₹300 ಕೋಟಿ ಬೇನಾಮಿ ಆಸ್ತಿ ಗಳಿಸಿದ ಆರೋಪ : ತೆಲಂಗಾಣದ ಉನ್ನತ ಪೊಲೀಸ್ ಅಧಿಕಾರಿ ಎಸಿಬಿ ಬಲೆಗೆ

ಹೈದರಾಬಾದ್ : ಆದಾಯಕ್ಕೆ ಮೀರಿದ ಆಸ್ತಿ (Disproportionate Assets) ಹೊಂದಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಸಂಜೆ ಪೊಲೀಸ್ ಕಂಪ್ಯೂಟರ್ ಸರ್ವಿಸಸ್‌ (ಪಿಸಿಎಸ್‌) ಡಿಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಕಿರೆಡ್ಡಿ ಭೀಮ ರೆಡ್ಡಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಿದೆ. ಆದಾಯ ಮೂಲಗಳನ್ನು ಮೀರಿ ಸುಮಾರು 300 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾದ … Continued

ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ; ಬ್ರಹ್ಮೋಸ್, ಅಸ್ತ್ರ ಕ್ಷಿಪಣಿಗಳ ಪೂರೈಕೆಗೆ ಭಾರತ–ಇಂಡೋನೇಷ್ಯಾ ಒಪ್ಪಂದ

ನವದೆಹಲಿ/ಜಕಾರ್ತಾ : ಭಾರತ ಮತ್ತು ಇಂಡೋನೇಷ್ಯಾ ನಡುವಿನ ರಕ್ಷಣಾ ಸಹಕಾರಕ್ಕೆ ಮಹತ್ವದ ಬಲ ದೊರೆತಿದ್ದು, ಇಂಡೋನೇಷ್ಯಾ ಸೇನೆಗೆ ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಪೂರೈಕೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ವೇಳೆ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮೂರು ರಾಷ್ಟ್ರಗಳ ಪ್ರವಾಸದ ಮೊದಲ … Continued

ಸುಳ್ಯ : ʼಭಾರತದ ಬ್ರಿಜ್‌ ಮ್ಯಾನ್‌’ ಖ್ಯಾತಿಯ ಡಾ.ಗಿರೀಶ ಭಾರದ್ವಾಜ ಇನ್ನಿಲ್ಲ

ಮಂಗಳೂರು : ಪದ್ಮಶ್ರೀ ಪುರಸ್ಕೃತ, ‘ಭಾರತದ ಬ್ರಿಜ್‌ ಮ್ಯಾನ್‌’ ಎಂದೇ ಖ್ಯಾತರಾಗಿದ್ದ ಗಿರೀಶ ಭಾರದ್ವಾಜ (76) ಅವರು ಮಂಗಳವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ 150ಕ್ಕೂ ಹೆಚ್ಚು ಪರಿಸರ ಸ್ನೇಹಿ, ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಹೊಸ … Continued

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ ರಾಜೀನಾಮೆ ಅಂಗೀಕಾರ; ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ ನೇಮಕ

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ರಾಮ ಮಂದಿರದ ದೇಣಿಗೆ ದುರುಪಯೋಗ ಆರೋಪಗಳ ನಡುವೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಹಾಗೂ ಟ್ರಸ್ಟಿ ಡಾ. ಅನಿಲ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಸೋಮವಾರ ತಿಳಿಸಿದ್ದಾರೆ. ಚಂಪತ್ … Continued

ಮೈ ಜುಂ ಎನ್ನುವ ವಿಡಿಯೋ : ದಾಳಿ ನಡೆಸಿ ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ ; ಪಾರಾಗಿದ್ದೇ ಪವಾಡ

ಭಾವನಗರ : ಗುಜರಾತಿನ ಭಾವನಗರ ಜಿಲ್ಲೆಯ ಪಾಲಿತಾಣ ತಾಲ್ಲೂಕಿನ ಗರಾಜಿಯಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸಿಂಹದ ದಾಳಿಯಲ್ಲಿ ಜಾನುವಾರು ಸಾಕಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಹವು ಸುಮಾರು ರೈತನನ್ನು ಸುಮಾರು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಭಾನುವಾರ ಬೆಳಿಗ್ಗೆ … Continued

ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಎನ್‌ಐಎ ಪೂರಕ ಚಾರ್ಜ್‌ಶೀಟ್‌ನಲ್ಲಿ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಹೆಸರು

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ (ಜುಲೈ 6) ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ (LeT) ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಪೂರಕ ಆರೋಪಪಟ್ಟಿಯಲ್ಲಿ ಆರೋಪಿಯಾಗಿ ಹೆಸರಿಸಿದೆ. ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹಫೀಜ್ ಸಯೀದ್‌ನನ್ನು ವೈಯಕ್ತಿಕ ಆರೋಪಿಯಾಗಿಯೂ, ನಿಷೇಧಿತ ಉಗ್ರ … Continued

ಪಾಕಿಸ್ತಾನ ಆಡಳಿತದಿಂದ ದಮನಕಾರಿ ಕ್ರಮ ; ನಮಗೆ ಭಾರತದ ಸಹಾಯ ಬೇಕು ಎಂದು ಪಿಒಕೆ ನಾಯಕರು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಮುಂದುವರಿದಿರುವ ಅಶಾಂತಿ ನಡುವೆ, ಇದುವರೆಗೆ ಹಲವಾರು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಜಂಟಿ ಅವಾಮಿ ಆಕ್ಷನ್ ಸಮಿತಿ (JAAC) ನಾಯಕ ಸರ್ದಾರ್ ಅಮನ್ ಖಾನ್ ಭಾರತ ಜತೆ ನಿಕಟ ಸಂಪರ್ಕ ಬೆಳೆಸುವಂತೆ ಜನತೆಗೆ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಪಾಕಿಸ್ತಾನ ಸರ್ಕಾರ ವ್ಯಾಪಕ ದಮನ ಕಾರ್ಯಾಚರಣೆ ನಡೆಸಿದ ಬಳಿಕ ಪಾಕಿಸ್ತಾನ … Continued