ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಾದ್ಯಂತ ಸೆಪ್ಟಂಬರ್ 16ರಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 ದಿನ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೆಪ್ಟಂಬರ್ 16, 17 ಹಾಗೂ 18 ರಂದು ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಬೆಂಗಳೂರಲ್ಲಿ ಸೆಪ್ಟೆಂಬರ್ 18 ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಬುಧವಾರ ಯೆಲ್ಲೋ ಅರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಸೆಪ್ಟಂಬರ್ 16, 17 ಹಾಗೂ 18 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸೆಪ್ಟಂಬರ್18 ರಂದು ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement