ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ʼಮಾಧ್ಯಮ ಶ್ರೀʼ ಪ್ರಶಸ್ತಿಗೆ ಪತ್ರಕರ್ತ ರವಿ ನಾಯ್ಕ ಆಯ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕವಾಗಿ ಕೊಡಮಾಡುವ ಮಾಧ್ಯಮ ಶ್ರೀ ಪ್ರಶಸ್ತಿಗೆ ಜನಮಾಧ್ಯಮ ದಿನಪತ್ರಿಕೆಯ ಹಿರಿಯ ಉಪಸಂಪಾದಕ ರವಿ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿನ ಪತ್ರಿಕಾ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಕೆರೆಗದ್ದೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಮಾಧ್ಯಮ ಶ್ರೀ ಪ್ರಶಸ್ತಿಗೆ … Continued

ಇರಾನ್‌ ಜೊತೆಗಿನ ಒಪ್ಪಂದ ಮುಗಿದ ಅಧ್ಯಾಯ ಎಂದು ಟ್ರಂಪ್‌ ಘೋಷಣೆ ; ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ಅಂಕಾರಾ (ಟರ್ಕಿ): ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರಸ್ಪರ ದಾಳಿಗಳ ಬಳಿಕ ಇರಾನ್‌ ಜೊತೆಗಿನ ಮಧ್ಯಂತರ ಕದನ ವಿರಾಮ (Ceasefire) ‘ಅಂತ್ಯಗೊಂಡಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಜುಲೈ 8) ಘೋಷಿಸಿದ್ದಾರೆ. ಇರಾನ್‌ನ ನಾಯಕತ್ವವನ್ನು “ಅನಾರೋಗ್ಯಪೀಡಿತರು” ಎಂದು ಟೀಕಿಸಿದ ಅವರು, “ಅವರ ಜೊತೆ ಮಾತುಕತೆ ನಡೆಸುವುದೇ ಸಮಯ ವ್ಯರ್ಥ” … Continued

ಅಡಕೆ ಸಾಗಣೆಗೆ ಯಾವುದೇ ತೊಂದರೆಯಾಗದು : ಮಹಾರಾಷ್ಟ್ರ ಸಿಎಂ ಫಡ್ನವೀಸ್‌ ಭರವಸೆ

ನವದೆಹಲಿ ​: ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಅಡಕೆ ಸಾಗಣೆ ಸಮಸ್ಯೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜೊತೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ರಾಜ್ಯದ … Continued

ಬಿಷ್ಣೋಯ್ ಗ್ಯಾಂಗ್ ಸೇರಿ ಹಲವು ಗ್ಯಾಂಗ್‌ಗಳ ವಿರುದ್ಧ ವಿಶ್ವದಾದ್ಯಂತ ಭಾರಿ ಕಾರ್ಯಾಚರಣೆ: 24 ಜನರ ಬಂಧನ

ನವದೆಹಲಿ: ಭಾರತ ಮೂಲದ ಅಂತಾರಾಷ್ಟ್ರೀಯ ಸಂಘಟಿತ ಅಪರಾಧ ಜಾಲಗಳ ವಿರುದ್ಧ ಅಮೆರಿಕ, ಕೆನಡಾ ಹಾಗೂ ಯುರೋಪಿನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸೇರಿದಂತೆ ಹಲವು ಅಪರಾಧ ಸಂಘಟನೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕೊಲೆ, ಮಾದಕ ವಸ್ತು ಸಾಗಣೆ, ಸುಲಿಗೆ, ಅಪಹರಣ ಹಾಗೂ ಗಡಿಪಾರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ … Continued

ಇರಾನಿನ 80ಕ್ಕೂ ಹೆಚ್ಚು ಟಾರ್ಗೆಟ್‌ಗಳ ಮೇಲೆ ಅಮೆರಿಕದಿಂದ ಭೀಕರ ವೈಮಾನಿಕ ದಾಳಿ : ಇರಾನ್‌ ಪ್ರತಿದಾಳಿ

ತೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಾಗಿದ್ದು, ಇರಾನಿನ ನೆಲೆಗಳ ಮೇಲೆ ಅಮೆರಿಕದ ಭಾರೀ ವೈಮಾನಿಕ ದಾಳಿ ನಡೆಸಿದೆ. 80ಕ್ಕೂ ಹೆಚ್ಚು ಟಾರ್ಗೆಟ್‌ಗಳ ಮೇಲೆ ಅಮೆರಿಕ  ನಿಖರ ದಾಳಿ ನಡೆಸಿದ್ದು, ಇರಾನ್‌ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿನ ಇರಾನ್‌ನ ಸೇನಾ ಗುರಿಗಳ ಮೇಲೆ ಅಮೆರಿಕ ನಡೆಸಿರುವ ಹೊಸ … Continued

24 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿಯಲ್ಲಿ ಮೂರನೇ ಹಡಗಿನ ಮೇಲೆ ದಾಳಿ

#Karnataka  #Rain  #HeavyRain  #Weather 24 ಗಂಟೆಗಳಲ್ಲಿ ಮೂರನೇ ಟ್ಯಾಂಕರ್ ಮೇಲೂ ದಾಳಿ: ಹೋರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರ ಲಂಡನ್/ದೋಹಾ: ಕಳೆದ 24 ಗಂಟೆಗಳ ಅವಧಿಯಲ್ಲಿ ಹೋರ್ಮುಜ್ ಜಲಸಂಧಿಯಲ್ಲಿ ಮೂರನೇ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ/ಡ್ರೋನ್ ದಾಳಿ ನಡೆದಿದ್ದು, ಈ ಕುರಿತು ಬ್ರಿಟನ್‌ನ ಸಮುದ್ರ ವ್ಯಾಪಾರ ಕಾರ್ಯಾಚರಣೆಗಳ ಸಂಸ್ಥೆ (UKMTO) ಮಂಗಳವಾರ ಮಾಹಿತಿ ನೀಡಿದೆ. … Continued

ವಿಡಿಯೋ | ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆ-ಸಿಬ್ಬಂದಿ ಮೇಲೆ ಕಾರ್ಪೊರೇಟರ್ ಹಲ್ಲೆ

ಮುಂಬೈ: ಮುಂಬೈ ಸಮೀಪದ ಥಾಣೆ ಜಿಲ್ಲೆಯ ಡೊಂಬಿವ್ಲಿಯ ಕೆಡಿಎಂಸಿ (KDMC) ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಸ್ಥಳೀಯ ರಾಜಕೀಯ ನಾಯಕ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. … Continued

ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 8ಕ್ಕೆ ರಜೆ ಘೋಷಣೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಬುಧವಾರ (ಜುಲೈ 8) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ ಎಚ್.ವಿ. … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಬುಧವಾರ (ಜುಲೈ ೮) ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ … Continued

ಇಂಡೋನೇಷ್ಯಾ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜು ಪಟ್ನಾಯಕ್ ಪಾತ್ರ ಕೊಂಡಾಡಿದ ಪ್ರಧಾನಿ ಮೋದಿ : ಇದರ ಹಿಂದಿದೆ ಸಾಹಸದ ಕಥೆ

ನವದೆಹಲಿ: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡುವ ವೇಳೆ ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಖ್ಯಾತ ನಾಯಕ ದಿವಂಗತ ಬಿಜು ಪಟ್ನಾಯಕ್ ಅವರ ಸಾಹಸ ಮತ್ತು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ವಹಿಸಿದ್ದ ಮಹತ್ವದ ಪಾತ್ರವನ್ನು ಕೊಂಡಾಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ, “ಇಂಡೋನೇಷ್ಯಾ 1945ರಲ್ಲಿ ಮತ್ತು ಭಾರತ … Continued