ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ಅವರನ್ನು ನೇಮಕ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ತ್ರಿಪಾಠಿ ಅವರು ವೈಸ್ ಅಡ್ಮಿರಲ್ ಆರ್ ಹರಿಕುಮಾರ ಅವರ ನಂತರ ಏಪ್ರಿಲ್ 30 ರಂದು ಅವರು ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವಹಿಸಿಕೊಳ್ಳಲಿದ್ದಾರೆ. ತ್ರಿಪಾಠಿ ಅವರು ಭಾರತೀಯ ನೌಕಾಪಡೆಯಲ್ಲಿ … Continued

ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಇಂದು(ಶುಕ್ರವಾರ) ನಡೆಯುತ್ತಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 1,652 ಅಭ್ಯರ್ಥಿಗಳು ಕಣದಲ್ಲಿದ್ದು, 16.63 ಕೋಟಿ ಮತದಾಋರು ತಮ್ಮ ಮತದ ಹಕ್ಕನ್ನು ಚಲಾಯಿಸಲಿದ್ದಾರೆ. ತಮಿಳುನಾಡು – 39, ರಾಜಸ್ಥಾನದ … Continued

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗ : ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಲಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರಸಭೆ  ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ … Continued

ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued

ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಹಲವೆಡೆ ಮಳೆಯಾಗಿದೆ. ಏಪ್ರಿಲ್‌ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, … Continued

ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ … Continued

ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ವೀಡಿಯೊ…: ಭಾರೀ ಮಳೆ-ಬಿರುಗಾಳಿಯ ನಡುವೆ ಹಸಿರು ಬಣ್ಣಕ್ಕೆ ತಿರುಗಿದ ದುಬೈನ ಆಕಾಶ…!

ಕಳೆದ ಎರಡು ದಿನಗಳಿಂದ ದುಬೈ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಭೂತಪೂರ್ವ ಹವಾಮಾನ ಪರಿಸ್ಥಿತಿ ಎದುರಾಗಿದೆ. ಜಲ ಪ್ರಳಯವು ವ್ಯಾಪಕ ಅವ್ಯವಸ್ಥೆಗೆ ಕಾರಣವಾಗಿದೆ. ಇದು ವಿಮಾನ ಪ್ರಯಾಣದ ಮೇಲೆ ಪರಿಣಾಮ ಬೀರಿತು ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಾದ್ಯಂತ ರಸ್ತೆಗಳು ಮುಳುಗಿದವು. ಇದು ದುಬೈನ ಸಾಮಾನ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ವಿಮಾನ ನಿಲ್ದಾಣದಲ್ಲಿ ನೀರು ತುಂಬಿದ ಪರಿಣಾಮ … Continued

ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಏಪ್ರಿಲ್ 18 ರಂದು ಜಪ್ತಿ ಮಾಡಿದೆ. ಲಗತ್ತಿಸಲಾದ ಆಸ್ತಿಗಳಲ್ಲಿ ಕುಂದ್ರಾ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಅವರ ಮುಂಬೈನ ಜುಹುದಲ್ಲಿನ ವಸತಿ … Continued