸ್ವಾಗತಿಸುತ್ತಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಟಲಿಯು ಈ ವರ್ಷದ G7 ಶೃಂಗಸಭೆಯನ್ನು ಆಯೋಜಿಸುತ್ತಿದ್ದು, ಜೂನ್ 13-15ರ … Continued

ವೀಡಿಯೊ..| ದುರಹಂಕಾರಿಯಾದವರನ್ನು ಶ್ರೀರಾಮನೇ 241ಕ್ಕೆ ನಿಲ್ಲಿಸಿದ್ದಾನೆ : ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ನಾಯಕನ ವಾಗ್ದಾಳಿ

ಜೈಪುರ: ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದಿಂದ ಟೀಕೆಗೆ ಒಳಗಾಗಿದೆ, ಆರೆಸ್ಸೆಸ್ ನಾಯಕ ಇಂದ್ರೇಶಕುಮಾರ ಅವರು ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವಾದ ಬಿಜೆಪಿಯ ಇತ್ತೀಚಿನ ಕಳಪೆ ಪ್ರದರ್ಶನವನ್ನು “ದುರಹಂಕಾರ” ಎಂದು ಟೀಕಿಸಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶಕುಮಾರ ಅವರು, “ಶ್ರೀರಾಮನ ಭಕ್ತರು ಕ್ರಮೇಣ ದುರಹಂಕಾರಿಯಾದರು. … Continued

ಈ ಲೋಕಸಭೆಯಲ್ಲಿ 93%ರಷ್ಟು ಸಂಸದರು ಕೋಟ್ಯಧಿಪತಿಗಳು: ಟಾಪ್‌ 10 ಶ್ರೀಮಂತ ಲೋಕಸಭಾ ಸದಸ್ಯರ ಆಸ್ತಿ ಎಷ್ಟು ಗೊತ್ತೆ..? ಇಲ್ಲಿದೆ ಮಾಹಿತಿ

ನವದೆಹಲಿ : 18ನೇ ಲೋಕಸಭೆಗೆ ಚುನಾಯಿತರಾದ 543 ಸಂಸದರಲ್ಲಿ 504 ಅಥವಾ 93 ಪ್ರತಿಶತದಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದು, ಹಿಂದಿನ ಎರಡು ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ ಇದು ಗಮನಾರ್ಹ ಹೆಚ್ಚಳವಾಗಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ, 2019 ರಲ್ಲಿ ಚುನಾಯಿತ ಸಂಸದರಲ್ಲಿ 88%ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದರೆ, 2014 ರಲ್ಲಿ 82# ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದಾರೆ. … Continued

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶುಕ್ರವಾರ (ಜೂನ್‌ ೧೪)ರಂದು ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued