ವೀಡಿಯೊಗಳು…| ಅದ್ಧೂರಿಯಿಂದ ನಡೆದ ಶಿರಸಿ ಮಾರಿಕಾಂಬಾ ರಥೋತ್ಸವ ; ಭಕ್ತ ಸಾಗರದ ಮಧ್ಯೆ ಜಾತ್ರಾ ಗದ್ದುಗೆಗೆ ಆಗಮಿಸಿದ ಮಾರಿಕಾಂಬಾ ದೇವಿ

ಶಿರಸಿ: ರಾಜ್ಯದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ಜಾತ್ರೆಯ ಮಾರಿಕಾಂಬಾ ದೇವಿಯ ರಥೋತ್ಸವ ಜನಸ್ತೋಮದ ಮಧ್ಯೆ ಬುಧವಾರ ನಡೆಯಿತು. ಭಕ್ತಿ ಭಾವ ಹಾಗೂ ಭಕ್ತರ ಭಾವೋನ್ಮಾದ, ಜಯ ಘೋಷದ ಮಧ್ಯೆ ಬುಧವಾರ ಬೆಳಿಗ್ಗೆ ರಥೋತ್ಸವ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ನಸುಕಿನಲ್ಲಿ ರಥಾರೂಢಳಾದ ಸರ್ವಾಲಂಕಾರಭೂಷಿತೆ ಮಾರಿಕಾಂಬಾ ದೇವಿಯ ಶೋಭಾಯಾತ್ರೆ ಮೂಲಕ ಬಿಡಕಿಬೈಲಿನಲ್ಲಿ ಜಾತ್ರಾ ಗದ್ದುಗೆಗೆ ತೆರಳಿದಳು. … Continued

ಬೆಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. … Continued

ಪಕ್ಕದ ಮನೆಗೆ ಹೋಗಿ ಚಹಾ ಕೇಳಿದ ನಂತರ ರೇಜರ್‌ ನಿಂದ ಇಬ್ಬರು ಮಕ್ಕಳ ಕತ್ತು ಸೀಳಿ ಕೊಂದ ಕ್ಷೌರಿಕ : ನಂತರ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು

ಲಕ್ನೋ: ಉತ್ತರ ಪ್ರದೇಶದ ಬದೌನ್‌ನಲ್ಲಿ ಕ್ಷೌರಿಕನೊಬ್ಬ ಪಕ್ಕದಲ್ಲಿ ವಾಸಿಸುತ್ತಿದ್ದ ಇಬ್ಬರು ಮಕ್ಕಳನ್ನು ಕೊಂದು ಮತ್ತೊಬ್ಬನನ್ನು ತೀವ್ರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ನಂತರ ಕ್ಷೌರಿಕ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳವಾರ ಸಂಜೆ ನಡೆದ ಘಟನೆ ನಗರದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಸಾಜಿದ್ ಎಂದು … Continued

ಇಸ್ರೇಲ್‌ ದಾಳಿಯಲ್ಲಿ ಕೊಲ್ಲಲ್ಪಟ್ಟ ಹಮಾಸ್ ಉಪ ಸೇನಾ ನಾಯಕ : ವರದಿ

ಗಾಜಾದಲ್ಲಿ ಹಮಾಸ್‌ನ ಮಿಲಿಟರಿ ವಿಭಾಗದ ಉಪ ಕಮಾಂಡರ್ ಮತ್ತು ದಕ್ಷಿಣ ಇಸ್ರೇಲ್‌ನ ಅಕ್ಟೋಬರ್ 7 ರ ದಾಳಿಯ ಮಾಸ್ಟರ್‌ಮೈಂಡ್ ಆಗಿರುವ ಮಾರ್ವಾನ್ ಇಸ್ಸಾ ಒಂದು ವಾರದ ಹಿಂದೆ ಇಸ್ರೇಲಿ ವೈಮಾನಿಕ ದಾಳಿಯ ನಂತರ ಮೃತಪಟ್ಟಿದ್ದಾರೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಹಮಾಸ್‌ನ ಅತ್ಯುನ್ನತ ಶ್ರೇಣಿಯ ಅಧಿಕಾರಿಗಳಲ್ಲಿ ಒಬ್ಬರಾದ ಮಾರ್ವಾನ್ ಇಸ್ಸಾ ಮಾರ್ಚ್ 11 ರಂದು … Continued

ರಾಜ್ಯದ ಹಲವೆಡೆ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಸುಡು ಬಿಸಿಲ ಬೇಗೆ ಜಾಸ್ತಿಯಾಗಿದ್ದು, ಜೊತೆಗೆ ಜಲ ಕ್ಷಾಮವೂ ಎದುರಾಗಿದೆ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಕರ್ನಾಟಕದ ಕೊಡಗು, ಬೀದರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊಂಚ ಮಳೆ ಆರಂಭವಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಮಾರ್ಚ್‌ ೨೧ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ … Continued

ವೀಡಿಯೊ….| 15 ಅಡಿ ಉದ್ದದ ಬೃಹತ್‌ ಮೊಸಳೆ ದಾಳಿ ; ಸಾವಿನ ದವಡೆಯಿಂದ ಸ್ವಲ್ಪದರಲ್ಲೇ ಪಾರಾದ ಮೊಸಳೆ ಹ್ಯಾಂಡ್ಲರ್‌

15 ಅಡಿ ಮೊಸಳೆಯೊಂದು ಮೃಗಾಲಯದ ಮೊಸಳೆ ಹ್ಯಾಂಡ್ಲರ್‌ ಮೇಲೆ ಮೇಲೆ ದಾಳಿ ಮಾಡಿದ್ದು, ಆತ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಘಟನೆ ದಕ್ಷಿಣ ಆಫ್ರಿಕಾದ ಮೃಗಾಲಯದಲ್ಲಿ ನಡೆದಿದೆ. ಅನುಭವಿ ಸರೀಸೃಪ ತಜ್ಞರು ಕ್ವಾ-ಜುಲು ನಟಾಲ್‌ನ ಬಲ್ಲಿಟೊದಲ್ಲಿರುವ ಮೊಸಳೆ ಕ್ರೀಕ್ ಥೀಮ್ ಪಾರ್ಕ್‌ (Crocodile Creek theme park)ನಲ್ಲಿ ಸಂದರ್ಶಕರಿಗೆ ಮೊಸಳೆ ಬಗ್ಗೆ ಪ್ರದರ್ಶನ ನೀಡುತ್ತಿದ್ದಾಗ ಈ ಘಟನೆ ನಡೆದಿದೆ … Continued

ಎನ್‌ ಕೌಂಟರ್‌ನಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಪೊಲೀಸರು

ಮುಂಬೈ: ಮಂಗಳವಾರ ಪೂರ್ವ ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ. ಮಹಾರಾಷ್ಟ್ರ ಪೊಲೀಸ್ C-60 ಕಮಾಂಡೋಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯಿತು, ಇದರ ಪರಿಣಾಮವಾಗಿ ಕಮಾಂಡೋ ಘಟಕವು ನಾಲ್ಕು ನಕ್ಸಲೀಯರನ್ನು ಹೊಡೆದುರುಳಿಸಿದೆ. ನಾಲ್ವರು ನಕ್ಸಲೀಯರ ಮೃತದೇಹಗಳ ಜೊತೆಗೆ ಒಂದು AK-47 ಕಾರ್ಬೈನ್, ಎರಡು ದೇಶೀಯವಾಗಿ ತಯಾರಿಸಿದ ಪಿಸ್ತೂಲುಗಳು … Continued

ಆರ್‌ ಎಸ್‌ ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣ : ತಲೆಮರೆಸಿಕೊಂಡಿದ್ದ ಪ್ರಮುಖ ಪಿಎಫ್‌ಐ ಸದಸ್ಯನ ಬಂಧಿಸಿದ ಎನ್‌ಐಎ

ನವದೆಹಲಿ: 2022ರಲ್ಲಿ ಕೇರಳದಲ್ಲಿ ನಡೆದ ಆರ್‌ಎಸ್‌ಎಸ್‌ ಮುಖಂಡ ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ)ಯ ತಲೆಮರೆಸಿಕೊಂಡಿದ್ದ ಪ್ರಮುಖ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಬಂಧಿಸಿದೆ. ಆರೋಪಿಯನ್ನು ಶಫೀಖ್ ಎಂದು ಗುರುತಿಸಲಾಗಿದ್ದು, 2022 ರ ಏಪ್ರಿಲ್ 16 ರಂದು ಪಾಲಕ್ಕಾಡ್‌ನಲ್ಲಿ ಶ್ರೀನಿವಾಸನ್ ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ. ಮಲಪ್ಪುರಂ … Continued

ಶರದ್ ಪವಾರ್ ಬಣಕ್ಕೆ ನೂತನ ಚಿಹ್ನೆ ಬಳಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ :ಮುಂಬರುವ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ‘ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ ಶರದ್ ಚಂದ್ರ ಪವಾರ್ ಬಣವು ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ನೂತನ ಚಿಹ್ನೆಯನ್ನು ಬಳಸಲು ಇಂದು, ಮಂಗಳವಾರ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಶರದ್ ಪವಾರ್ ಬಣಕ್ಕೆ ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ಚಿಹ್ನೆಯನ್ನು ಕಾಯ್ದಿರಿಸುವಂತೆ ಭಾರತೀಯ ಚುನಾವಣಾ … Continued

ಸಿಎಎಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಏಪ್ರಿಲ್ 8 ರ ವರೆಗೆ ನ್ಯಾಯಾಲಯವು ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶವನ್ನು ನೀಡಿದೆ. ಈ ಕುರಿತು … Continued