ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆಗೆ ಅನುಮತಿ ನೀಡಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ಅನುಮತಿಸಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ … Continued

ವೀಡಿಯೊ..| ಪ್ಲಾಸ್ಟಿಕ್ ನೀರಿನ ಬಾಟಲಿಯಿಂದ ಕಾರಿಗೆ ಬೆಂಕಿ ಹೊತ್ತಿಕೊಂಡ ವೀಡಿಯೊ ವೈರಲ್; ಇದಕ್ಕೆ ಕಾರಣ ತೋರಿಸಿದ ಇನ್ಸ್ಟಾಗ್ರಾಮರ್‌-ವೀಕ್ಷಿಸಿ

ರಸ್ತೆ ಬದಿಯಲ್ಲಿ ಕಾರೊಂದು ಹೊತ್ತಿ ಉರಿಯುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಾಹನದೊಳಗೆ ಬಿಟ್ಟಿದ್ದ ನೀರಿನ ಬಾಟಲಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬಾಟಲಿಯು ಸೂರ್ಯನ ತೀವ್ರ ಶಾಖದ ಕಿರಣಕ್ಕೆ ಒಡ್ಡಿಕೊಂಡ ನಂತರ ನಂತರ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯ ಸ್ಥಳವು ಅಸ್ಪಷ್ಟವಾಗಿದ್ದರೂ, ಇದು ದೆಹಲಿ-ಎನ್‌ಸಿಆರ್ ಪ್ರದೇಶದ ಘಟನೆ ಎಂದು ನಂಬಲಾಗಿದೆ, … Continued

300 ಕೋಟಿ ಆಸ್ತಿಗಾಗಿ ತನ್ನ ಮಾವನನ್ನೇ ʼಹಿಟ್ ಅಂಡ್ ರನ್‌ʼ ಮೂಲಕ ಕೊಲ್ಲಿಸಿದ ಸೊಸೆ ; ಇದಕ್ಕಾಗಿ 1 ಕೋಟಿ ರೂ.ಹಣ ಪಾವತಿ..?!

ನಾಗ್ಪುರ: ನಾಗ್ಪುರದಲ್ಲಿ 82 ವರ್ಷದ ವ್ಯಕ್ತಿಯೊಬ್ಬರು ಹಿಟ್ ಅಂಡ್ ರನ್‌ ಸಾವಿನ ಪ್ರಕರಣದ ತನಿಖೆ ವೇಳೆ ಕುಟುಂಬದ ₹ 300 ಕೋಟಿ ಮೌಲ್ಯದ ಆಸ್ತಿಗಾಗಿ ಮೃತ ವ್ಯಕ್ತಿಯ ಸೊಸೆಯೇ ರೂಪಿಸಿದ್ದ ಭೀಕರ ಕೊಲೆ ಸಂಚು ಬಯಲಾಗಿದೆ…! ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಅರ್ಚನಾ ಮನೀಷ ಪುಟ್ಟೇವಾರ ಎಂಬವರನ್ನು ಘಟನೆ ನಡೆದ ಹದಿನೈದು ದಿನಗಳ ನಂತರ … Continued

ಪಾಕಿಸ್ತಾನದಲ್ಲಿ ಕತ್ತೆಗಳ ಸಂಖ್ಯೆಯಲ್ಲಿ ಹೆಚ್ಚಳ ; ಆದರೆ ದೇಶದ ಜಿಡಿಪಿ ಬೆಳವಣಿಗೆ ಕುಂಠಿತ : ಆರ್ಥಿಕ ಸಮೀಕ್ಷೆ

ಇತ್ತೀಚಿನ 2023-24ರ ಪಾಕಿಸ್ತಾನದ ಆರ್ಥಿಕ ಸಮೀಕ್ಷೆಯು ದೇಶದ ಕತ್ತೆಗಳ ಸಂಖ್ಯೆಗಳಲ್ಲಿ ಗಮನಾರ್ಹ ಹೆಚ್ಚಳವನ್ನು ಬಹಿರಂಗಪಡಿಸಿದೆ, ಅದು ಈಗ 59 ಲಕ್ಷ ತಲುಪಿದೆ. ಇದು ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 1.72 ರಷ್ಟು ಬೆಳವಣಿಗೆಯನ್ನು ಸೂಚಿಸುತ್ತದೆ. ಕತ್ತೆಗಳ ಸಂಖ್ಯೆ ಹೆಚ್ಚಾದರೂ ಪಾಕಿಸ್ತಾನದ ಒಟ್ಟಾರೆ ಆರ್ಥಿಕ ಸಾಧನೆ ನಿರೀಕ್ಷೆಗೂ ಮೀರಿ ಕುಸಿದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು … Continued

ಕೆಪಿಸಿಎಲ್‌ ನೇಮಕಾತಿ ಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (KPCL) 622 ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಖಾಲಿ ಹುದ್ದೆಗಳನ್ನು ತುಂಬಲು ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ( Karnataka Examinations Authority)ವು ತನ್ನ ವೆಬ್‌ಸೈಟ್‌ನಲ್ಲಿ ಬುಧವಾರ ಪ್ರಕಟಿಸಿದೆ. ಆಕ್ಷೇಪಣೆಗಳ ಪರಿಶೀಲನೆ ನಂತರ, ಕಳೆದ ಸಲದಂತೆ ಈ ಬಾರಿಯೂ, ಪ್ರತಿ … Continued

ನಟ ದರ್ಶನ್ ಸೇರಿ 13 ಜನರ ಮೊಬೈಲ್ ಸೀಜ್ : ವರದಿ

 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಪೊಲೀಸರು ಚುರುಕುಗೊಳಿಸಿದ್ದಾರೆ. ಕನ್ನಡ ನಟ ದರ್ಶನ್ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಆರೋಪಿಗಳ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಜೂನ್ 8 ರಂದು ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಲೇವಾರಿ ಮಾಡಲು ನಟ ದರ್ಶನ್ ಮತ್ತು ಅವರ ಸಹಾಯಕರು ಬಳಸಿದ್ದಾರೆ ಎನ್ನಲಾದ ಜೀಪ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ … Continued

ಕುವೈತ್ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದ 49 ಜನರಲ್ಲಿ 40 ಮಂದಿ ಭಾರತದವರು

ನವದೆಹಲಿ: ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಕಾಣಿಸಿಕೊಂಡು 40 ಮಂದಿ ಭಾರತೀಯರು ಸೇರಿದಂತೆ 49 ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ (9 am IST) ಈ ಘಟನೆ ನಡೆದಿದೆ. 40 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಆರು ಅಂತಸ್ತಿನ … Continued

ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನಚರಣ ಮಾಝಿ ಪ್ರಮಾಣ ವಚನ : ಸಚಿವರ ಪಟ್ಟಿ

ಭುವನೇಶ್ವರ : ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮೋಹನ ಚರಣ ಮಾಝಿ ಅವರು ಬುಧವಾರ ಸಂಜೆ ಜನತಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರದಾಸ ಅವರು ಅಧಿಕಾರಿಯಾಗಿ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ, ಬಿಜೆಪಿ ಪಕ್ಷದಿಂದ … Continued

ಕುವೈತ್‌ ಕಟ್ಟಡದಲ್ಲಿ ಅಗ್ನಿ ಅವಘಡ ; ಭಾರತೀಯರು ಸೇರಿ 41 ಮಂದಿ ಸಾವು

ಕುವೈತ್ : ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ಕನಿಷ್ಠ 41 ಜನರು ಸಾವಿಗೀಡಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮವು ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಹಲವಾರು ಭಾರತೀಯರು ಸಹ ಮೃತಪಟ್ಟಿದ್ದಾರೆ. ಸ್ಥಳೀಯ ಮಾಧ್ಯಮಗಳು ಈ ಕಟ್ಟಡವು ಹೆಚ್ಚಿನ ಮಲಯಾಳಂ ಜನಸಂಖ್ಯೆಯನ್ನು ಹೊಂದಿದೆ ಎಂದು ವರದಿ ಮಾಡಿದೆ. … Continued

ನಟ ದರ್ಶನ್‌ ಬಂಧನದ ಬೆನ್ನಲ್ಲೇ ಪತಿಯನ್ನು ಅನ್ ಫಾಲೋ ಮಾಡಿ ಪ್ರೊಫೈಲ್ ಫೋಟೋ ತೆಗೆದು ಹಾಕಿದ ಪತ್ನಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬವರ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ. ಅಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ರೇಣುಕಾಸ್ವಾಮಿ … Continued