ಬಿಜೆಪಿ-ಜೆಡಿಎಸ್‌ ಮೈತ್ರಿ : ಸೀಟು ಹಂಚಿಕೆ ಕುರಿತು ಮಾತುಕತೆ ನಡೆದಿಲ್ಲ, ಯಡಿಯೂರಪ್ಪ ಹೇಳಿಕೆ ಅವರ ವೈಯಕ್ತಿಕ ; ಬೇರೆ ಹೇಳಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು : ಬಿಜೆಪಿ ನಾಯಕ ಯಡಿಯೂರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಖಚಿತಪಡಿಸಿದ ಒಂದು ದಿನದ ನಂತರ, ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಸೀಟು ಹಂಚಿಕೆ ಕುರಿತು ಇನ್ನೂ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಶುಕ್ರವಾರ ನೀಡಿದ ಪ್ರತಿಕ್ರಿಯೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ, ಇಲ್ಲಿಯವರೆಗೆ, ಸೀಟು ಹಂಚಿಕೆ ಅಥವಾ ಯಾವುದರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ನಾವು 2 ಅಥವಾ 3 ಬಾರಿ ಸೌಹಾರ್ದಯುತವಾಗಿ ಭೇಟಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.
2024 ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಿಗೆ ಬರಲಿವೆ ಎಂದು ಮಾಜಿ ಮುಖ್ಯಮಂತ್ರಿ ದೃಢಪಡಿಸಿದರು. ಆಮೇಲೆ ಏನಾಗುತ್ತೋ ನೋಡೋಣ… ನಾವು ಒಟ್ಟಾಗಿ ಸೇರಿ ಜನರ ಮುಂದೆ ಚರ್ಚೆ ನಡೆಸುತ್ತಿದ್ದೇವೆ… ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡುತ್ತಿರುವುದರಿಂದ ಜನರಿಗೆ ಪರ್ಯಾಯ ಬೇಕಾಗಿದೆ…2006 ರಲ್ಲಿ ಬಿಜೆಪಿಯೊಂದಿಗೆ ನಾನು ಕೈ ಜೋಡಿಸಿದೆ. . ನನ್ನ 20 ತಿಂಗಳ ಆಡಳಿತದಿಂದಾಗಿ ನನ್ನ ಬಗ್ಗೆ ಸದಾಭಿಪ್ರಾಯ ಸೃಷ್ಟಿಯಾಯಿತು ಎಂದು ಅವರು ಹೇಳಿದರು.
ಯಡಿಯೂರಪ್ಪ ಏನು ಹೇಳಿದ್ದರು?
ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಅಮಿತ್‌ ಶಾ ಒಪ್ಪಿದ್ದಾರೆ. ನಾಲ್ಕು ಕ್ಷೇತ್ರಗಳ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದ್ದಾರೆ. ಜೆಡಿಎಸ್‌-ಬಿಜೆಪಿ ಮೈತ್ರಿಯಿಂದ ಖುಷಿಯಾಗಿದೆ. ಜೆಡಿಎಸ್‌ ಜೊತೆಗಿನ ಮೈತ್ರಿಯಿಂದ ನಮಗೆ ಶಕ್ತಿ ಬರುತ್ತದೆ. ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೀಟು ಹಂಚಿಕೆಯ ಪ್ರಸ್ತಾಪ ಆಗಿಲ್ಲ, ಅದು ಯಡಿಯೂರಪ್ಪ ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement