ಕರ್ನಾಟಕ ಬಜೆಟ್ 2024 : ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ, ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣದ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ಬಸವಣ್ಣನವರ ಬದುಕು, ಚಿಂತನೆಯನ್ನು ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜನೆ ಮಾಡಲಾಗುವುದು … Continued

ಕರ್ನಾಟಕ ಬಜೆಟ್ 2024 : ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಘೋಷಣೆ ; ‘ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ಜಮೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಹಾಗೂ ಕರ್ನಾಟಕದಿಂದ ಹೋಗುವ ಭಕ್ತರ ಅನುಕೂಲಕ್ಕೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಸಿ ವರ್ಗದ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಸ್ತಿಕ್ ಮೊತ್ತ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹೊರ ರಾಜ್ಯಗಳ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಾಣಸಿ ಮತ್ತು ಗುಡ್ಡಾಪುರಕ್ಕೆ … Continued

ಕರ್ನಾಟಕ ಬಜೆಟ್ 2024: ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು..?

 ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಸಾಕಷ್ಟು ಯೋಜನೆಗಳನ್ನ ಘೋಷಿಸಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. … Continued

ಕರ್ನಾಟಕ ಬಜೆಟ್ 2024-25:ಗಾತ್ರ ₹3.71 ಲಕ್ಷ ಕೋಟಿ ; ಬಿಯರ್‌ ದುಬಾರಿ, ಮೊದಲ ಬಾರಿಗೆ ಸಮುದ್ರ ಆ್ಯಂಬುಲೆನ್ಸ್‌ ಪರಿಚಯ- ಬಜೆಟ್‌ ಮುಖ್ಯಾಂಶಗಳು…

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯದ ಬಜೆಟ್‌ ಮಂಡನೆ ಮಾಡಿದ್ದು, 2024-2025ರ ಕರ್ನಾಟಕ ಬಜೆಟ್‌ ಗಾತ್ರ 3.71383 ಲಕ್ಷ ಕೋಟಿ ಎಂದು ತಿಳಿಸಿದ್ದಾರೆ. ಇದು 2023ರಲ್ಲಿ ಸಿದ್ದರಾಮಯ್ಯ ಮಂಡಿಸಿದ 3.27 ಲಕ್ಷ ಕೋಟಿಗಿಂತ ಇದು ಹೆಚ್ಚಾಗಿದೆ. 2024-25ರ ಆಯವ್ಯಯದಲ್ಲಿ ಒಟ್ಟು 3,68,674 ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜು ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2024-25ನೇ … Continued

ಸೆಲ್ಫಿ ಹುಚ್ಚಿಗೆ ಮೃಗಾಲಯದ ಸಿಂಹದ ಆವರಣಕ್ಕೆ ನುಗ್ಗಿದ ವ್ಯಕ್ತಿ : ಸಿಂಹದ ದಾಳಿಯಿಂದ ದುರಂತ ಅಂತ್ಯ…

ಹೈದರಾಬಾದ್‌ : ದುರಂತ ಘಟನೆಯೊಂದರಲ್ಲಿ, ಗುರುವಾರ ಮಧ್ಯಾಹ್ನ ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬ ಮಾಡಿಕೊಂಡ ಯಡವಟ್ಟಿನಿಂದ ಗಂಡು ಸಿಂಹವು ದಾಳಿ ಮಾಡಿ ಆತನನ್ನು ಕೊಂದ ಘಟನೆ ವರದಿಯಾಗಿದೆ. ಅಮಲೇರಿದ ಸ್ಥಿತಿಯಲ್ಲಿದ್ದ ಮೃತ ರಾಜಸ್ಥಾನದ ಪ್ರಹ್ಲಾದ ಗುಲ್ಜಾರ್ ಎಂಬ ವ್ಯಕ್ತಿ ಸಿಂಹಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮೃಗಾಲಯದ ನಿಷೇಧಿತ ಆವರಣವನ್ನು ಪ್ರವೇಶಿಸಿದ್ದಾರೆ. ಈ ಆವರಣಗಳು … Continued

ದೆಹಲಿ ಪೇಂಟ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ : 11 ಮಂದಿ ಸಾವು, ಮತ್ತಿಬ್ಬರು ಸಿಲುಕಿರುವ ಶಂಕೆ

ನವದೆಹಲಿ : ದೆಹಲಿಯ ಅಲಿಪುರ ಪ್ರದೇಶದ ಪೇಂಟ್‌ ಗುರುವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಜನ ಮೃತಪಟ್ಟಿದ್ದಾರೆ., ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಟ್ಟಡದೊಳಗೆ ಇನ್ನೂ ಇಬ್ಬರು ವ್ಯಕ್ತಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಮೃತರ ದೇಹಗಳನ್ನು ಬಾಬು ಜಗಜೀವನ ರಾಮ ಆಸ್ಪತ್ರೆಗೆ ರವಾನಿಸಲಾಗಿದೆ. ದೆಹಲಿ ಅಗ್ನಿಶಾಮಕ ಸೇವಾ ಮುಖ್ಯಸ್ಥ … Continued

ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ. ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, … Continued

ಮಹಾರಾಷ್ಟ್ರ: ಮಾಜಿ ಸಿಎಂ ಅಶೋಕ ಚವಾಣ ಪಕ್ಷ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರು ಗೈರು…!

ಮುಂಬೈ: ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಮಹಾರಾಷ್ಟ್ರದಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಶಾಸಕರ ಸಭೆಗೆ ಕನಿಷ್ಠ ಐವರು ಶಾಸಕರು ಹಾಜರಾಗಲಿಲ್ಲ ಎಂದು ವರದಿಯಾಗಿದೆ. ಇದು ಇನ್ನೂ ಅನೇಕ ಶಾಸಕರು ಬಿಜೆಪಿಗೆ ಪಕ್ಷಾಂತರವಾಗಬಹುದು ಎಂಬ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕರಾದ ಜೀಶನ್ ಸಿದ್ದಿಕ್ (ಬಾಂದ್ರಾ ಪೂರ್ವ), … Continued

2022ರ ವರೆಗೆ ₹ 16,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳು ಮಾರಾಟ : ಬಿಜೆಪಿಗೆ ಸಿಂಹ ಪಾಲು ; ಯಾವ ಪಕ್ಷಗಳು ಪಡೆದದ್ದೆಷ್ಟು ಎಂಬುದು ಇಲ್ಲಿದೆ…

ನವದೆಹಲಿ: ಚುನಾವಣಾ ಬಾಂಡ್‌ಗಳು ಇದುವರೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ₹ 16,437.63 ಕೋಟಿ ಮೌಲ್ಯದ 28,030 ಎಲೆಕ್ಟೋರಲ್ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರಲ್ಲಿ ಸಿಂಹ ಪಾಲು ಬಿಜೆಪಿ ಪಾಲಾಗಿದೆ ಎಂದು ಅಂದಾಜಿಸಲಾಗಿದೆ. ಈಗ ರದ್ದಾದ ಚುನಾವಣಾ ಬಾಂಡ್ ಯೋಜನೆಯನ್ನು 2018ರಲ್ಲಿ ಪರಿಚಯಿಸಿದ ನಂತರ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ₹ 12,000 ಕೋಟಿಗೂ ಹೆಚ್ಚು ಹಣವನ್ನು … Continued

ತೃಣಮೂಲ ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ ಘೋಷಣೆ : ಮಮತಾ ಬ್ಯಾನರ್ಜಿಗೆ ಸಲ್ಲಿಕೆ

ಕೋಲ್ಕತ್ತಾ: ನಟಿಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಅವರು ತಮ್ಮ ಕ್ಷೇತ್ರದ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮಿಮಿ ಚಕ್ರವರ್ತಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ, ಆದರೆ ಅದನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಆದಾಗ್ಯೂ, ಅವರು … Continued