ಕರ್ನಾಟಕಕ್ಕೆ ಬಂತು ೪ ಲಕ್ಷ ಲಸಿಕೆ, ಇನ್ನೂ ಬರಲಿದೆ ೧೨ಲಕ್ಷ

ಬೆಂಗಳೂರು : ಬುಧವಾರ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಬಂದಿದೆ, ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ಬರಲಿದೆ. ರಾಜ್ಯದಲ್ಲಿ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲ ಅರ್ಹರು https://t.co/CHlvVxGVEP ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿ ತಮ್ಮ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆಯಬೇಕೆಂದು ಮನವಿ ಮಾಡಿದ್ದಾರೆ.
ಲಸಿಕೆ ಹಾಕಿಸಿದರೂ ಕೊರೊನಾ ಮುನ್ನೆಚ್ಚರಿಕೆ ಪಾಲಿಸಬೇಕು. ಕಳೆದ ವರ್ಷ ಕೊರೊನಾ ವೈರಾಣುವಿನ ಮೊದಲ ಅಲೆ ಅಪ್ಪಳಿಸಿದಾಗ ಲಸಿಕೆ ನಮಗೆ ಒಂದು ಆಶಾಕಿರಣವಾಗಿತ್ತು. ಈಗ ಅದು ವಾಸ್ತವವಾಗಿದೆ ಎಂದು ಹೇಳಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement