ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಪಕ್ಷವು 46 ಲೋಕಸಭಾ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಪಕ್ಷದ ನಾಯಕರಾದ ದಿಗ್ವಿಜಯ ಸಿಂಗ್ ಅಜಯ ರೈ ಮತ್ತು ಕಾರ್ತಿ ಪಿ ಚಿದಂಬರಂ ಅವರು ಸಹ ಈ ಪಟ್ಟಿಯಲ್ಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ರಾಜ್‌ಗಢ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ ರೈ … Continued

ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪದೇಪದೇ ಮನವಿ ಮಾಡಿದರೂ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಕೂಡ ಕೇಂದ್ರ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್‌ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್‌ ಐ ಎ ; ಈತ ಯಾರು? ಹಿನ್ನೆಲೆ ಏನು ?

ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ ಮೂರು ಕ್ಷೇತ್ರಗಳು ; ಸುಮಲತಾ ಮುಂದಿನ ನಡೆ ಏನು..?

ಬೆಂಗಳೂರು: ಜೆಡಿಎಸ್-ಬಿಜೆಪಿ ದೋಸ್ತಿಗಳ ಮಧ್ಯೆ ಅಸಮಾಧಾನಕ್ಕೆ ಕಾರಣವಾಗಿದ್ದ ಕೋಲಾರ ಕ್ಷೇತ್ರವನ್ನು ಬಿಜೆಪಿ ಕೊನೆಗೂ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ಬಿಜೆಪಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಇದನ್ನು ತಿಳಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಟ್ಟಿರುವುದಾಗಿ … Continued

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಭಾರೀ ಬದಲಾವಣೆ, ಐವರು ನೂತನ ಕಾರ್ಯಾಧ್ಯಕ್ಷರ ನೇಮಕ, ಚುನಾವಣಾ ಪ್ರಚಾರ ಸಮಿತಿಗೂ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಸಂಘಟನಾತ್ಮಕ ಬದಲಾವಣೆ ಮಾಡಿರುವ ಕಾಂಗ್ರೆಸ್‌ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಅವರ ಬದಲಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ವಿನಯಕುಮಾರ ಸೊರಕೆ ಅವರನ್ನು ನೇಮಕ … Continued

ರಷ್ಯಾ ಭಯೋತ್ಪಾದಕ ದಾಳಿ : 143ಕ್ಕೆ ತಲುಪಿದ ಸಾವಿನ ಸಂಖ್ಯೆ ; ನಾಲ್ವರು ಬಂದೂಕುಧಾರಿಗಳ ಬಂಧನ

ಮಾಸ್ಕೋ : ಮಾಸ್ಕೋ ಬಳಿಯ ಕನ್ಸರ್ಟ್ ಹಾಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 115 ಜನರು ಸಾವಿಗೀಡಾಗಿದ್ದಾರೆ ಹಾಗೂ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಈ ಸಂಬಂಧ ನಾಲ್ವರು ಶಂಕಿತ ಬಂದೂಕುಧಾರಿಗಳು ಸೇರಿದಂತೆ 11 ಜನರನ್ನು ಬಂಧಿಸಿರುವುದಾಗಿ ರಷ್ಯಾ ಶನಿವಾರ ತಿಳಿಸಿದೆ, ಇದು 20 ವರ್ಷಗಳಲ್ಲಿ ರಷ್ಯಾದಲ್ಲಿ … Continued

ಭಾರತದ ವಿರುದ್ಧ ಗುಟುರು ಹಾಕಿ ಈಗ ಮೆತ್ತಗಾದ ಮಾಲ್ಡೀವ್ಸ್ ಅಧ್ಯಕ್ಷ : ಸಾಲ ತೀರಿಸಲು ವಿನಾಯಿತಿ ನೀಡಿ ಎಂದು ಅಂಗಲಾಚಿದ ಮುಯಿಝ್ಝು

ಮಾಲೆ: ಚೀನಾ ಜೊತೆ ಸ್ನೇಹ ಬೆಳೆಸಲು ಭಾರತ ವಿರೋಧಿ ಧೋರಣೆಗಳನ್ನು ಬಲವಾಗಿ ಪ್ರತಿಪಾದಿಸುವ ಮೂಲಕ ಸುದ್ದಿಯಲ್ಲಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝ್ಝು ಈಗ ಮೆತ್ತಗಾದಂತೆ ತೋರುತ್ತಿದೆ. ಭಾರತವು ತನ್ನ ದೇಶದ ‘ಅತಿ ಆಪ್ತ ಮಿತ್ರದೇಶ’ವಾಗಿ ಉಳಿಯಲಿದೆ ಎಂದು ಹೇಳಿರುವ ಮುಯಿಝ್ಝು, ಭಾರತವು ನೀಡಿದ್ದ ಸಾಲದ ಮೇಲೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವರ್ಷದ … Continued

ಹಿಮಾಚಲ ಪ್ರದೇಶ : ಕಾಂಗ್ರೆಸ್ಸಿನ 6 ಅನರ್ಹ ಶಾಸಕರು, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಧಿಕ್ಕರಿಸಿ ಅಡ್ಡ ಮತದಾನ ಮಾಡಿದ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಕಾಂಗ್ರೆಸ್ ಶಾಸಕರು ಇಂದು, ಶನಿವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಮೂವರು ಸ್ವತಂತ್ರ ಶಾಸಕರು ಸಹ ಬಿಜೆಪಿ ಸೇರಿದ್ದಾರೆ. ಕೇಂದ್ರ ಸಚಿವ ಅನುರಾಗ ಠಾಕೂರ್, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ ಠಾಕೂರ್ … Continued

ವೀಡಿಯೊ…| ಕುಮಟಾ: ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ, ಹಳಕಾರ, ಚಿತ್ರಗಿ ಮೊದಲಾದ ಪ್ರದೇಶಗಳಲ್ಲಿ ರಾತ್ರಿ ಅವಧಿಯಲ್ಲಿ ಆಗಾಗ ಜನರಿಗೆ ಕಾಣಿಸಿಕೊಂಡು ಜನರಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಕುಮಟಾ ತಾಲೂಕಿನ ಚಿತ್ರಗಿಯ ಶೇಷಾದ್ರಿ ಗುಡ್ಡದಲ್ಲಿ ಅರಣ್ಯ ಇಲಾಖೆಯವರು ಇಟ್ಟಿರುವ ಬೋನಿನಲ್ಲಿ ಈ ಚಿರತೆ ಸೆರೆಯಾಗಿದೆ. ಈ ಭಾಗದ ಜನರು … Continued