ಕರ್ನಾಟಕ ಮುಂದಿನ ಮುಖ್ಯಮಂತ್ರಿ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ, ಅಚ್ಚರಿ ಆಯ್ಕೆ..?

ಬೆಂಗಳೂರು: ಮುಂದಿನ ಕರ್ನಾಟಕ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿದ್ದಂತೆ, ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಹೆಸರೂ ಈಗ ಮುಂಚೂಣಿಗೆ ಬಂದಿದೆ. ಯಾರು ಎಂಬುದು ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಮೂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬುದು ಅಧಿಕೃತವಾಗಬಹುದು ಎನ್ನಲಾಗಿದೆ.
ಸಂತೋಷ ಅವರ ಜೊತೆಗೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹಾಗೂ ಕೇಂದ್ರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೆಸರೂ ಪ್ರಮುಖವಾಗಿ ಕೇಳಿಬರುತ್ತಿವೆ.
ಸಂತೋಷ್ (54) ದಾವಣಗೆರೆ ಎಂಜಿನಿಯರಿಂಗ್ ಕಾಲೇಜಿನಿಂದ ಪ್ರತಿಭಾನ್ವಿತ ವಿದ್ಯಾರ್ಥಿ ಮತ್ತು ಎಂಜಿನಿಯರಿಂಗ್ ಪದವೀಧರರು. ಕರ್ನಾಟಕದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಎರಡು ವರ್ಷಗಳ ಹಿಂದೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ) ಕಾರ್ಯನಿರ್ವಹಿಸುತ್ತಿದ್ದಾರೆ.
ಅವರನ್ನು ಪಕ್ಷದ ವಲಯಗಳಲ್ಲಿ ಸಂತೋಷ್‌ ಜಿ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಸಂತೋಷ್ ಸೋಮವಾರ ಬೆಂಗಳೂರಿಗೆ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರ ಹೊರತಾಗಿ ಸ್ವಚ್ಛ ಇಮೇಜ್‌ ಹೊಂದಿರುವ ಅರವಿಂದ ಬೆಲ್ಲದ ಅವರು ಹೆಸರು ಸಹ ಪ್ರಬಲವಾಗಿ ಕೇಳಿಬರುತ್ತಿದೆ. ಇವರಿಬ್ಬರಲ್ಲಿ ಒಬ್ಬರು ಆಗಬಹುದು ಎಂದು ಹೇಳಲಾಗುತ್ತಿದೆ. ಇವರು ಕೂಡ ಇಂಜಿನಿಯರಿಂಗ್‌ ಪದವೀಧರರು. ಹುಬ್ಬಳ್ಳಿ -ಧಾರವಾಡದಲ್ಲಿ ವಿಶೇಷವಾಗಿ ಆಟೋಮೊಬೈಲ್‌ ಕ್ಷೇತ್ರದಲ್ಲಿ ಬೆಲ್ಲದ ಸಮೂಹ ಸಂಸ್ಥೆ ಹೊಂದಿದ್ದಾರೆ. ಇವರು ಕೂಡ ಆರೆಸ್ಸೆಸ್‌ ಬೆಂಬಲ ಪಡೆದವರು ಎಂದು ಹೇಳಲಾಗಿದೆ.
ಹೊಸದಾಗಿ ಮುಂಚೂಣಿಗೆ ಬಂದಿದ್ದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರದ್ದು. ಇವರಿಗೆ ಬಿ.ಎಸ್‌.ಯಡಿಯೂರಪ್ಪ ಅವರ ಬೆಂಬಲವಿದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ.ಬೈ.ರಾಘವೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಮುಖ್ಯಮಮತ್ರಿ ಸ್ಥಾನಕ್ಕೆ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ಮಾದರಿಯಲ್ಲಿ ಅಚ್ಚರಿ ಅಭ್ಯರ್ಥಿಯನ್ನು ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ. ಇದಕ್ಕೋ ಮೊದಲು ದೆಹಲಿಯಿಂದ ನಿನ್ನೆ (ಸೋಮವಾರ) ರಾತ್ರಿ ವಾಪಸ್ಸಾಗಿರುವ ಸಚಿವ ಮುರುಗೇಶ ನಿರಾಣಿಯವರು ಸಹ ಹೇಳಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿಯ ಅಭ್ಯರ್ಥಿಯ ಆಯ್ಕೆಯೂ ನಡೆಯಬಹುದು ಎಂದು ಹೇಳಿದ್ದಾರೆ.
ಇವರಿಬ್ಬರ ಈ ಹೇಳಿಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್‌.ಸಂತೋಷ ಹಾಗೂ ಶಾಸಕ ಅರವಿಂದ ಬೆಲ್ಲದ ಇಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬಹುದು ಎಂಬುದಕ್ಕೆ ಪುಷ್ಟಿ ನೀಡುವಂತಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ರಾಜ್ಯದ ಸಚಿವ ಮುರುಗೇಶ ನಿರಾಣಿ ಅವರ ಹೆಸರೂ ಸಹ ಚಾಲ್ತಿಯಲ್ಲಿದೆ.
ಇಂದು ಮಧ್ಯಾಹ್ನ ಬಿಜೆಪಿ ವರಿಷ್ಠರ ಆಗಮನ:
ಮಂಗಳವಾರ ಮಧ್ಯಾಹ್ನ ಕರ್ನಾಟಕದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ, ಕಿಶನ್‌ ರೆಡ್ಡಿ, ಹಾಗೂ ಬಿಜೆಪಿ ನಾಯಕ ಡಿ.ಕೆ.ಅರುಣ್‌ ಅವರು ಆಗಮಿಸುತ್ತಿದ್ದಾರೆ. ಹೀಗಾಗಿ ಇವತ್ತು ಸಂಜೆಯೇ ಮುಖ್ಯಮಂತ್ರಿ ಅಭ್ಯರ್ಥಿಗಳ ಆಯ್ಕೆ ಆಗಬಹುದು ಎಂದೂ ಹೇಳಲಾಗುತ್ತಿದೆ. ಬೆಂಗಳೂರಿನ ಕ್ಯಾಪಿಟಲ್‌ ಹೊಟೇಲಿನಲ್ಲಿ ಇಂದು ಸಂಜೆ 7ಕ್ಕೆ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈಗಾಗಲೇ ಬಿಜೆಪಿ ಹೈಕಮಾಂಡ್‌ ಈಗಾಗಲೇ ಹೆಸರು ಅಂತಿಮಗೊಳಿಸಿದ್ದು ಅದನ್ನು ಪಕ್ಷದ ವೀಕ್ಷಕರ ಜೊತೆಗೆ ಮುಚ್ಚಿದ ಲಕೋಟೆಯಲ್ಲಿ ಕಳುಹಿಸಲಾಗಿದೆ ಎಂದೂ ಹೇಳಲಾಗುತ್ತಿದೆ.ಅದರಲ್ಲಿ ಒಬ್ಬರ ಹೆಸರಿದೆಯೋ ಇಬ್ಬರ ಹೆಸರಿದೆಯೋ ಗೊತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಯಡಿಯೂರಪ್ಪ ಅವರ ಬಳಿಯೇ ಸೂಚಿಸುವಂತೆ ಹೇಳುವ ಸಾಧ್ಯತೆಯೀ ಇದೆ ಎಂದು ಹೇಳಲಾಗುತ್ತಿದೆ. ಯಡಿಯೂರಪ್ಪ ಅವರು ತಾನು ರಾಜ್ಯಪಾಲ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಹಾಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಹೇಳಿದ್ದರಿಂದ ಬಿಜೆಪಿ ಹೈಕಮಾಂಡ್‌ ಈಗ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಹೆಚ್ಚು ಗೌಪ್ಯತೆ ಕಾಪಾಡಿಕೊಂಡಂತೆ ಕಾಣುತ್ತಿದೆ. ಜೊತೆಗೆ ಮತ್ತೊಂದು ಬೆಳವಣಿಗೆ ನಡೆಯುವ ಮೊದಲು ಮುಂದಿನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಪೂರ್ನಗೊಳಿಸಿ ಮಂತ್ರಿ ಮಂಡಲ ರಚನೆ ಮಾಡುವ ತರಾತುರಿಯಲ್ಲಿದ್ದಂತೆ ಕಾಣುತ್ತಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement