ನವದೆಹಲಿ: ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ)ಯಲ್ಲಿ ನಡೆಯುತ್ತಿರುವ ಅಧಿಕಾರದ ಜಗಳದ ನಡುವೆ, ನಾಗಾಲ್ಯಾಂಡ್‌ನ ಎಲ್ಲಾ ಏಳು ಪಕ್ಷದ ಶಾಸಕರು ಬಂಡಾಯ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರಗೆ ಬೆಂಬಲ ಘೋಷಿಸಿದ್ದಾರೆ.
ಚರ್ಚೆ ಮತ್ತು ಸಮಾಲೋಚನೆಯ ನಂತರ, ನಾಗಾಲ್ಯಾಂಡ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸಂಪೂರ್ಣ ರಾಜ್ಯ ಕಾರ್ಯಕಾರಿಣಿ ಮತ್ತು ಜಿಲ್ಲೆಗಳ ಪದಾಧಿಕಾರಿಗಳು ಅಜಿತ ಪವಾರ್ ಮತ್ತು ಪ್ರಫುಲ್ ಪಟೇಲ್ ನೇತೃತ್ವದಲ್ಲಿ ಕೆಲಸ ಮಾಡಲು ನಿರ್ಧರಿಸಿರುವುದಾಗಿ ಶಾಸಕರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಅಜಿತ ಪವಾರ್ ಎನ್‌ಸಿಪಿ ವಿಭಜನೆಗೆ ಕಾರಣರಾದರು ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಬಂಡಾಯವೆದ್ದರು. ಜುಲೈ 2 ರಂದು, ಅಜಿತ ಪವಾರ್ ಮತ್ತು ಎಂಟು ಎನ್‌ಸಿಪಿ ಶಾಸಕರು ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಅಚ್ಚರಿಯ ನಡೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿಯಲ್ಲಿ ವಿಭಜನೆಗೆ ಕಾರಣವಾಯಿತು. ಅಜಿತ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು ಈಗ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಅವರು ಆ ಹುದೆಯನ್ನು ಹಂಚಿಕೊಂಡಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ನಾಯಕರಾದ ಛಗನ್ ಭುಜಬಲ್, ಧನಂಜಯ್ ಮುಂಡೆ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಸೇರಿದಂತೆ ಇತರ ಎಂಟು ಎನ್‌ಸಿಪಿ ಶಾಸಕರು ಅಜಿತ್ ಪವಾರ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮದೇ ನಿಜವಾದ ಎನ್‌ಸಿಪಿ(NCP) ಎಂದು ಅಜಿತ ಪವಾರ್ ಪ್ರತಿಪಾದಿಸಿದ್ದಾರೆ. ಪಕ್ಷದ ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರ ಬೆಂಬಲವನ್ನು ಪಡೆದರು. ಆದಾಗ್ಯೂ, ಶರದ್ ಪವಾರ್ ಅವರು “ತಮ್ಮದೇ ನಿಜವಾದ ಎನ್‌ಸಿಪಿ” ಎಂದು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. ಅಲ್ಲದೆ “ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ” ಹಲವಾರು ಹಿರಿಯ ನಾಯಕರನ್ನು ಅವರು ಉಚ್ಚಾಟನೆ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ