ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 11 ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿದೆ. ಹಾಗೂ 11 ಶಂಕಿತರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 … Continued

‘ಪುರಿ ಜಗನ್ನಾಥ ಪ್ರಧಾನಿ ಮೋದಿ ಭಕ್ತ’ ಹೇಳಿಕೆ: ಬಾಯಿತಪ್ಪಿನ ಹೇಳಿಕೆಗೆ 3 ದಿನ ಉಪವಾಸ ಕೈಗೊಂಡ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ

ಭುವನೇಶ್ವರ: ‘ಪುರಿ ಜಗನ್ನಾಥ ದೇವರು ಮೋದಿಯ ಭಕ್ತ’ ಎಂಬ ಹೇಳಿಕೆ ಕುರಿತಂತೆ ದೇವರಲ್ಲಿ ಕ್ಷಮೆಯಾಚಿಸಿರುವ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ, ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮುಂದಿನ ಮೂರು ದಿನಗಳು ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವ ವೇಳೆ, ‘ಪುರಿ ಜಗನ್ನಾಥ ದೇವರು … Continued

ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

ಸಾಲದ ಹಣ ಮರಳಿ ಕೊಡಲು ತಡವಾಗಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ : ಮನನೊಂದು ರೈತ ಆತ್ಮಹತ್ಯೆ

ಬೆಳಗಾವಿ : ಸಾಲ ಮರಳಿಸಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಪತ್ನಿ ಮತ್ತು ಪುತ್ರನನ್ನು ಗೃಹ ಬಂಧನದಲ್ಲಿ ಇರಿಸಿಕೊಂಡಿದ್ದಕ್ಕೆ ಮನನೊಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಇಸ್ಲಾಂಪುರದಲ್ಲಿ ಬೆಳಕಿಗೆ ಬಂದಿದೆ. ರಾಜು ಖೋತಗಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಮೃತ ರಾಜು ಭೀಕರ ಬರದಿಂದ ಬೆಳೆ ನಷ್ಟವಾದ ನಂತರ … Continued

ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ…ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ…!

ಉಡುಪಿಯ ಶಂಕರಪುರದ ರೈತರೊಬ್ಬರು ತಮ್ಮ ತಾರಸಿ ಮೇಲಿನ ತೋಟದಲ್ಲಿ ವಿಶ್ವದ ಅತ್ಯಂತ ದುಬಾರಿ ಮತ್ತು ಹೆಚ್ಚು ಬೇಡಿಕೆಯಿರುವ ʼಮಿಯಾಜಾಕಿ ತಳಿʼಯ ಮಾವನ್ನು ಬೆಳೆದು ಅಚ್ಚರಿ ಮೂಡಿಸಿದ್ದಾರೆ. ಈ ಮಅವಿನ ಹಣ್ಣಿನ ಬೆಲೆ ಒಂದು ಕಿಲೋಗ್ರಾಂ ಗೆ 3 ಲಕ್ಷ ರೂಪಾಯಿಗಳ ವರೆಗೆ ಇರುತ್ತದೆ. ಉಡುಪಿಯ ಶಂಕರಪುರದ ರೈತರಾದ ಜೋಸೆಫ್ ಲೋಬೊ ಎಂಬವರು ತಮ್ಮ ಮನೆಯ ತಾರಸಿಯಲ್ಲಿ … Continued

“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್‌ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಶೇ. 33ರಷ್ಟನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಸೂಚಿಸಿದೆ. ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ ಜಾರಿ ಮಾಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ … Continued

ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued

ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರ ಬಂಧನ

ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ಅದೇ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಭಯೋತ್ಪಾದಕರು ಶ್ರೀಲಂಕಾದ ನಾಗರಿಕರು ಎಂದು ನಂಬಲಾಗಿದೆ. ಈ ನಾಲ್ವರು ತಮ್ಮ ಹ್ಯಾಂಡ್ಲರ್‌ಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಹ್ಯಾಂಡ್ಲರ್ ಈ ನಾಲ್ವರು … Continued