ಸರ್ಕಾರಿ ಶಾಲೆ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣ ಕ್ರಮವಾಗಿ, ಅನೇಕ ಶಿಕ್ಷಕರು ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಹೀಗೆ ರಜಾ ಅವಧಿಯಲ್ಲಿ ಕೋವಿಡ್ ಕಾರ್ಯಗಳಿಗೆ ನಿಯೋಜಿಸಿರುವ ಶಿಕ್ಷಕರುಗಳಿಗೆ ಬಿಎಲ್‌ಓಗಳ ಮಾದರಿಯಲ್ಲಿ ಗಳಿಕೆ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ … Continued

ಮೇಕೆದಾಟು: ವಿಧಾನಸೌಧದ ವರೆಗೆ ಪಾದಯಾತ್ರೆಗೆ ರೈತರ ನಿರ್ಧಾರ

posted in: ರಾಜ್ಯ | 0

ರಾಮನಗರ: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಮನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಕನಕಪುರದ ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಆಗಸ್ಟ್ ೩ ರಿಂದ ೭ ನೇ ತಾರೀಖಿನವರೆಗೆ ೫ ದಿನಗಳ ಕಾಲ ರೈತರಿಂದ ಪಾದಯಾತ್ರೆ ನಡೆಯಲಿದೆ ಎಂದು ರಾಮನಗರದ ಎಪಿಎಂಸಿ ಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು ರಾಜ್ಯ … Continued

ರಾಜ್ಯಗಳಿಗೆ ೭೫,೦೦೦ ಕೋಟಿ ರೂ. ಜಿಎಸ್ಟಿ ಪರಿಹಾರ ಬಿಡುಗಡೆ

ನವದೆಹಲಿ: ಜಿ.ಎಸ್.ಟಿ. ಆದಾಯದ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ  ೭೫,೦೦೦ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಪರಿಹಾರ ನಿಧಿಯಲ್ಲಿ ಅಸಮರ್ಪಕ ಮೊತ್ತದ ಕಾರಣ ಪರಿಹಾರದ ಅಲ್ಪಾವಧಿಯ ಬಿಡುಗಡೆಯಿಂದಾಗಿ ಸಂಪನ್ಮೂಲ ಅಂತರವನ್ನು ಪೂರೈಸಲು ೧.೫೯ ಲಕ್ಷ ಕೋಟಿ ಸಾಲ ಪಡೆದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲು ಮೇ ೨೮ … Continued

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪೈಲಟ್ ತರಬೇತಿ ಕೇಂದ್ರ ಸ್ಧಾಪನೆಗೆ ಒಪ್ಪಂದ

posted in: ರಾಜ್ಯ | 0

ಕಲಬುರಗಿ: ಹೈದರಾಬಾದ್ ಮೂಲದ ಏಷ್ಯಾ ಪೆಸಿಫಿಕ್ ಫ್ಲೈಟ್ ಟ್ರೈನಿಂಗ್ (ಎಪಿಎಫ್‌ಟಿ) ಕರ್ನಾಟಕದ ಕಲಬುರಗಿ ವಿಮಾನ ನಿಲ್ದಾಣದಲ್ಲಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಅನುಮೋದಿತ ವಾಯುಯಾನ ಅಕಾಡೆಮಿಯು ಇತ್ತೀಚೆಗೆ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಯೊಂದಿಗೆ ವಿನ್ಯಾಸ, ನಿರ್ಮಾಣ, ಕಾರ್ಯಾಚರಣೆ, ನಿರ್ವಹಣೆ ಮತ್ತು ವರ್ಗಾವಣೆ (ಡಿಬಿಒಎಂಟಿ) ಕುರಿತು ವಿಮಾನ … Continued

ರಾಜ್ಯದಲ್ಲಿ ಮಳೆ ಅಬ್ಬರ, ಉಕ್ಕಿ ಹರಿಯುತ್ತಿರುವ ನದಿಗಳು; ಬೆಳೆನಾಶದ ಆತಂಕದಲ್ಲಿ ರೈತರು

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತ, ರಸ್ತೆ ವಾಹನ ಸಂಚಾರ ಸ್ಥಗಿತ ಸೀರಿದಂತೆ ಬಹುತೇಕ ಹಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಕ್ಕೆ ಜನರು ತೊಂದರೆಯಲ್ಲಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, … Continued

ಜಿಪಂ-ತಾಪಂ ಚುನಾವಣೆ ಡಿಸೆಂಬರ್ ವರೆಗೆ ಮುಂದೂಡಲು ರಾಜ್ಯ ಸಂಪುಟ ಸಭೆ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರಕಾರ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವ ನಿರ್ಣಯವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನವಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿತ್ತು.    ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳನ್ನು  ಡಿಸೆಂಬರ್ … Continued

ಸಹಕಾರಿ ಸಂಸ್ಥೆಗಳ ಚುನಾವಣೆ, ಎಲ್ಲ ಜಿಲ್ಲೆಗಳಲ್ಲೂ ಗೋಶಾಲೆ ಸ್ಥಾಪನೆಗೆ ಸಂಪುಟ ಸಭೆ ಒಪ್ಪಿಗೆ

posted in: ರಾಜ್ಯ | 0

 ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ. ಎಲ್ಲಾ ಜಿಲ್ಲೆಗಳಲ್ಲಿ ಗೋ ಶಾಲೆಗಳನ್ನು ತೆರೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮೀಸಲಾತಿ ಮತ್ತೆ ಹೈಕೋರ್ಟ್‌ ಅಂಗಳಕ್ಕೆ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸರಕಾರ ನಿಗದಿ ಪಡಿಸಿದ್ ಮೀಸಲಾತಿ ಮತ್ತು ಮತದಾರರ ಹಂಚಿಕೆ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹೈಕೋರ್ಟ ಧಾರವಾಡ ಪೀಠದ ಮೊರೆ ಹೋಗಿದ್ದು, ಎರಡೂವರೆ ವರ್ಷಗಳಿಂದಲೂ ಚುನಾವಣೆ ನಡೆಯದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ ಇದೆ. ಎರಡೂವರೆ ವರ್ಷಗಳಿಂದ ಮಹಾನಗರ ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳೇ … Continued

ವರದಕ್ಷಿಣೆ ಪಿಡುಗು ವಿರುದ್ಧ ಜಾಗೃತಿಗೆ ಕೇರಳ ರಾಜ್ಯಪಾಲರಿಂದ ಉಪವಾಸ

ತಿರುವನಂತಪುರ: ವರದಕ್ಷಿಣೆ ಪಿಡುಗು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದಲೇ ಕೇರಳ ರಾಜ್ಯದ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ತಿರುವನಂತಪುರದ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನ ಉಪವಾಸ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ … Continued

ಶೇ.30 ರಷ್ಟು ಪಠ್ಯ ಕಡಿತಕ್ಕೆ ರಾಜ್ಯ ಶಿಕ್ಷಣ ಇಲಾಖೆ ತೀರ್ಮಾನ

posted in: ರಾಜ್ಯ | 0

ಬೆಂಗಳೂರು: ರಾಜ್ಯಕ್ಕೆ ಕೊರೋನಾ ಕಾಲಿಟ್ಟ ನಂತರ ಶೈಕ್ಷಣಿಕ, ಆರ್ಥಿಕ, ಕೈಗಾರಿಕೆಗಳು, ಮೂಲಸೌಲಭ್ಯಗಳ ಅಭಿವೃದ್ದಿ ಸಂಪೂರ್ಣ ಕುಂಠಿತಗೊಂಡಿದೆ. ಶೈಕ್ಷಣಿಕ ವಿಷಯದಲ್ಲಂತೂ ವಿದ್ಯಾರ್ಥಿಗಳಿಗೆ, ಪಾಲಕರಿಗೆ ತೀರಾ ತೊಂದರೆಯಾಗಿದೆ. ಕೊರೋನಾದಿಂದಾಗಿ ಇನ್ನೂ ಭೌತಿಕ ತರಗತಿಗಳು ಆರಂಭವಾಗದ ಹಿನ್ನಲೆಯಲ್ಲಿ ಈ ವರ್ಷವೂ ಪಠ್ಯ ಕಡಿತಕ್ಕೆ ರಾಜ್ಯ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಕಳೆದ ವರ್ಷ ಆಫ್ ಲೈನ್ ತರಗತಿಗಳು ತಡವಾಗಿ ಆರಂಭವಾದ ಹಿನ್ನಲೆಯಲ್ಲಿ … Continued