ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಇರಾನ್‌ನಲ್ಲಿ ಇಲ್ವಂತೆ?; ಇಸ್ರೇಲಿ ಮೂಲ ಉಲ್ಲೇಖಿಸಿ ಸೌದಿ ಮಾಧ್ಯಮದ ವರದಿ

ಇರಾನ್‌ನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರು ಪ್ರಸ್ತುತ ಇರಾನ್‌ನಲ್ಲಿಲ್ಲ ಎಂದು ಇಸ್ರೇಲ್‌ನ ಭದ್ರತಾ ಮೂಲವೊಂದು ಹೇಳಿದೆ ಎಂದು ಸೌದಿ ಅರೇಬಿಯಾದ ಅಲ್-ಹದಾಥ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಅವರು ಈಗ ಎಲ್ಲಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ನೀಡಲಾಗಿಲ್ಲ. ಅಲ್ಲದೆ, ಈ ಹೇಳಿಕೆಯನ್ನು ಸಮರ್ಥಿಸುವಂತಹ ಯಾವುದೇ ಸಾಕ್ಷ್ಯ ಅಥವಾ ಅಧಿಕೃತ ದೃಢೀಕರಣವೂ ಲಭ್ಯವಾಗಿಲ್ಲ. … Continued

ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಭಾನುವಾರ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಹೊಸದಾಗಿ ರಚನೆಯಾದ ʼನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್‌ಸಿಪಿಐ)ʼಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಸಭೆಯಿಂದ ಕೆಲಕಾಲ ಹೊರನಡೆದರು. ಆದರೆ, ಕೆಲವೇ ನಿಮಿಷಗಳಲ್ಲಿ ಅವರು ಮತ್ತೆ ಸಭೆಗೆ ಮರಳಿದರು. ಕಳೆದ ತಿಂಗಳು ತೃಣಮೂಲ ಕಾಂಗ್ರೆಸ್‌ನ … Continued

ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ

ಮುಂಬೈ: ಶಿವಸೇನಾ (ಉದ್ಧವ್ ಠಾಕ್ರೆ) ಪಕ್ಷಕ್ಕೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶಿವಸೇನಾ (ಯುಬಿಟಿ)ಯಿಂದ ಬಂಡಾಯವೆದ್ದು ಹೊರಬಂದ ಆರು ಲೋಕಸಭಾ ಸದಸ್ಯರು ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯಲ್ಲಿ ವಿಲೀನಗೊಳ್ಳಲು ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದಿಂದ ಬಂಡಾಯ ಸಂಸದರ ಪಕ್ಷಾಂತರವು ಸಂವಿಧಾನದ ಪಕ್ಷಾಂತರ ನಿಷೇಧ ಕಾಯ್ದೆ (Anti-Defection Law) ಅಡಿಯಲ್ಲಿ … Continued

ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ…ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು…!

ಮೀರತ್‌: ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯ ಹಸ್ತಿನಾಪುರದಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣವೊಂದರಲ್ಲಿ, ಪತಿಯನ್ನು ವಿಷಕಾರಿ ಹಾವಿನಿಂದ ಕಚ್ಚಿಸಿ ಕೊಲೆ ಮಾಡಿಸಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯ ಸಾವನ್ನು ಹಾವು ಕಚ್ಚಿದ ಘಟನೆ ಎಂಬಂತೆ ಬಿಂಬಿಸಿ, ₹20 ಲಕ್ಷ ವಿಮೆ ಹಣ ಪಡೆದುಕೊಳ್ಳುವುದು ಹಾಗೂ ತಮ್ಮ ಪ್ರೇಮ … Continued

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಯಾಮಿ ಗೌತಂ ಅತ್ಯುತ್ತಮ ನಟಿ, ಕಾರ್ತಿಕ್ ಆರ್ಯನ್–ಮಮ್ಮುಟ್ಟಿ ಅತ್ಯುತ್ತಮ ನಟರು ; ಪ್ರಶಸ್ತಿಗಳ ಪಟ್ಟಿ

ನವದೆಹಲಿ: 2024ನೇ ಸಾಲಿನ ಭಾರತೀಯ ಸಿನಿರಂಗದ ಅತ್ಯುತ್ತಮ ಸಾಧನೆಗಳನ್ನು ಗೌರವಿಸುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಶನಿವಾರ ಸಂಜೆ ಪ್ರಕಟಿಸಲಾಯಿತು. ನವದೆಹಲಿ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ವಿಜೇತರನ್ನು ಘೋಷಿಸಲಾಯಿತು. ‘ಆರ್ಟಿಕಲ್ 370’ ಚಿತ್ರದ ಅಭಿನಯಕ್ಕಾಗಿ ಯಾಮಿ ಗೌತಂ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾದರೆ, ‘ಚಂದು ಚಾಂಪಿಯನ್’ (ಹಿಂದಿ) ಚಿತ್ರದ … Continued

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ, ಆದರೆ ಇಂದು, ಶನಿವಾರ ಸಂಜೆ 4:30ರ ಸುಮಾರಿಗೆ … Continued

ಟ್ರಂಪ್ ಹತ್ಯೆ ಮಾಡಿದವರಿಗೆ ₹96 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ ಇರಾನ್ ಬೆಂಬಲಿತ ಇರಾಕಿನ ಬಂಡುಕೋರರ ಗುಂಪು

ಬಾಗ್ದಾದ್/ವಾಷಿಂಗ್ಟನ್ :  ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡುವವರಿಗೆ 10 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹96.6 ಕೋಟಿ) ಬಹುಮಾನ ನೀಡುವುದಾಗಿ ಇರಾನ್ ಬೆಂಬಲಿತ ಸಶಸ್ತ್ರ ಹೋರಾಟಗಾರರ ಸಂಘಟನೆಗಳ ಒಕ್ಕೂಟವಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್ (Islamic Resistance in Iraq–IRI) ಘೋಷಿಸಿದೆ. 2020ರಲ್ಲಿ ನಡೆದ ಅಮೆರಿಕದ ಡ್ರೋನ್ ದಾಳಿಯಲ್ಲಿ ಇರಾನ್‌ನ ಹಿರಿಯ … Continued

ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಯ ವೇಳೆ, ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರ ಮೇಲೆ ಮಹಿಳೆಯೊಬ್ಬರು ಶನಿವಾರ ನೀಲಿ ಶಾಯಿ ಮಾದರಿಯ ದ್ರವವನ್ನು ಎರಚಿದ ಘಟನೆ ಭಾರೀ ಗದ್ದಲಕ್ಕೆ ಕಾರಣವಾಯಿತು. ಹತ್ತಿರದಲ್ಲಿ ನಿಂತಿದ್ದ ಕೆಲವು ಜನರ ಟಿ-ಶರ್ಟ್‌ಗಳ ಮೇಲೂ ಶಾಯಿ ಬಿದ್ದಿದೆ. … Continued

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

ನವದೆಹಲಿ : ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆಯೊಂದು ದಾಖಲಾಗಿದೆ. ಸ್ಕೈರೂಟ್ ಏರೋಸ್ಪೇಸ್ (Skyroot Aerospace) ಅಭಿವೃದ್ಧಿಪಡಿಸಿರುವ ‘ವಿಕ್ರಂ-1’ ಉಡಾವಣಾ ವಾಹಕ ತನ್ನ ಅಂತಿಮ ಹಂತದ (Final Burn) ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಭೂಮಿಯ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ. ‘ಮಿಷನ್ ಆಗಮನ’ (Mission Aagaman) ಎಂದು ಹೆಸರಿಸಲಾದ ಈ ಉಡಾವಣೆ, ಭಾರತದಲ್ಲಿ ಖಾಸಗಿಯಾಗಿ ಅಭಿವೃದ್ಧಿಪಡಿಸಲಾದ … Continued

ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued