ನನ್ನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ನವಿಲು : ಅರಣ್ಯ ಇಲಾಖೆಗೆ ದೂರು ನೀಡಿದ ಮಹಿಳೆ…!

ರಾಮನಗರ : ತನ್ನ ಮೇಲೆ ನವಿಲೊಂದರ ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ ದೂರು ನೀಡಿರುವ ವಿದ್ಯಮಾನವೊಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರದ ಲಿಂಗಮ್ಮ ಎಂಬವರು ಜೂನ್‌ 28ರಂದು ತನ್ನ ಮೇಲೆ ನವಿಲೊಂದು ದಾಳಿ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ದೂರು ನೀಡಿದ್ದಾರೆ. ಈ ದೂರಿಗೆ ಕೆಲ ಗ್ರಾಮಸ್ಥರೂ ಸಹಿ ಮಾಡಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ನವಿಲೊಂದು ನಮ್ಮ ಮನೆ ಆಸುಪಾಸಿನಲ್ಲಿ ವಾಸಿಸುತ್ತಿದೆ. ಜೂನ್‌ 26ರಂದು ನಮ್ಮ ಮನೆಯ ಹಿಂದೆ ಕೆಲಸ ಮಾಡುತ್ತಿದ್ದಾಗ, ನನ್ನ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯ ಮಾಡಿದೆ. ಘಟನೆ ನಡೆದಾಗ ಸಂಜೆಯಾಗಿತ್ತು. ಗಾಯಗೊಂಡ ನಾನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮರುದಿನ ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದೇನೆ. ನವಿಲಿನ ದಾಳಿಯಿಂದ ಗಾಯಗೊಂಡ ಕಾರಣ ಸಾಕಷ್ಟುವೆಚ್ಚವಾಗಿದೆ. ಆದ್ದರಿಂದ ನವಿಲಿನ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನವಿಲಿನ ದಾಳಿಯಿಂದ ಲಿಂಗಮ್ಮ ಅವರ ಹಣೆ ಹಾಗೂ ತಲೆಗೆ ಗಾಯವಾಗಿದೆ ಎಂದು ಹೇಳಲಾಗಿದೆ. ನವಿಲು ಕಳೆದ ನಾಲ್ಕೈದು ದಿನಗಳಿಂದ ಮನೆಯ ಹಿಂಭಾಗದಲ್ಲಿ ವಾಸವಿರುವ ನವಿಲು ಕೆಲಸ ಮಾಡುತ್ತಿರುವಾಗ ಏಕಾಏಕಿ ದಾಳಿ ಮಾಡುತ್ತದೆಯಂತೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement