ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಖ್ ಮನೆ ಮೇಲೆ ಇಡಿ ದಾಳಿ

ನಾಗ್ಪುರ: ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಎರಡು ನಿವಾಸಗಳಲ್ಲಿ ಶೋಧ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಾರಿ ನಿರ್ದೇಶನಾಲಯದ ಎರಡು ಪ್ರತ್ಯೇಕ ತಂಡಗಳು ನಾಗ್ಪುರ ಜಿಲ್ಲೆಯಿಂದ ೬೦ ಕಿ.ಮೀ ದೂರದಲ್ಲಿರುವ ಕಟೋಲ್ ಪಟ್ಟಣದಲ್ಲಿರುವ ದೇಶ್ಮುಖ್ ಮನೆ ಮತ್ತು ಕಟೋಲ್ ಬಳಿಯ … Continued

ಭಾನುವಾರ ತೈಲಬೆಲೆ ಏರಿಕೆ ಶಾಕ್: ಡೀಸೆಲ್ ದರ ಹೆಚ್ಚಳ- ಪೆಟ್ರೋಲ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಒಂದು ಲೀಟರಿಗೆ 13 ರಿಂದ 18 ಪೈಸೆಯಷ್ಟು ಹೆಚ್ಚಳ ಮಾಡಿವೆ. ಆದರೆ, ಪೆಟ್ರೋಲ್ ದರ ಬದಲಾಗದೇ ಯಥಾಸ್ಥಿತಿಯಲ್ಲಿ ಉಳಿದಿದೆ. ಮೇ 4 ರಿಂದ ಇಂದಿನವರೆಗೆ 40 ಬಾರಿ ಇಂಧನ ದರ ಪರಿಷ್ಕರಣೆಯಾಗಿದೆ. ಈ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 11.14 ರೂ., … Continued

ಕೊರೊನಾ ೩ನೇ ಅಲೆಯಲ್ಲಿ ಮಕ್ಕಳಿಗೆ ಬ್ಲ್ಯಾಕ್ ಫಂಗಸ್ : ತಜ್ಞರ ಆತಂಕ

ಬೆಂಗಳೂರು: ಕೊರೋನಾ ಎರಡನೇ ಅಲೆಯ ಕೊನೆಯಲ್ಲಿ ಕಾಡಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಈಗಲೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮೂರನೇ ಅಲೆಯಲ್ಲಿ ಕೊರೋನಾಗೆ ಹೆಚ್ಚು ಬಾಧಿತರಾಗಲಿರುವ ಮಕ್ಕಳಿಗೂ ಈ ಬ್ಲ್ಯಾಕ್ ಫಂಗಸ್ ಕಾಟ ತಪ್ಪಿದ್ದಲ್ಲ ಎಂದು ತಜ್ಞ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ಬಾಧಿತರಾಗುವ ಸಾಧ್ಯತೆ ಇದೆ ಎಂಬ … Continued

ಮುಂಬಡ್ತಿ ನಿರೀಕ್ಷೆಯಲ್ಲಿದ್ದ 80 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿ..?

posted in: ರಾಜ್ಯ | 0

ಬೆಂಗಳೂರು: ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ೮೦ಸಾವಿರಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರಕಾ ಹಿಂಬಡ್ತಿ ನೀಡಿದೆ. ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ೨೫ ವರ್ಷಗಳಿಂದ ಬೋಧಿಸುತ್ತಿರುವ ಪದವೀಧರ ಶಿಕ್ಷಕರಿಗೆ ಹಿಂಬಡ್ತಿಯಾಗಿದೆ. ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪದನಾಮ ಬದಲಿಸಿದ ಕಾರಣದಿಂದ ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ೮೦ ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಇದರಿಂದ … Continued

ಕಂದಕಕ್ಕೆ ಉರುಳಿದ ಕಾಂಕ್ರೀಟ್ ಲಾರಿ: ಗದಗ ಮೂಲದ ಇಬ್ಬರು ಕಾರ್ಮಿಕರು ಸಾವು

posted in: ರಾಜ್ಯ | 0

ಮಡಿಕೇರಿ: ಜಿಲ್ಲೆಯ ಚೇರಂಬಾಣೆ ಕೊಳಗದಾಳು ಬಳಿಯ ಪಾಕ ರಸ್ತೆಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಕಾಂಕ್ರೀಟ್ ಲಾರಿ ಕಂದಕಕ್ಕೆ ಉರುಳಿ ಬಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಗದಗ ಮೂಲದ ಸಂತೋಷ್ ಭಂಡಾರಿ(೨೭) ಮತ್ತು ಪ್ರವೀಣ್(೨೧) ಮೃತರು. ಕಳೆದ ಎರಡು ದಿನಗಳಿಂದ ಮಳೆ ಕ್ಷೀಣಿಸಿದ್ದ ಹಿನ್ನೆಲೆಯಲ್ಲಿ ಚೇರಂಬಾಣೆ ಪಾಕ ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರೊಬ್ಬರು … Continued

ಕರ್ನಾಟಕದಲ್ಲಿ ಮಳೆ ಮುಂದುವರಿಕೆ :ಜುಲೈ 21ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಜೋರು

ಬೆಂಗಳೂರು: ಕೇರಳದಿಂದ ಮಹಾರಾಷ್ಟ್ರದೆಡೆಗೆ ವೇಗವಾದ ಸುಳಿಗಾಳಿ ಬೀಸುತ್ತಿದ್ದು, ಇದರ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಭಾನುವಾರ ಧಾರಾಕಾರ ಮಳೆ ಸುರಿಯಲಿದೆ. ಜೊತೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಈಗಾಗಲೇ ಕಳೆದೊಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜುಲೈ 21 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ … Continued

ಮಧ್ಯಪ್ರದೇಶ ಬಾವಿ ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಭೋಪಾಲ್: ಮಧ್ಯಪ್ರದೇಶದ ಭೋಪಾಲನ ವಿದಿಶಾದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15 ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದ ವೇಳೆ ಬಾವಿ ಕುಸಿದ ಪರಿಣಾಮ … Continued

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಓಪನ್: ೫,೦೦೦ ಜನರಿಗಷ್ಟೇ ಪ್ರವೇಶಕ್ಕೆ ಅವಕಾಶ

ತಿರುವನಂತಪುರ: ತಿಂಗಳದ ಐದು ದಿನಗಳ ಪೂಜೆಗಾಗಿ ಶನಿವಾರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ ೫,೦೦೦ ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ದೇಗುಲ ಆವರಣದಲ್ಲಿ … Continued

ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳ ಆರಂಭಕ್ಕೆ ಯುಜಿಸಿ ಸೂಚನೆ

ನವದೆಹಲಿ: ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಪದವಿ ಕಾಲೇಜುಗಳನ್ನು ಆರಂಭಿಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ, ಯುಜಿಸಿ ಮಾರ್ಗಸೂಚಿ ಪ್ರಕಾರ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷ, ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ ಲೈನ್, ಆಫ್ ಲೈನ್ ಅಥವಾ ಬ್ಲೆಂಡ್ ಮಾಡಿದ ಮೋಡ್ ನಲ್ಲಿ ಆಗಸ್ಟ್ 31 … Continued

ಮಹದಾಯಿ ಹೋರಾಟಕ್ಕೆ ಏಳು ವರ್ಷ: ಕಪ್ಪುಪಟ್ಟಿ ಧರಿಸಿ ರೈತರ ಮೌನ ಪ್ರತಿಭಟನಾ ರ‍್ಯಾಲಿ

posted in: ರಾಜ್ಯ | 0

ಗದಗ: ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಜುಲೈ ೧೬ಕ್ಕೆ ಏಳನೇ ವರ್ಷಕ್ಕೆ ಕಾಲಿಟ್ಟಿದೆ. ೭ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಶುಕ್ರವಾರ ನರಗುಂದ ಪಟ್ಣಣದಲ್ಲಿ ರೈತರ ಮೌನ ಪ್ರತಿಭಟನಾ ರ‍್ಯಾಲಿ ನಡೆಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪುಬಾವುಟ ಪ್ರದರ್ಶಿಸಿದ ರೈತ ಮುಖಂಡರು ರೈತಸೇನಾ … Continued